KRGRV
Tuesday, November 18, 2025
Homeಬೆಂಗಳೂರುಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರ ಮೇಲೆ ಪೊಲೀಸರಿಂದ ಹಲ್ಲೆ- ಧೀರಜ್ ಮುನಿರಾಜು

ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರ ಮೇಲೆ ಪೊಲೀಸರಿಂದ ಹಲ್ಲೆ- ಧೀರಜ್ ಮುನಿರಾಜು

ಬೆಂಗಳೂರು: ಪ್ರತಿಭಟನಾನಿರತ ಕೆಪಿಎಸ್ಸಿ ವಿದ್ಯಾರ್ಥಿಗಳನ್ನು ಬಂಧಿಸಿದ್ದನ್ನು ಖಂಡಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಧೀರಜ್ ಮುನಿರಾಜು ಅವರ ನೇತೃತ್ವದಲ್ಲಿ ಇಂದು ಮಧ್ಯಾಹ್ನ ವಿಜಯನಗರ ಪೆÇಲೀಸ್ ಠಾಣೆಗೆ ಮುತ್ತಿಗೆ ಹಾಕಿದರು.
ಪೆÇಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದ ಕಾರ್ಯಕರ್ತರ ಮೇಲೆ ಪೆÇಲೀಸರು ಹಲ್ಲೆ ನಡೆಸಿದ್ದಾಗಿ ಯುವಮೋರ್ಚಾ ಅಧ್ಯಕ್ಷ ಧೀರಜ್ ಮುನಿರಾಜು ಅವರು ತಿಳಿಸಿದ್ದಾರೆ. ನ್ಯಾಯಯುತ ಬೇಡಿಕೆ ಮುಂದಿಟ್ಟು ತೆರಳುತ್ತಿದ್ದ ವಿದ್ಯಾರ್ಥಿಗಳನ್ನು ಬಂಧಿಸಿದ್ದಲ್ಲದೆ, ಬಳಿಕ ಯುವ ಮೋರ್ಚಾ ಕಾರ್ಯಕರ್ತರ ಮೇಲೆ ದೌರ್ಜನ್ಯ ಮಾಡಿದ್ದಾರೆ. ಇದು ಖಂಡನೀಯ ಎಂದು ಅವರು ತಿಳಿಸಿದ್ದಾರೆ.


ಕೆಪಿಎಸ್ಸಿ ಪರೀಕ್ಷೆಯನ್ನು ಮುಂದೂಡಬೇಕೆಂದು ಕೋರಿ ಫ್ರೀಡಂ ಪಾರ್ಕಿನಲ್ಲಿ ಶಾಂತಿಯುವ ಪ್ರತಿಭಟನೆ ನಡೆಸಲಾಗಿತ್ತು. ಆದರೆ, ಈ ವಿದ್ಯಾರ್ಥಿಗಳನ್ನು ಪೆÇಲೀಸರು ಬಂಧಿಸಿದ್ದು ಪೊಲೀಸ್ ಠಾಣೆಯಲ್ಲಿ ಇಡಲಾಗಿದೆ. ಪೊಲೀಸರ ಈ ಕ್ರಮವನ್ನು ಖಂಡಿಸಿ ಪ್ರತಿಭಟನೆಗೆ ಮುಂದಾಗಿದ್ದೇವೆ. ಪ್ರತಿಭಟನೆಗೆ ಮುಂದಾದ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದು ಆಕ್ಷೇಪಾರ್ಹ ಎಂದು ಅವರು ಟೀಕಿಸಿದ್ದಾರೆ.
ಪ್ರತಿಭಟನೆಯನ್ನು ಪೊಲೀಸ್ ಬಲದ ಮೂಲಕ ಹತ್ತಿಕ್ಕುವ ಕೆಲಸವನ್ನು ರಾಜ್ಯದ ಕಾಂಗ್ರೆಸ್ ಸರಕಾರ ಮಾಡುತ್ತಿದೆ. ಇದು ಖಂಡನಾರ್ಹ ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ ಅವರು ತಿಳಿಸಿದ್ದಾರೆ.
ರಾಜ್ಯ ಪ್ರಧಾನ ಕಾರ್ಯದರ್ಶಿ ಸಂದೀಪ್ ರವಿ, ಪದಾಧಿಕಾರಿಗಳು, ಪ್ರಮುಖ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಹೆಚ್ಚಿನ ಸುದ್ದಿ