ಚನ್ನಮ್ಮನ ಕಿತ್ತೂರು: ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ. ಕೆ. ಶಿವಕುಮಾರ್ ಅವರು ಇಂದು ಬೆಳಗಾವಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕಿತ್ತೂರಿನ ಐತಿಹಾಸಿಕ ಕೋಟೆ ಆವರಣದಲ್ಲಿ ಆಯೋಜಿಸಿದ್ದ ಚನ್ನಮ್ಮನ ಕಿತ್ತೂರು ಉತ್ಸವ–2026ರ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.
ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯನ್ನು ಕಿತ್ತೂರು ರಾಣಿ ಚನ್ನಮ್ಮ ಸಾರಿಗೆ ಸಂಸ್ಥೆ ಎಂದು ಮರುನಾಮಕರಣ ಮಾಡಲಾಗುವುದು.
ಚನ್ನಮ್ಮ ಫ್ರೀಡಂ ಪಾರ್ಕ್ ನಿರ್ಮಾಣಕ್ಕೆ ತಕ್ಷಣವೇ ಆದೇಶ ನೀಡಲಾಗುವುದು. ಶಾಸಕರ ಬೇಡಿಕೆ ಮೇರೆಗೆ ಮುಂದಿನ ಬಜೆಟ್ನಲ್ಲಿ ₹40 ಕೋಟಿ ಅನುದಾನ ನೀಡಲಾಗುವುದು ಎಂದು ತಿಳಿಸಿದರು…
ನಾನು ನೀರಾವರಿ ಸಚಿವನಾಗಿದ್ದಾಗ ಈ ಭಾಗದ ರೈತರ ಬದುಕಿಗೆ ಶ್ರೀ ಚನ್ನವೃಷಭೇಂದ್ರ ಅವರ ಹೆಸರಲ್ಲಿ ಏತ ನೀರಾವರಿ ಯೋಜನೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ. 520 ಕೋಟಿ ರೂ. ಮೊತ್ತದ ಯೋಜನೆಗೆ ಸರ್ಕಾರ ಚಿಂತನೆ ನಡೆಸಿದೆ. ಈ ಕ್ಷೇತ್ರದಲ್ಲಿ 100 ಹಾಸಿಗೆಗಳ ಆಸ್ಪತ್ರೆ, 300 ಕೋಟಿ ರೂಪಾಯಿ ಮೊತ್ತದ ಲೋಕೋಪಯೋಗಿ ಇಲಾಖೆ ಕಾಮಗಾರಿ ಸೇರಿದಂತೆ ಸುಮಾರು 1000 ಕೋಟಿ ವೆಚ್ಚದ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ.
ಕಿತ್ತೂರಿಗೆ ತನ್ನದೇ ಆದ ಇತಿಹಾಸವಿದೆ. ಚನ್ನಮ್ಮ ಕನ್ನಡದ ಮಣ್ಣಿಗಾಗಿ ಮಡಿದ ದಿಟ್ಟ ಹೋರಾಟಗಾರ್ತಿ. ಕಿತ್ತೂರಿನ ಕಥೆ ಚನ್ನಮ್ಮ ಅವರ ಇತಿಹಾಸ ಸಾರುತ್ತದೆ, ಸ್ವಾಭಿಮಾನದ ಮಹಿಮೆ. ರಾಣಿ ಚನ್ನಮ್ಮನ ಧೈರ್ಯ ಪ್ರತಿ ಪೀಳಿಗೆಗೆ ಸ್ವಾಭಿಮಾನದ ಪಾಠ. ಕಿತ್ತೂರು ಎಂದರೆ ವೀರರ ಸಂಕೇತ. ಕಿತ್ತೂರು ಉತ್ಸವ ನಾಡಿನ ಹೆಮ್ಮೆಯ ಸಂಕೇತ. ಚನ್ನಮ್ಮನ ಸಾಹಸ ನಮ್ಮೆಲ್ಲರ ಸ್ಫೂರ್ತಿ, ಅವರ ತ್ಯಾಗದ ನೆನಪು ಅಜರಾಮರ. ಚನ್ನಮ್ಮ ಎಂಬುದು ಕೇವಲ ಹೆಸರಲ್ಲ ಸ್ವಾಭಿಮಾನ, ಶೌರ್ಯ, ಸ್ವಾತಂತ್ರ್ಯದ ಸಂಕೇತ ಎಂದು ತಿಳಿಸಿದರು..
ರಾಜ್ಯದಲ್ಲಿ ಶಾಂತಿಯುತ ಉತ್ತಮ ಆಡಳಿತ ನೀಡುತ್ತಿದ್ದೇವೆ. ಈ ಕ್ಷೇತ್ರದ ಶಾಸಕರ ಜೊತೆ ಇಡೀ ಸರ್ಕಾರ ಇದೆ. ಇಲ್ಲಿನ ಸುವರ್ಣ ಸೌಧದಲ್ಲಿ ಗಾಂಧೀಜಿ ಪ್ರತಿಮೆ ಅನಾವರಣ ಮಾಡಿದೆವು. ಸಮಾನತೆಯಿಂದ ಬೆಳೆಯಲು, ಪ್ರಜಾಪ್ರಭುತ್ವ ಮೌಲ್ಯ ಎತ್ತಿ ಹಿಡಿಯಲು ಕಾರ್ಯಕ್ರಮ ರೂಪಿಸಿದ್ದೇವೆ. ಕರ್ನಾಟಕದ ನೆಲ ಬಸವಣ್ಣನವರ ಕಾಯಕ, ದಾಸೋಹ ಹಾಗೂ ಸಮಾನತೆಯ ಸಂದೇಶವನ್ನು ಜಗತ್ತಿಗೆ ಸಾರಿದೆ.
ಈ ಕಾರ್ಯಕ್ರಮದಲ್ಲಿ ರಾಜಗುರು ಸಂಸ್ಥಾನ ಕಲ್ಮಠದ ಶ್ರೀ ಮಡಿವಾಳ ರಾಜಯೋಗೀಂದ್ರ ಮಹಾಸ್ವಾಮಿಗಳು, ಶ್ರೀಗುರು ಮಡಿವಾಳೇಶ್ವರ ಮಠದ ಶ್ರೀ ಪಂಚಾಕ್ಷರಿ ಮಹಾಸ್ವಾಮಿಗಳು, ಕಾದರವಳ್ಳಿ ಸೀಮಿ ಮಠದ ಪಾಲಾಕ್ಷ ಶಿವಯೋಗೀಶ್ವರ ಸ್ವಾಮೀಜಿಗಳು, ಬೈಲೂರು ನಿಷ್ಕಲಮಂಟಪ ಮಠದ ನಿಜಗುಣಾನಂದ ಸ್ವಾಮೀಜಿಗಳು, ಸಚಿವರಾದ ಶ್ರೀ ರುದ್ರಪ್ಪ ಲಮಾಣಿ, ಶ್ರೀ ಎಸ್.ಎಸ್.ಮಲ್ಲಿಕಾರ್ಜುನ, ವಿಧಾನಸಭೆಯ ಆಡಳಿತ ಪಕ್ಷದ ಮುಖ್ಯ ಸಚೇತಕರಾದ ಶ್ರೀ ಅಶೋಕ್ ಪಟ್ಟಣ್, ಶಾಸಕರಾದ ಶ್ರೀ ಬಾಬಾಸಾಹೇಬ್ ಪಾಟೀಲ್, ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರ್, ಶ್ರೀ ಆಸೀಫ್ ರಾಜು ಸೇಠ್, ಶ್ರೀ ಎನ್.ಎಚ್. ಕೋನರಡ್ಡಿ, ಶ್ರೀ ಮಹಾಂತೇಶ್ ಕೌಜಲಗಿ, ಶ್ರೀ ವಿಶ್ವಾಸ್ ವೈದ್ಯ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಚನ್ನರಾಜ ಹಟ್ಟಿಹೊಳಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಸಂಪಾದಕರು: ರಾಮಚಂದ್ರಪ್ಪ ಪೂಜೇರ(ಚನ್ನಮ್ಮನ ಕಿತ್ತೂರು)

