ತೈವಾನ್ ಮೂಲದ ಆಪಲ್ ಫೋನ್ ಕಂಪೆನಿ ಫಾಕ್ಸ್ಕಾನ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಅಧ್ಯಕ್ಷ ಯಂಗ್ ಲಿಯು ಅವರ ಜತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಹಾಗೂ ಸಚಿವ ಎಂ ಬಿ ಪಾಟೀಲ್ ಅವರು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಶುಕ್ರವಾರ ರಾತ್ರಿ ಸಮಾಲೋಚನೆ ನಡೆಸಿದರು. ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ ಎಲ್.ಕೆ. ಅತೀಕ್ ಅಹ್ಮದ್, ಮಾಹಿತಿ ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿ ಏಕ್ ರೂಪ್ ಕೌರ್ ಮತ್ತಿತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.