KRGRV
Wednesday, September 23, 2026
Homeಜಿಲ್ಲಾ ಸುದ್ದಿಗಳುಸಿಎಂ ಮನೆಗೆ ಯುವಮೋರ್ಚಾ ಮುತ್ತಿಗೆ- ಧೀರಜ್ ಮುನಿರಾಜು

ಸಿಎಂ ಮನೆಗೆ ಯುವಮೋರ್ಚಾ ಮುತ್ತಿಗೆ- ಧೀರಜ್ ಮುನಿರಾಜು

ಬೆಂಗಳೂರು: ಬಿಜೆಪಿ ಯುವ ಮೋರ್ಚಾ ವತಿಯಿಂದ ಇಂದು ಮುಖ್ಯಮಂತ್ರಿಗಳ ಗೃಹಕಚೇರಿ ‘ಕೃಷ್ಣಾ’ಕ್ಕೆ ಮುತ್ತಿಗೆ ಹಾಕಲಾಯಿತು ಎಂದು ಬಿಜೆಪಿ ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ಶಾಸಕ ಧೀರಜ್ ಮುನಿರಾಜು ಅವರು ತಿಳಿಸಿದ್ದಾರೆ.
ಹೈಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜೀನಾಮೆಗೆ ಆಗ್ರಹಿಸಿ ಈ ಮುತ್ತಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಎಂದು ಅವರು ತಿಳಿಸಿದರು.
ಬಿಜೆಪಿ ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಧೀರಜ್ ಮುನಿರಾಜು, ಬಿಜೆಪಿ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ರಾಜ್ಯ ಬಿಜೆಪಿ ಮಾಧ್ಯಮ ಸಹ ಸಂಚಾಲಕ ಪ್ರಶಾಂತ್ ಕೆಡೆಂಜಿ, ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿ ದೀಪಕ್, ಉಪಾಧ್ಯಕ್ಷ ಮಾಲತೇಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಅಭಿಲಾಷ್ ರೆಡ್ಡಿ, ರಾಮನಗರ ಜಿಲ್ಲಾಧ್ಯಕ್ಷ ಜಗನ್ನಾಥ ಗೌಡ, ಕಾರ್ಯಾಲಯ ಸಹ ಕಾರ್ಯದರ್ಶಿ ಬಾಲಾಜಿ, ಕಾರ್ಯಕರ್ತರು ಭಾಗವಹಿಸಿದ್ದರು.

ಹೆಚ್ಚಿನ ಸುದ್ದಿ