KRGRV
Sunday, March 1, 2026
Homeಜಿಲ್ಲಾ ಸುದ್ದಿಗಳುಯುದ್ಧ ಪೀಡಿತ ದೇಶಗಳಲ್ಲಿರುವ ಉಡುಪಿಯವರ ನೆರವಿಗೆ ಶಾಸಕ ಯಶ್‌ಪಾಲ್ ಸುವರ್ಣ ಅವರಿಂದ ಸಹಾಯವಾಣಿ ಆರಂಭ

ಯುದ್ಧ ಪೀಡಿತ ದೇಶಗಳಲ್ಲಿರುವ ಉಡುಪಿಯವರ ನೆರವಿಗೆ ಶಾಸಕ ಯಶ್‌ಪಾಲ್ ಸುವರ್ಣ ಅವರಿಂದ ಸಹಾಯವಾಣಿ ಆರಂಭ

ಉಡುಪಿ: ವಿಶ್ವದ ವಿವಿಧ ರಾಷ್ಟ್ರಗಳಲ್ಲಿ ಪ್ರಸ್ತುತ ಯುದ್ಧದ ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ವಿದೇಶಗಳಲ್ಲಿ ನೆಲೆಸಿರುವ ಭಾರತೀಯರ ಸುರಕ್ಷತೆಗಾಗಿ ಕೇಂದ್ರ ಸರ್ಕಾರ ಈಗಾಗಲೇ ಹಲವು ಮಹತ್ವದ ಕ್ರಮಗಳನ್ನು ಕೈಗೊಂಡಿದೆ.
ಇದಕ್ಕೆ ಪೂರಕವಾಗಿ, ಯುದ್ಧ ಪೀಡಿತ ದೇಶಗಳಲ್ಲಿ ಸಿಲುಕಿಕೊಂಡಿರುವ ಉಡುಪಿ ಮೂಲದ ಭಾರತೀಯರ ನೆರವಿಗಾಗಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್‌ಪಾಲ್ ಎ. ಸುವರ್ಣ ಅವರು ತಮ್ಮ ಕಚೇರಿಯಲ್ಲಿ ವಿಶೇಷ ಸಹಾಯವಾಣಿಯನ್ನು ಆರಂಭಿಸಿದ್ದಾರೆ. ಸಂಕಷ್ಟದಲ್ಲಿರುವವರು ಅಥವಾ ಅವರ ಕುಟುಂಬದವರು ಈ ಕೆಳಗಿನ ಸಂಖ್ಯೆಗಳನ್ನು ಸಂಪರ್ಕಿಸಿ ಮಾಹಿತಿ ನೀಡಲು ಅಥವಾ ಸಹಾಯ ಪಡೆಯಲು ಕೋರಲಾಗಿದೆ.
ಸಹಾಯವಾಣಿ ಸಂಖ್ಯೆಗಳು:
9964023344
8197421962
9901190402
9606698577
9620788889
9886212643
ಕೇಂದ್ರ ಸರ್ಕಾರದೊಂದಿಗೆ ಸಮನ್ವಯ ಸಾಧಿಸಿ, ಸಂಕಷ್ಟದಲ್ಲಿರುವ ನಮ್ಮ ಜಿಲ್ಲೆಯ ಜನರನ್ನು ಸುರಕ್ಷಿತವಾಗಿ ಕರೆತರಲು ಈ ಹೆಜ್ಜೆ ಇಡಲಾಗಿದೆ ಎಂದು ಶಾಸಕರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ

ಹೆಚ್ಚಿನ ಸುದ್ದಿ