KRGRV
Thursday, September 24, 2026
Homeಬೆಂಗಳೂರುಬಿ ರಿಪೋರ್ಟ್ ಹಾಕಲು 2 ಲಕ್ಷ ಲಂಚಕ್ಕೆ ಡಿಮ್ಯಾಂಡ್ - ಹಣ ಪಡೆಯುವಾಗ ಲೋಕಾಯುಕ್ತ ದಾಳಿ‌...

ಬಿ ರಿಪೋರ್ಟ್ ಹಾಕಲು 2 ಲಕ್ಷ ಲಂಚಕ್ಕೆ ಡಿಮ್ಯಾಂಡ್ – ಹಣ ಪಡೆಯುವಾಗ ಲೋಕಾಯುಕ್ತ ದಾಳಿ‌ – ಪೊಲೀಸರೇ ಸ್ಥಳದಿಂದ ಪರಾರಿ..!!!

ಬೆಂಗಳೂರು: ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ರಾಘವೇಂದ್ರ ವಿರುದ್ಧ ಲಂಚದ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಒಂದು ಪ್ರಕರಣದಲ್ಲಿ ಬಿ-ರಿಪೋರ್ಟ್ ಸಲ್ಲಿಸಲು ₹2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದ್ದು, ಈ ಪೈಕಿ ಈಗಾಗಲೇ ₹1.80 ಲಕ್ಷ ಸ್ವೀಕರಿಸಲಾಗಿತ್ತು ಎನ್ನಲಾಗಿದೆ.

ಉಳಿದ ₹20 ಸಾವಿರ ಹಣ ಪಡೆಯುವ ವೇಳೆ ಲೋಕಾಯುಕ್ತ ಪೊಲೀಸರು ಟ್ರ್ಯಾಪ್ ಕಾರ್ಯಾಚರಣೆ ನಡೆಸಿದ್ದಾರೆ. ಆದರೆ ಲೋಕಾಯುಕ್ತ ಅಧಿಕಾರಿಗಳನ್ನು ಕಂಡು ಆರೋಪಿತ ಪೊಲೀಸ್ ಸಿಬ್ಬಂದಿ ಸ್ಥಳದಿಂದ ಪರಾರಿಯಾಗಿದ್ದಾರೆ.

ಈ ಸಂಬಂಧ ಯಲಹಂಕ ನ್ಯೂ ಟೌನ್ ಇನ್ಸ್‌ಪೆಕ್ಟರ್ ರಾಘವೇಂದ್ರ ವಿರುದ್ಧ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಟ್ರ್ಯಾಪ್ ವೇಳೆ ಆರೋಪಿಗಳು ಸಿಕ್ಕಿಬೀಳದೆ ಪರಾರಿಯಾಗಿದ್ದು, ಸದ್ಯ ಇನ್ಸ್‌ಪೆಕ್ಟರ್ ರಾಘವೇಂದ್ರ ಹಾಗೂ ಸಂಬಂಧಿತ ಸಿಬ್ಬಂದಿಗಾಗಿ ಲೋಕಾಯುಕ್ತ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಹೆಚ್ಚಿನ ಸುದ್ದಿ