KRGRV
Thursday, October 15, 2026
Homeಬೆಂಗಳೂರುಜಲಸಂಪನ್ಮೂಲ ಸಚಿವ ಚಲುವರಾಯಸ್ವಾಮಿ ಅವರಿಂದ ಮುಖ್ಯಮಂತ್ರಿಗಳಿಗೆ ಕಾವೇರಿ ಆರತಿ ಆಹ್ವಾನ

ಜಲಸಂಪನ್ಮೂಲ ಸಚಿವ ಚಲುವರಾಯಸ್ವಾಮಿ ಅವರಿಂದ ಮುಖ್ಯಮಂತ್ರಿಗಳಿಗೆ ಕಾವೇರಿ ಆರತಿ ಆಹ್ವಾನ

ಬೆಂಗಳೂರು, ಅ.14: ನಾಡಹಬ್ಬ ಮೈಸೂರು ದಸರಾ ಅಂಗವಾಗಿ ಕೃಷ್ಣರಾಜಸಾಗರ (ಕೆಆರ್‌ಎಸ್) ಬೃಂದಾವನ ಉದ್ಯಾನವನದಲ್ಲಿ ಅ.16ರಿಂದ ನಡೆಯಲಿರುವ *“ಕಾವೇರಿ ಆರತಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ”*ಗಳ ಉದ್ಘಾಟನೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಜಲಸಂಪನ್ಮೂಲ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಜಿಲ್ಲಾಡಳಿತದೊಂದಿಗೆ ಇಂದು ಭೇಟಿ ನೀಡಿ ಆಹ್ವಾನಿಸಿದರು.

ಈ ಸಂದರ್ಭದಲ್ಲಿ ಶ್ರೀರಂಗಪಟ್ಟಣ ಶಾಸಕ ರಮೇಶ್ ಬಂಡಿಸಿದ್ದೇಗೌಡ, ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಹೇಶ್ ಹಾಗೂ ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ ಉಪಸ್ಥಿತರಿದ್ದರು.

ಜಲಸಂಪನ್ಮೂಲ ಇಲಾಖೆಯ ಕಾವೇರಿ ನೀರಾವರಿ ನಿಗಮ ನಿಯಮಿತ ಹಾಗೂ ಮಂಡ್ಯ ಜಿಲ್ಲಾಡಳಿತದ ವತಿಯಿಂದ ಆಯೋಜಿಸಿರುವ ಕಾವೇರಿ ಆರತಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಅ.16ರಿಂದ ಅ.21ರವರೆಗೆ ನಡೆಯಲಿವೆ.

ಅ.16ರಂದು ಸಂಜೆ 6 ಗಂಟೆಗೆ ನಡೆಯಲಿರುವ “ಕಾವೇರಿ ಆರತಿ” ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಚಿವರು ಚಾಲನೆ ನೀಡಲಿದ್ದಾರೆ. ಅ.21ರವರೆಗೆ ಪ್ರತಿದಿನ ಸಂಜೆ 6 ಗಂಟೆಗೆ ಕಾವೇರಿ ಆರತಿ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ಹೆಚ್ಚಿನ ಸುದ್ದಿ