ಬೆಂಗಳೂರು, ನವೆಂಬರ್ 05 : ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ಮಾನ್ಯ ಅಧ್ಯಕ್ಷರಾದ ಶ್ರೀ ಶರಣಪ್ಪ ಸಲಾದಪುರ ರವರ ಅಧ್ಯಕ್ಷತೆಯಲ್ಲಿ ಮಂಡಳಿಯ ಸಭಾಂಗಣದಲ್ಲಿ ಸರ್ವ ಸದಸ್ಯರ ಸಭೆ ಜರುಗಿತು.
ಮದ್ಯ ಮತ್ತು ಮಾದಕ ವಸ್ತುಗಳನ್ನು ವಿರೋಧಿಸಿ ನಿರಂತರವಾಗಿ ಹೋರಾಡುತ್ತಿರುವ ಹಾಗೂ ಮಂಡಳಿಯ ಹಿತದೃಷ್ಟಿಯಿಂದ ರಾಜ್ಯದಾದ್ಯಂತ ಮಂಡಳಿಯ ಕಾರ್ಯ ಚಟುವಟಿಕೆ ಹಾಗೂ ಕಾರ್ಯವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಶ್ರೀ ಹೆಚ್.ಬಿ.ವೆಂಕಟೇಶ್, ಹಿರಿಯ ವಕೀಲರು ಇವರನ್ನು ಕಾರ್ಯಕ್ರಮಗಳ ಸಂಯೋಜನಾಧಿಕಾರಿಯಾಗಿ ನೇಮಕ ಮಾಡಲು ಸರ್ವ ಸದಸ್ಯರು ಹಾಗೂ ಅಧ್ಯಕ್ಷರು ಸಮ್ಮತ ವ್ಯಕ್ತಪಡಿಸಿದ್ದು, ಅಧ್ಯಕ್ಷರು ಆದೇಶ ಹೊರಡಿಸಿದ್ದಾರೆಂದು ಮಂಡಳಿ ಪ್ರಕಟಣೆ ತಿಳಿಸಿದೆ.

