KRGRV
Friday, October 16, 2026
Homeಬೆಂಗಳೂರುಹಸ್ತಾಂತರಗೊಂಡ ಗ್ರಾ.ಪಂ. ಬ್ಯಾಂಕ್ ಖಾತೆಗಳಲ್ಲಿ ವಹಿವಾಟು ಆರೋಪ: ಸಮಗ್ರ ತನಿಖೆಗೆ ಸಚಿವ ಈಶ್ವರ ಖಂಡ್ರೆ ಆದೇಶ

ಹಸ್ತಾಂತರಗೊಂಡ ಗ್ರಾ.ಪಂ. ಬ್ಯಾಂಕ್ ಖಾತೆಗಳಲ್ಲಿ ವಹಿವಾಟು ಆರೋಪ: ಸಮಗ್ರ ತನಿಖೆಗೆ ಸಚಿವ ಈಶ್ವರ ಖಂಡ್ರೆ ಆದೇಶ

ಬೆಂಗಳೂರು, ಅ.15: ನಗರ ಸ್ಥಳೀಯ ಸಂಸ್ಥೆಗಳಿಗೆ ಸಂಪೂರ್ಣ ಹಸ್ತಾಂತರಗೊಂಡ ಬಳಿಕವೂ ಕೆಲವು ಗ್ರಾಮ ಪಂಚಾಯತಿಗಳ ಬ್ಯಾಂಕ್ ಖಾತೆಗಳಲ್ಲಿ ಹಣಕಾಸು ವಹಿವಾಟು ನಡೆದಿರುವ ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ ಸಮಗ್ರ ತನಿಖೆಗೆ ಆದೇಶಿಸಿದ್ದಾರೆ.

ಈ ಸಂಬಂಧ ಇಲಾಖೆಯ ಕಾರ್ಯದರ್ಶಿಗೆ ಲಿಖಿತ ನಿರ್ದೇಶನ ನೀಡಿರುವ ಸಚಿವರು, ಹಸ್ತಾಂತರ ಪ್ರಕ್ರಿಯೆ ಪೂರ್ಣಗೊಂಡ ನಂತರವೂ ಅಧಿಕೃತ ಮಾದರಿ ಸಹಿ ಹಾಗೂ ಕಚೇರಿ ಸೀಲು ಬಳಸಿ ಬ್ಯಾಂಕ್ ಖಾತೆಗಳಲ್ಲಿ ವಹಿವಾಟು ನಡೆಸಲಾಗಿದೆ ಎಂಬ ವರದಿಗಳನ್ನು ಗಂಭೀರವಾಗಿ ಪರಿಗಣಿಸಿ, ವಾಸ್ತವಾಂಶವನ್ನು ಸಮಗ್ರವಾಗಿ ಪರಿಶೀಲಿಸಿ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ.

ಕೆಲವು ಸಂದರ್ಭಗಳಲ್ಲಿ ಗ್ರಾಮ ಪಂಚಾಯತಿಯ ವ್ಯಾಪ್ತಿಯ ಕೆಲ ಗ್ರಾಮಗಳು ಮಾತ್ರ ನಗರಸಭೆ ಅಥವಾ ನಗರಪಾಲಿಕೆಗೆ ಸೇರ್ಪಡೆಯಾಗಿರುವ ಹಿನ್ನೆಲೆಯಲ್ಲಿ, ಹಸ್ತಾಂತರಕ್ಕೂ ಮುನ್ನ ಆರಂಭಗೊಂಡು ಇನ್ನೂ ಪೂರ್ಣಗೊಳ್ಳದ ಕಾಮಗಾರಿಗಳಿಗೆ ಗ್ರಾಮ ಪಂಚಾಯತಿಯಿಂದಲೇ ಹಣ ಪಾವತಿಸಲಾಗಿದೆಯೇ ಎಂಬ ಅಂಶವನ್ನೂ ತನಿಖೆಯಲ್ಲಿ ಒಳಗೊಳ್ಳುವಂತೆ ನಿರ್ದೇಶನ ನೀಡಿದ್ದಾರೆ.

ಈ ಉದ್ದೇಶಕ್ಕಾಗಿ ವಿಶೇಷ ತನಿಖಾ ಸಮಿತಿಯನ್ನು ರಚಿಸಿ, ಹಸ್ತಾಂತರಗೊಂಡ ಗ್ರಾಮ ಪಂಚಾಯತಿಗಳ ಬ್ಯಾಂಕ್ ಖಾತೆಗಳಲ್ಲಿ ಅಕ್ರಮ ವಹಿವಾಟು ನಡೆದಿದೆಯೇ, ಹಸ್ತಾಂತರದ ಬಳಿಕವೂ ಪಂಚಾಯತಿಯಿಂದ ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡಲಾಗಿದೆಯೇ ಎಂಬ ಎಲ್ಲ ಅಂಶಗಳನ್ನು ಪರಿಶೀಲಿಸಿ 30 ದಿನಗಳೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ.

ಬೀದರ್ ಜಿಲ್ಲೆಯ ಮೂರು ಗ್ರಾಮ ಪಂಚಾಯತಿಗಳ ಕುರಿತು ಪ್ರತ್ಯೇಕ ತನಿಖೆ

ಬೀದರ್ ನಗರಪಾಲಿಕೆಗೆ ಸಂಪೂರ್ಣ ಹಸ್ತಾಂತರಗೊಂಡಿರುವ ಕೋಳಾರ, ಅಲಿಯಾಬಾದ್ ಹಾಗೂ ಅಮಲಾಪೂರ ಗ್ರಾಮ ಪಂಚಾಯತಿಗಳ ಬ್ಯಾಂಕ್ ಖಾತೆಗಳಲ್ಲಿ ಹಸ್ತಾಂತರದ ನಂತರವೂ ವಹಿವಾಟು ನಡೆದಿರುವ ಆರೋಪಗಳ ಬಗ್ಗೆಯೂ ಪ್ರತ್ಯೇಕ ತನಿಖೆಗೆ ಸಚಿವರು ಆದೇಶಿಸಿದ್ದಾರೆ.

ಈ ಪ್ರಕರಣದಲ್ಲಿ ಗ್ರಾಮ ಪಂಚಾಯತಿಯ ಮಾಜಿ ಸಿಬ್ಬಂದಿ ಹಾಗೂ ಬ್ಯಾಂಕ್ ಸಿಬ್ಬಂದಿಯ ಪಾತ್ರವಿರುವ ಸಾಧ್ಯತೆಯನ್ನೂ ತನಿಖೆ ನಡೆಸುವಂತೆ ಸೂಚಿಸಿರುವ ಅವರು, ಹಸ್ತಾಂತರಗೊಂಡ ಬ್ಯಾಂಕ್ ಖಾತೆಗಳಲ್ಲಿ ವಹಿವಾಟು ಯಾವ ಅಧಿಕಾರದ ಆಧಾರದ ಮೇಲೆ ನಡೆಯಿತು, ಅಧಿಕೃತ ಅನುಮತಿ ನೀಡಲಾಗಿತ್ತೇ, ಅಧಿಕೃತ ಮಾದರಿ ಸಹಿ ಮತ್ತು ಕಚೇರಿ ಸೀಲುಗಳ ದುರ್ಬಳಕೆ ನಡೆದಿದೆಯೇ ಎಂಬುದನ್ನು ಕೂಲಂಕಷವಾಗಿ ಪರಿಶೀಲಿಸಲು ಸೂಚಿಸಿದ್ದಾರೆ.

ಸಹಿಗಳ ನೈಜತೆಯನ್ನು ದೃಢಪಡಿಸಲು ಅವುಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ (ಎಫ್‌ಎಸ್‌ಎಲ್) ಕಳುಹಿಸುವಂತೆಯೂ ನಿರ್ದೇಶಿಸಲಾಗಿದೆ. ತನಿಖೆಯಲ್ಲಿ ಮೇಲ್ನೋಟಕ್ಕೆ ಅಕ್ರಮ ಕಂಡುಬಂದರೆ ಸಂಬಂಧಿತ ಸಿಬ್ಬಂದಿಯನ್ನು ಅಮಾನತುಗೊಳಿಸಿ, ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ ಎ

ಹೆಚ್ಚಿನ ಸುದ್ದಿ