ಚಾಲಕನ ನಿಯಂತ್ರಣ ತಪ್ಪಿ ಪೊಲೀಸ್ ಅಧಿಕಾರಿ ಜೀಪ್ ರಸ್ತೆ ಬದಿಯ ಮನೆಗೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡಿದ್ದ ಪ್ರೊಬೆಷನರಿ ಐಪಿಎಸ್ ಅಧಿಕಾರಿ ಹರ್ಷವರ್ಧನ್ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಪ್ರೊಬೆಷನರಿ ಐಪಿಎಸ್ ಅಧಿಕಾರಿಯಾಗಿ ಸೋಮವಾರ ಹಾಸನದಲ್ಲಿ ಕರ್ತವ್ಯಕ್ಕೆ ಹಾಜರಾಗಬೇಕಿತ್ತು. ಮೈಸೂರಿನ ದಕ್ಷಿಣ ವಲಯ ಐಜಿ ಅವರ ಬಳಿ ವರದಿ ಮಾಡಿಕೊಂಡು ಹಾಸನಕ್ಕೆ ಜೀಪ್ ನಲ್ಲಿ ಬರುವಾಗ ಕಿತ್ತಾನೆ ಬಳಿ ಅಪಘಾತ ಸಂಭವಿಸಿದೆ.1
ಹಾಸನ: ಚಾಲಕನ ನಿಯಂತ್ರಣ ತಪ್ಪಿ ಜೀಪ್ ರಸ್ತೆ ಬದಿಗೆ ಉರುಳಿದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಪ್ರೊಬೆಷನರಿ ಐಪಿಎಸ್ ಅಧಿಕಾರಿ ಚಿಕಿತ್ಸೆ ಫಲಕಾರಿಯಾಗದೆ ಕರ್ತವ್ಯಕ್ಕೆ ಹಾಜರಾಗುವ ಮುನ್ನವೇ ಇಹಲೋಕ ತ್ಯಜಿಸಿದ ದಾರುಣ ಘಟನೆ ತಾಲೂಕಿನ ಕಿತ್ತಾನೆಗಡಿ ಬಳಿ ಸಂಭವಿಸಿದೆ.
ಹರ್ಷವರ್ಧನ್ (25) .ಮೃತ ದುರ್ದೈವಿ. ಪ್ರೊಬೆಷನರಿ ಐಪಿಎಸ್ ಅಧಿಕಾರಿಯಾಗಿ ಸೋಮವಾರ ಹಾಸನದಲ್ಲಿ ಕರ್ತವ್ಯಕ್ಕೆ ಹಾಜರಾಗಬೇಕಿತ್ತು. ಮೈಸೂರಿನ ದಕ್ಷಿಣ ವಲಯ ಐಜಿ ಅವರ ಬಳಿ ವರದಿ ಮಾಡಿಕೊಂಡು ಹಾಸನಕ್ಕೆ ಜೀಪ್ ನಲ್ಲಿ ಬರುವಾಗ ಕಿತ್ತಾನೆ ಬಳಿ ಸಂಜೆ 4.30 ರ ವೇಳೆಗೆ ಜೀಪ್ ನ ಟೈರ್ ಸ್ಫೋಟವಾದ ಕಾರಣ ಜೀಪ್ ಮೂರು ಸುತ್ತು ಉರುಳಿ ಅದರಲ್ಲಿ ಪ್ರಯಾಣಿಸುತ್ತಿದ್ದ ಹರ್ಷಬರ್ಧನ್ ತಲೆಗೆ ಹಾಗೂ ದೇಹದ ಇನ್ನಿತರ ಭಾಗಕ್ಕೆ ತೀವ್ರವಾಗಿ ಪೆಟ್ಟುಬಿದ್ದಿತ್ತು.
https://x.com/alokkumar6994/status/1863258265536393505?ref_src=twsrc%5Etfw%7Ctwcamp%5Etweetembed%7Ctwterm%5E1863258265536393505%7Ctwgr%5E081c82d755a016f7c57c9dc008a6d700f3377488%7Ctwcon%5Es1_c10&ref_url=https%3A%2F%2Fd-16558560383241764167.ampproject.net%2F2410292120000%2Fframe.html
ಘಟನೆ ಬಗ್ಗೆ ಎಡಿಜಿಪಿ ಅಲೋಕ್ ಕುಮಾರ್ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.
ಜೀಪ್ ಚಾಲಕ ಮಂಜೇಗೌಡರಿಗೂ ಗಾಯಗಳಾಗಿದ್ದು, ಇಬ್ಬರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.
ವೈದ್ಯರು ನಿರಂತರ ಚಿಕಿತ್ಸೆ ನೀಡಿದರೂ ,ಪರಿಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ಒಂದು ಹಂತದಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಶೂನ್ಯ ಟ್ರಾಫಿಕ್ ನಲ್ಲಿ ಬೆಂಗಳೂರಿಗೆ ಕರೆದೊಯ್ಯುವ ಚಿಂತನೆ ಮಾಡಿ ಆಂಬ್ಯುಲೆನ್ಸ್ ಕರೆಸಿದ್ದರು. ಏನೆಲ್ಲ ಪ್ರಯತ್ನ ಮಾಡಿದರೂ ವಿಧಿಯ ಲೀಲೆ ಹರ್ಷಬರ್ಧನ್ ಪ್ರಾಣಪಕ್ಷಿ ಹಾರಿಹೋಯಿತು.
ಘಟನೆ ಬಗ್ಗೆ ಎಡಿಜಿಪಿ ಅಲೋಕ್ ಕುಮಾರ್ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.
ಮೂಲತಃ ಬಿಹಾರದ ಹರ್ಷವರ್ಧನ್ ಮಧ್ಯಪ್ರದೇಶದ ರೇವಾಜಿಲ್ಲೆಯಲ್ಲಿ ವಾಸವಾಗಿದ್ದರು ಎಂದು ಪೊಲೀಸ್ ಮೂಲ ತಿಳಿಸಿದೆ. ಮಧ್ಯಪ್ರದೇಶದ ಐಇಟಿಯಲ್ಲಿ ಡಿಎವಿಇ ಎಂಜಿನಿಯರಿಂಗ್ ಪದವಿ ಪಡೆದು 2022-23 ರ ಐಪಿಎಸ್ ಬ್ಯಾಚ್ ನಲ್ಲಿ ತೇರ್ಗಡೆ ಹೊಂದಿದ್ದ ಇವರು ಕರ್ನಾಟಕ ಕೇಡರ್ ನಲ್ಲಿ ರಾಜ್ಯಕ್ಕೆ ಆಯ್ಕೆಯಾಗಿದ್ದರು. ಮೃತರ ತಂದೆ ಕೂಡ ಐಎಎಸ್ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಪೊಲೀಸ್ ಮೂಲ ತಿಳಿಸಿದೆ.