ಚನ್ನಮ್ಮನ ಕಿತ್ತೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಕಿತ್ತೂರು ತಾಲೂಕು ಘಟಕದ ವತಿಯಿಂದ ಅಕ್ಟೋಬರ್ 31 ಇಂದು ವಿಜಯದಶಮಿ ಉತ್ಸವದ ಅಂಗವಾಗಿ ಸ್ವಯಂಸೇವಕರು ಪಥಸಂಚಲನ ಹಾಗೂ ಸಾರ್ವಜನಿಕ ಸಮಾರಂಭ ಹಮ್ಮಿಕೊಂಡಿದ್ದಾರೆ
ಇಂದು ಮಧ್ಯಾಹ್ನ 3 ಗಂಟೆಗೆ ರಾಣಿ ಚನ್ನಮ್ಮಾಜಿ ವರ್ತುಲದಿಂದ ಪಥಸಂಚಲನ ಆರಂಭವಾಗಿ ಚನ್ನಮ್ಮನ ಕಿತ್ತೂರು ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಲಿದೆ.
ಸಾಯಂಕಾಲ 5.30ಕ್ಕೆ ಶ್ರೀ ಗುರುಸಿದ್ದೇಶ್ವರ ಪ್ರೌಢಶಾಲೆ ಮೈದಾನದಲ್ಲಿ ಸಾರ್ವಜನಿಕ ಸಮಾರಂಭ ನಡೆಯಲಿದೆ.
ರಾಜಗುರು ಸಂಸ್ಥಾನ ಕಲ್ಮಠದ ಶ್ರೀ ಮಡಿವಾಳ ರಾಜಯೋಗೀಂದ್ರ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಲಿದ್ದಾರೆ, ಬೆಳಗಾವಿ ಜಿಲ್ಲಾ ಮಾಜಿ ಸೈನಿಕರ ಸಂಘಟನೆಗಳ ಮಹಾಒಕ್ಕೂಟದ ಜಿಲ್ಲಾಧ್ಯಕ್ಷ ಜಗದೀಶ ಪೂಜೇರಿ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ, ಆರ್ಎಸ್ಎಸ್ ವಿಭಾಗ ಕಾರ್ಯವಾಹ ಸಂಜಯ ಅಡಕೆ ಬೌದ್ಧಿಕ ಪ್ರಬೋಧನೆ ನೀಡಲಿದ್ದಾರೆ.
ಚನ್ನಮ್ಮನ ಕಿತ್ತೂರು ತಾಲೂಕಿನ ಎಲ್ಲಾ ಹಿಂದೂ ಪರ ಸಂಘಟನೆಗಳ ಸ್ವಯಂ ಸೇವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಆರ್ಎಸ್ಎಸ್ ಆಯೋಜಕರು ಮನವಿ ಮಾಡಿದ್ದಾರೆ….
ಸಂಪಾದಕರು: ರಾಮಚಂದ್ರಪ್ಪ ಪೂಜೇರ ಚನ್ನಮ್ಮನ ಕಿತ್ತೂರು

