ಗಳೂರು : ಅಕ್ರಮ ಪಡಿತರ ಚೀಟಿಗಳನ್ನು ಗುರುತಿಸಿ ರದ್ದು ಮಾಡುವ ನಿಟ್ಟಿನಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ದಿಟ್ಟ ಕ್ರಮ ಕೈಗೊಂಡಿದ್ದು, ರಾಜ್ಯದಲ್ಲಿ 13,87,639 ಅನರ್ಹ ಪಡಿತರ ಚೀಟಿಗಳನ್ನು ಪತ್ತೆ ಮಾಡಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.
ಇಂದು ವಿಕಾಸಸೌಧದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 13,87,639 ಅನರ್ಹ ಪಡಿತರ ಚೀಟಿಗಳನ್ನು ಪತ್ತೆ ಮಾಡಲಾಗಿದೆ. ಈ ಪೈಕಿ ಆರು ತಿಂಗಳಿನಿಂದ ಪಡಿತರ ಪಡೆಯದ 2,75,667, ಆದಾಯ ತೆರಿಗೆ ಪಾವತಿ ಮಾಡುವ 98,485, ಆದಾಯ ಮಿತಿ ಹೆಚ್ಚಿರುವ 10,09,478 ಪಡಿತರ ಚೀಟಿಗಳು ಸೇರಿವೆ ಎಂದರು.
2023-24ನೆ ಸಾಲಿನಲ್ಲಿ ಹೊಸ ಪಡಿತರ ಚೀಟಿ ಕೋರಿ 2,95,986 ಅರ್ಜಿಗಳನ್ನು ಸ್ವೀಕರಿಸಲಾಗಿತ್ತು. ಈ ಪೈಕಿ 2,30,549 ಅರ್ಹ ಅರ್ಜಿಗಳಿದ್ದವು. 1,48,533 ಹೊಸ ಪಡಿತರ ಚೀಟಿಗಳನ್ನು ವಿತರಣೆ ಮಾಡಿದ್ದೇವೆ. 65,437 ಅರ್ಜಿಗಳನ್ನು ತಿರಸ್ಕರಿಸಿದ್ದೇವೆ. 82,016 ವಿತರಣೆಗೆ ಬಾಕಿಯಿವೆ. ಇವುಗಳನ್ನು ಪರಿಶೀಲಿಸಿದರೆ ಕನಿಷ್ಠ 10 ರಿಂದ 12 ಲಕ್ಷ ಅನರ್ಹ ಪಡಿತರ ಚೀಟಿ ಪತ್ತೆಯಾಗಬಹುದು. ಆನಂತರ ಅನರ್ಹ ಕಾರ್ಡುಗಳ ಸಂಖ್ಯೆಗೆ ಅನುಗುಣವಾಗಿ ಹೊಸ ಕಾರ್ಡುಗಳನ್ನು ನೀಡಲು ಮುಂದಿನ ದಿನಗಳಲ್ಲಿ ಹೊಸ ಅರ್ಜಿಯನ್ನು ಆಹ್ವಾನಿಸಲಾಗುವುದು ಎಂದು ಅವರು ತಿಳಿಸಿದರು.
ಅನ್ನಭಾಗ್ಯ’ ಯೋಜನೆಯ ಫಲಾನುಭವಿಗಳಿಗೆ ಸಿಹಿಸುದ್ದಿ!
ರಾಜ್ಯ ಸರ್ಕಾರದಿಂದ ಅನ್ನಭಾಗ್ಯ ಫಲಾನುಭವಿಗಳಿಗೆ ಮತ್ತೊಂದು ಗುಡ್ ನ್ಯೂಸ್ ನೀಡಲಾಗಿದೆ.ರಾಜ್ಯ ಸರ್ಕಾರದಿಂದ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ 5 ಕೆಜಿ ಅಕ್ಕಿಯ ಬದಲಾಗಿ ಡಿಬಿಟಿ ಮೂಲಕ ಹಣವನ್ನು ಪಾವತಿ ಮಾಡಲಾಗುತ್ತಿತ್ತು.ಇನ್ಮುಂದೆ ಇದರ ಬದಲಿಗೆ ಎಣ್ಣೆ, ಬೇಳೆಯನ್ನು ಒಳಗೊಂಡಂತೆ ಆಹಾರ ಕಿಟ್ ವಿತರಣೆ ಮಾಡೋದಕ್ಕೆ ಚಿಂತನೆ ನಡೆಸಲಾಗಿದೆ ಎಂಬುದಾಗಿ ಸಚಿವ ಮುನಿಯಪ್ಪ ತಿಳಿಸಿದ್ದಾರೆ.
ರಾಜ್ಯ ಸರ್ಕಾರದಿಂದ ಚುನಾವಣೆ ಪೂರ್ವದಲ್ಲಿ ಗ್ಯಾರಂಟಿ ಯೋಜನೆಯಾಗಿ ಅನ್ನಭಾಗ್ಯ ಫಲಾನುಭವಿಗಳಿಗೆ 5 ಕೆಟಿ ಜೊತೆಗೆ ಮತ್ತೆ 5 ಕೆಜಿ ಸೇರಿಸಿ 10 ಕೆಜಿ ಅಕ್ಕಿ ನೀಡುವುದಾಗಿ ಘೋಷಣೆ ಮಾಡಲಾಗಿತ್ತು. ಆದರೇ ಕೇಂದ್ರ ಸರ್ಕಾರದಿಂದ ಅದಕ್ಕೆ ಅಗತ್ಯವಿದ್ದಂತ ಅಕ್ಕಿ ನೀಡಲು ಹಿಂದೇಟು ಹಾಕಿದ ಕಾರಣ, 5 ಕೆಜಿ ಅಕ್ಕಿ ಬದಲಿಗೆ ಅದೇ ಬೆಲೆಯ ಹಣವನ್ನು ಫಲಾನುಭವಿಗಳ ಖಾತೆಗೆ ಡಿಬಿಟಿ ಮೂಲಕ ವರ್ಗಾವಣೆ ಮಾಡಲಾಗುತ್ತಿದೆ. ಈ ಡಿಬಿಟಿ ಮೂಲಕ ಹಣ ವರ್ಗಾವಣೆ ನಿಲ್ಲಿಸಿ, ಈಗ ಎಣ್ಣೆ, ಬೇಳೆ ಸೇರಿದಂತೆ ವಿವಿಧ ಆಹಾರ ಧಾನ್ಯಗಳನ್ನು ಒಳಗೊಂಡಂತ ಆಹಾರ ಕಿಟ್ ವಿತರಣೆಗೆ ಮುಂದಾಗಿದೆ.