ನವದೆಹಲಿ : ನವದೆಹಲಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ಶ್ರೀ ನಿತಿನ್ ಗಡ್ಕರಿ
ಅವರನ್ನು ಹಾಸನ ಎಂಪಿ ಶ್ರೇಯಸ್ ಪಾಟೇಲ್ ಭೇಟಿಯಾಗಿ ಹಾಸನ ಜಿಲ್ಲಾ ವ್ಯಾಪ್ತಿಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 75 ಮತ್ತು 69 ರ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಜೊತೆಗೆ ಮೇಲ್ಸೇತುವೆ ಕಾಮಗಾರಿಗಳನ್ನು ಆದ್ಯತೆಯಾಗಿ ಪರಿಗಣಿಸಿ ಶೀಘ್ರ ಪೂರ್ಣಗೊಳಿಸುವಂತೆ ಮನವಿ ಸಲ್ಲಿಸಿದರು.

ಸಂಸದರ ಮನವಿಗೆ ಸ್ಪಂದಿಸಿದ ಕೇಂದ್ರ ಸಚಿವರು ಸಂಬಂಧಪಟ್ಟ ಅಧಿಕಾರಿಗಳಿಗೆ ಕರೆಸಿ ತ್ವರಿತವಾಗಿ ಕಾಮಗಾರಿ ಪೂರ್ಣಗೋಳಿಸಿವಂತೆ ಹಾಗೂ ಮೇಲ್ಸೇತುವೆಗಳನ್ನು ಬೇಗನೆ ಮುಗಿಸಿ ಸಂಚಾರಕ್ಕೆ ಅನುಕೂಲವಾಗುವಂತೆ ಮಾಡಬೇಕು ಎಂದು ಸೂಚಿಸಿದರು.