KRGRV
Tuesday, November 3, 2026
Homeಬೆಂಗಳೂರುರವೀಂದ್ರ ಕಲಾಕ್ಷೇತ್ರದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ: ಗಣ್ಯರ ಸಮ್ಮುಖದಲ್ಲಿ ಶಾಂತಪ್ಪ ಪಂಚಪ್ಪ ದಶವಂತ ಅವರಿಗೆ ಗೌರವ

ರವೀಂದ್ರ ಕಲಾಕ್ಷೇತ್ರದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ: ಗಣ್ಯರ ಸಮ್ಮುಖದಲ್ಲಿ ಶಾಂತಪ್ಪ ಪಂಚಪ್ಪ ದಶವಂತ ಅವರಿಗೆ ಗೌರವ

ಬೆಂಗಳೂರು, ನ.1: ಕರ್ನಾಟಕ ರಾಜ್ಯೋತ್ಸವ–2026 ಅಂಗವಾಗಿ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನೆರವೇರಿತು.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ, ವಿಧಾನಸಭೆ ಸಭಾಧ್ಯಕ್ಷರು ಹಾಗೂ ವಿಧಾನ ಪರಿಷತ್ ಸಭಾಪತಿ ಸಲೀಂ ಅಹಮ್ಮದ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದು, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳು, ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ನಡೆಯಿತು.

ಈ ಸಂದರ್ಭದಲ್ಲಿ ಶ್ರೀ ಭಾಗ್ಯವಂತಿ ಶಿಕ್ಷಣ ಸಂಸ್ಥೆ, ಚವಡಿಹಾಳದ ಅಧ್ಯಕ್ಷರಾದ ಶ್ರೀ ಶಾಂತಪ್ಪ ಪಂಚಪ್ಪ ದಶವಂತ ಅವರಿಗೆ ಶಿಕ್ಷಣ ಕ್ಷೇತ್ರದಲ್ಲಿನ ಗಣನೀಯ ಸೇವೆಯನ್ನು ಗುರುತಿಸಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಪ್ರಶಸ್ತಿ ಸ್ವೀಕರಿಸಿದ ಶಾಂತಪ್ಪ ಪಂಚಪ್ಪ ದಶವಂತ ಅವರು ಕರ್ನಾಟಕ ಸರ್ಕಾರ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವ ಶಿವರಾಜ ತಂಗಡಗಿ, ವಿಧಾನಸಭೆ ಮತ್ತು ವಿಧಾನ ಪರಿಷತ್ ಅಧ್ಯಕ್ಷರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳು ಹಾಗೂ ಪ್ರಶಸ್ತಿ ಆಯ್ಕೆಗೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.

ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ನಿಸ್ವಾರ್ಥ ಸೇವೆಗೆ ದೊರೆತ ಈ ಗೌರವವು ಇನ್ನಷ್ಟು ಸಮಾಜಮುಖಿ ಕಾರ್ಯಗಳಿಗೆ ಪ್ರೇರಣೆಯಾಗಿದೆ ಎಂದು ಅವರು ಹೇಳಿದರು. ಸಮಾರಂಭದಲ್ಲಿ ಪ್ರಶಸ್ತಿ ಪುರಸ್ಕೃತರ ಕುಟುಂಬ ಸದಸ್ಯರು, ಅಭಿಮಾನಿಗಳು, ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ, ಶಿಕ್ಷಕ ವೃಂದ ಹಾಗೂ ವಿವಿಧ ಕ್ಷೇತ್ರಗಳ ಗಣ್ಯರು ಭಾಗವಹಿಸಿದ್ದರು.

ಹೆಚ್ಚಿನ ಸುದ್ದಿ