ಹಾವೇರಿ : ಇಂದು ಹಾವೇರಿಯಲ್ಲಿ ಭೀಕರವಾದ ಕೊಲೆ ನಡೆದಿದ್ದು, ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಗುತ್ತಿಗೆದಾರನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾವಿ ಪಟ್ಟಣದ ಗಂಗೆಭಾವಿ ಕ್ರಾಸ್ ಬಳಿ ಈ ಒಂದು ಭೀಕರ ಕೊಲೆ ನಡೆದಿದೆ
ಪ್ರಥಮ ದರ್ಜೆ ಗುತ್ತಿಗೆದಾರ ಶಿವಾನಂದ ಕುನ್ನೂರು (40) ಎನ್ನುವ ಗುತ್ತಿಗೆದಾರರನ್ನು ಭೀಕರವಾಗಿ ಕೊಲೆ ಮಾಡಲಾಗಿದೆ.
ಶಿವಾನಂದ ಕುನ್ನೂರು ಹೊಟೇಲ್ನಲ್ಲಿ ಊಟ ಮಾಡಿ ವಾಪಸ್ ಕಾರಿನಲ್ಲಿ ಹೋಗುತ್ತಿದ್ದ ವೇಳೆ 6 ರಿಂದ 7 ಜನರು ಅಟ್ಯಾಕ್ ಮಾಡಿ, ಕಬ್ಬಿಣದ ರಾಡ್ ಮತ್ತು ತಲಾವಾರ್ ನಿಂದು ಹೊಡೆದು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಆಸ್ತಿ ವ್ಯಾಜ್ಯದಿಂದ ಕೊಲೆ ಮಾಡಲಾಗಿದೆ ಎಂದು ಕುಟುಂಬದ ಸದಸ್ಯರು ಆರೋಪ ಮಾಡಿದ್ದಾರೆ. ಶಿಗ್ಗಾಂವಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.