KRGRV
Tuesday, November 18, 2025
Homeರಾಜ್ಯನಾಳೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕರ್ನಾಟಕ ನಿವೃತ್ತ ನೌಕರರ ವೇದಿಕೆಯಿಂದ ಬೃಹತ್ ಪ್ರತಿಭಟನೆ

ನಾಳೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕರ್ನಾಟಕ ನಿವೃತ್ತ ನೌಕರರ ವೇದಿಕೆಯಿಂದ ಬೃಹತ್ ಪ್ರತಿಭಟನೆ

ದಿನಾಂಕ 01-07-2022 ರಿಂದ 31-7-2024 ರ ಅವಧಿಯಲ್ಲಿ ನಿವೃತ್ತರಾಗಿರುವ ಅಧಿಕಾರಿ ಹಾಗೂ ನೌಕರರುಗಳಿಗೆ ಆರನೇ ವೇತನ ಆಯೋಗದ ಸೌಲಭ್ಯಗಳನ್ನು ನೀಡಿದ್ದಾರೆ .. ನಮಗೆ 7ನೇ ವೇತನ ಆಯೋಗದ ಪ್ರಕಾರ ನಿವೃತ್ತಿ ಸೌಲಭ್ಯ ನೀಡುವಂತೆ ಪರಿಷ್ಕೃತ ಆದೇಶ ಹೊರಡಿಸಲು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ರಾಜ್ಯಾಧ್ಯಕ್ಷ ಡಾ. ಎಮ್.ಪಿ.ಎಮ್. ಷಣ್ಮುಖಯ್ಯ ತಿಳಿಸಿದರು.

ಕರ್ನಾಟಕ ನಿವೃತ್ತ ನೌಕರರ ಪ್ರತಿಭಟನೆಗೆ ಶ್ರೀ ಅಣ್ಣಾ ಹಜಾರೆಯವರು , ಮಹಾರಾಷ್ಟ್ರ ಹಾಗೂ ಸಂತೋಷ ಹೆಗಡೆ ಸೇರಿದಂತೆ ಅನೇಕ ಗಣ್ಯರು ಭಾಗಿಯಾಗಲಿದ್ದಾರೆ.. ಪ್ರತಿಭಟನೆಯಲ್ಲಿ 26 ಸಾವಿರಕ್ಕೂ ಹೆಚ್ಚು ನಿವೃತ್ತ ನೌಕರರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ..
ಮುಖ್ಯಮಂತ್ರಿಗಳು ಆದೇಶ ನೀಡುವರಗೆ ಪ್ರತಿಭಟನೆ ಮುಂದುವರಿಯಲಿದೆ ಎಂದು ರಾಜ್ಯಮಟ್ಟದ ಅನಿರ್ಧಿಷ್ಟ ಬೃಹತ್ ಪ್ರತಿಭಟನೆಯನ್ನು ನಡೆಸಲಾಗುವುದು ಎಂದು ಬೆಂಗಳೂರು ನಗರ ಸಂಚಾಲಕರಾದ ಬಿ. ಆರ್ ಯತೀಶ್, ರಮೇಶ್ ಎನ್ . ವಿ ತಿಳಿಸಿದರು .

ಹೆಚ್ಚಿನ ಸುದ್ದಿ