KRGRV
Monday, December 23, 2024
Homeಜಿಲ್ಲಾ ಸುದ್ದಿಗಳುಆಂತರಿಕ ಸಮಸ್ಯೆ ಸರಿಮಾಡಿಕೊಳ್ಳಲು ಬಿಜೆಪಿ ಪ್ರತಿಭಟನೆ: ಡಿಸಿಎಂ ಡಿ.ಕೆ. ಶಿವಕುಮಾರ್ ವ್ಯಂಗ್ಯ

ಆಂತರಿಕ ಸಮಸ್ಯೆ ಸರಿಮಾಡಿಕೊಳ್ಳಲು ಬಿಜೆಪಿ ಪ್ರತಿಭಟನೆ: ಡಿಸಿಎಂ ಡಿ.ಕೆ. ಶಿವಕುಮಾರ್ ವ್ಯಂಗ್ಯ

ಬೆಂಗಳೂರು, ಆ. 21:

“ಬಿಜೆಪಿಯಲ್ಲಿ ಆಂತರಿಕ ಸಮಸ್ಯೆಯಿದೆ. ಅದನ್ನು ಸರಿ ಮಾಡಿಕೊಳ್ಳಲು ಈಗ ಮತ್ತೊಮ್ಮೆ ಪ್ರತಿಭಟನೆ ಮಾಡುತ್ತಿದ್ದಾರೆ. ಅವರ ಪ್ರತಿಭಟನೆಯಲ್ಲಿ ಯಾವುದೇ ಹುರುಳಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವ್ಯಂಗ್ಯವಾಡಿದರು.

ಬಿಜೆಪಿಯ ಪ್ರತಿಭಟನೆ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಸದಾಶಿವನಗರದ ನಿವಾಸದ ಬಳಿ ಉತ್ತರಿಸಿದ ಅವರು “ಮುಡಾ ಅಕ್ರಮ ಎಂದು ಮೈಸೂರು ಚಲೋ ಮಾಡಿದರು. ಅದಕ್ಕೆ ಈಗಾಗಲೇ ನಾವು ಉತ್ತರ ಕೊಟ್ಟಿದ್ದೇವೆ. ಈಗ ಪ್ರತಿಭಟನೆ ಮಾಡುವವರನ್ನು ಬೇಡ ಎನ್ನಲು ಆಗುತ್ತದೆಯೇ? ಬೇಡ ಎಂದು ಹೇಳಿದವರು ಯಾರು?” ಎಂದು ಕುಟುಕಿದರು.

ಹೆಚ್ಚಿನ ಸುದ್ದಿ