KRGRV
Wednesday, November 19, 2025
Homeರಾಜ್ಯಸ್ಟಾಪ್ ಗೇಟ್ ಅಳವಡಿಕೆ ಮೊದಲ ಹಂತದ ಯಶಸ್ವಿಸಿಎಂ ಗೆ ಮಾಹಿತಿ ನೀಡಿದ ಜಮೀರ್ ಅಹಮದ್ ಖಾನ್

ಸ್ಟಾಪ್ ಗೇಟ್ ಅಳವಡಿಕೆ ಮೊದಲ ಹಂತದ ಯಶಸ್ವಿಸಿಎಂ ಗೆ ಮಾಹಿತಿ ನೀಡಿದ ಜಮೀರ್ ಅಹಮದ್ ಖಾನ್

ಹೊಸಪೇಟೆ : ತುಂಗಭದ್ರಾ ಅಣೆ ಕಟ್ಟು ಚೈನ್ ಲಿಂಕ್ ಕಟ್ ಹಿನ್ನೆಲೆಯಲ್ಲಿ ಕೈಗೊಂಡಿದ್ದ ಸ್ಟಾಪ್ ಗೇಟ್ ಅಳವಡಿಕೆ ಮೊದಲ ಹಂತದಲ್ಲಿ ಯಶಸ್ವಿ ಆಗಿದ್ದು, ಶುಕ್ರವಾರ ರಾತ್ರಿ ಮೊದಲ ಪ್ಲೇಟ್ ಕೂರಿಸಲಾಯಿತು.
ಒಟ್ಟು ಐದು ಪ್ಲೇಟ್ ಅಳವಡಿಕೆ ಯಾಗಲಿದ್ದು ಶನಿವಾರದ ವೇಳೆಗೆ ಸ್ಟಾಪ್ ಗೇಟ್ ಅಳವಡಿಕೆ ಕಾರ್ಯ ಪೂರ್ಣ ಗೊಳ್ಳಲಿದೆ ಎಂದು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.


ಸ್ಟಾಪ್ ಗೇಟ್ ಅಳವಡಿಕೆ ಮೊದಲ ಹಂತದ ಯಶಸ್ವಿ ಕುರಿತು ಸಚಿವ ಜಮೀರ್ ಅಹಮದ್ ಖಾನ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ದೂರವಾಣಿ ಮೂಲಕ ಮಾಹಿತಿ ನೀಡಿದರು.
ಸ್ಟಾಪ್ ಗೇಟ್ ಅಳವಡಿಕೆ ಹಿನ್ನೆಲೆಯಲ್ಲಿ ಮೂರು ದಿನಗಳಿಂದ ವೈಕುಂಠ ಅತಿಥಿ ಗೃಹದಲ್ಲೇ ವಾಸ್ತವ್ಯ ಹೂಡಿದ್ದ ಸಚಿವ ಜಮೀರ್ ಅಹಮದ್ ಖಾನ್ ದಿನಕ್ಕೆ ಎರಡು ಬಾರಿ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸುತ್ತಿದ್ದರು.
ತಾಂತ್ರಿಕ ತಂಡದ ನಿರಂತರ ಪರಿಶ್ರಮ ದಿಂದ ಸ್ಟಾಪ್ ಗೇಟ್ ಅಳವಡಿಕೆ ಮೊದಲ ಹಂತದ ಯಶಸ್ಸು ಸಾಧಿಸಿದ್ದು ಇಡೀ ತಂಡಕ್ಕೆ ಸಚಿವರು ಕೃತಜ್ಞತೆ ಸಲ್ಲಿಸಿದರು.
ಸಚಿವ ಶಿವರಾಜ್ ತಂಗಡಗಿ,
ಕೊಪ್ಪಳ ಸಂಸದ ರಾಜಶೇಖರ್ ಹಿಟ್ನಾಳ್,
ಶಾಸಕರಾದ ಗವಿಯಪ್ಪ, ಕಂಪ್ಲಿ ಗಣೇಶ್ ಉಪಸ್ಥಿತರಿದ್ದರು.

ಹೆಚ್ಚಿನ ಸುದ್ದಿ