ಬೆಂಗಳೂರು :
ಆಗ್ನೆಯ ಪದವೀಧರರ ಕ್ಷೇತ್ರದಿಂದ ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸಲು ತೀರ್ಮಾನ ಮಾಡಿರುವುದಾಗಿ ಶಿಕ್ಷಣ ಇಲಾಖೆಯ ನಿವೃತ್ತ ಅಧಿಕಾರಿ ಸೈಯದ್ ಅಫಾಖ್ ಅಹಮದ್ ತಿಳಿಸಿದ್ದಾರೆ.
ಪ್ರಸ್ತುತ ಸನ್ನಿವೇಶದಲ್ಲಿ ಶಿಕ್ಷಣ ಕ್ಷೇತ್ರ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದೆ. ಶಿಕ್ಷಕರು ಎದರಿಸುತ್ತಿರುವ ನೂರೆಂಟು ಬಗೆಯ ಸಮಸ್ಯೆಗಳಿಗೆ ಸ್ಪಂದಿಸಿ ಅವರಿಗೆ ನ್ಯಾಯ ಕಲ್ಪಿಸಿಕೊಡಬೇಕು ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಪ್ರಗತಿ ಸಾಧನೆ ಮಾಡಬೇಕು ಎನ್ನುವ ದೃಷ್ಟಿಯಿಂದ ಚುನಾವಣೆಗೆ ಸ್ಪ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದ ಅವರು 2026ರಲ್ಲಿ ನಡೆಯಲಿರುವ ವಿಧಾನ ಪರಿಷತ್ ಆಗ್ನೆಯ ಪದವೀಧರರ ಕ್ಷೇತ್ರದಿಂದ ಚುನಾವಣೆ ನಡೆಯುವ ಹಿನ್ನಲೆಯಲ್ಲಿ ಈಗಾಗಲೇ ಮತದಾರರ ನೋಂದಣಿ ಕಾರ್ಯ ಮುಗಿದಿದ್ದು, ತಾವು ಈ ಕ್ಷೇತ್ರದಲ್ಲಿ ಮತದಾರರನ್ನು ನೊಂದಾಯಿಸುವ ಕೆಲಸದಲ್ಲಿ ಮಾಡಿದ್ದೇನೆ ಎಂದು ತಿಳಿಸಿದರು.
ಕಳೆದ ಎರಡು ವರ್ಷದಿಂದ ಕಾಂಗ್ರೆಸ್ ಪಕ್ಷದಲ್ಲಿ ಕಾರ್ಯಕರ್ತನಾಗಿ ಕೆಲಸವನ್ನು ಮಾಡಿದ್ದು, 2024ರಲ್ಲಿ ಶಿಕ್ಷಕರ ಕ್ಷೇತ್ರದಿಂದ ನಡೆದ ಚುನಾವಣೆಯಲ್ಲಿ ಸ್ಪರ್ದೆ ಮಾಡಿ ಪರಾಭವಗೊಂಡಿದ್ದು ಕಾಂಗ್ರೇಸ್ ಪಕ್ಷದಿಂದ ಆಗ್ನೆಯ ಪದವೀಧರರ ಕ್ಷೇತ್ರಕ್ಕೆ ಟೀಕೇಟ್ ಕೇಳಲಾಗಿತ್ತು ಆದರೆ ಪಕ್ಷದಿಂದ ಟೀಕೇಟ್ ನೀಡದಿರುವ ಹಿನ್ನಲೆಯಲ್ಲಿ ಆಗ್ನೆಯ ಪದವೀಧರರ ಕ್ಷೇತ್ರದಿಂದ ಅಹಿಂದ ವರ್ಗದಿಂದ ಸ್ಪರ್ದೆ ಮಾಡಲು ತೀರ್ಮಾನ ಮಾಡಿರುವುದಾಗಿ ತಿಳಿಸಿದ್ದಾರೆ.
ಕಳೆದ ಮೂವತ್ತು ವರ್ಷಗಳಿಂದ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದೇನೆ. ಚಿತ್ರದುರ್ಗ, ದಾವಣಗೆರೆ, ತುಮಕೂರು ಕ್ಷೇತ್ರದ ವಿವಿಧ ಹುದ್ದೆಗಳಲ್ಲಿ ಸೇವೆಸಲ್ಲಿಸಿದ್ದು, ಶಿಕ್ಷಕರ ಸಮಸ್ಯೆಗಳ ಬಗ್ಗೆ ಅರಿವಿದೆ. ಶಿಕ್ಷಣ ಕ್ಷೇತ್ರದ ಸಂಪೂರ್ಣ ಮಾಹಿತಿ ಇದ್ದು, ಹಲವಾರು ಹಿತೈಷಿಗಳ ಒತ್ತಾಸೆಯೂ ಇರುವ ಕಾರಣ ಬಯಲು ಸೀಮೆಯ ಮದ್ಯ ಕರ್ನಾಟಕ ದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಈಗಾಗಲೇ ಸಿದ್ಧತೆ ಮಾಡಿಕೊಂಡಿದ್ದೇನೆ ಎಂದು ಸೈಯದ್ ಅಫಾಖ್ ಅಹಮದ್ ಹೇಳಿದರು.

