ಧಾರವಾಡ
ಉತ್ತರ ಕರ್ನಾಟಕದ ರೈತರ ಹಬ್ಬ ಅಂತಾನೆ ಕರೆಯಿಸಿಕೊಳ್ಳುವ ಧಾರವಾಡ ಕೃಷಿ ವಿಶ್ವ ವಿದ್ಯಾಲಯದಿಂದ ಆಯೋಜನೆ ಮಾಡುವ ಕೃಷಿ ಮೇಳ ಸೆಪ್ಟೆಂಬರ್ 9 ರಿಂದ 12 ರವರೆಗೆ 4 ದಿನಗಳ ಕಾಲ ನಡೆಯಲಿದೆ.
ಸಿಎಂ ಸಿದ್ದರಾಮಯ್ಯಾ ಅವರು ಬೆಂಗಳೂರಿನಿಂದ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಅಲ್ಲಿಂದ ನೇರವಾಗಿ ಕೃಷಿ ವಿಶ್ವವಿದ್ಯಾಲಯಕ್ಕೆ ತೆರಳಿ ಕೃಷಿ ಮೇಳ ಉದ್ಘಾಟನೆ ಮಾಡಲಿದ್ದಾರೆ.
ಕೃಷಿ ಮೇಳದಲ್ಲಿ ಮೊದಲಿಗೆ ವಸ್ತು ಪ್ರದರ್ಶನದ ವೀಕ್ಷಣೆ ಮಾಡಲಿರುವ ಸಿಎಂ ಸಿದ್ದರಾಮಯ್ಯಾ, ಕೃಷಿ ಮೇಳದ ಮುಖ್ಯ ವೇದಿಕೆಯಲ್ಲಿ ಉದ್ಘಾಟನಾ ಭಾಷಣ ಮಾಡಲಿದ್ದಾರೆ.
ಕೃಷಿ ಮೇಳದಲ್ಲಿ ಉತ್ತರ ಕರ್ನಾಟಕದ ಹಲವಾರು ಜಿಲ್ಲೆಯ ರೈತರು ಭಾಗವಹಿಸಿ ಕೃಷಿಯ ಆಧುನಿಕ ಯಂತ್ರೋಪಕರಣಗಳ ಬಗ್ಗೆ ಮಾಹಿತಿ ಪಡೆಯುತ್ತಾರೆ.
4 ದಿನಗಳ ಕಾಲ ನಡೆಯುವ ಕೃಷಿ ಮೇಳ ರೈತರ ಹಬ್ಬವಾಗಿ ಮಾರ್ಪಾಟು ಆಗಿ, ಲಕ್ಷಾಂತರ ಮಂದಿ ಇದು ಸದುಪಯೋಗ ಪಡೆದುಕೊಳ್ಳುತ್ತಾರೆ.