KRGRV
Sunday, July 12, 2026
Homeಜಿಲ್ಲಾ ಸುದ್ದಿಗಳುವಿಂಡ್ ಟನಲ್ ಕೆಳಸೇತುವೆ ಕಾಮಗಾರಿಗೆ ವೇಗ ನೀಡಿ : ಕೃಷ್ಣ ಬೈರೇಗೌಡ.

ವಿಂಡ್ ಟನಲ್ ಕೆಳಸೇತುವೆ ಕಾಮಗಾರಿಗೆ ವೇಗ ನೀಡಿ : ಕೃಷ್ಣ ಬೈರೇಗೌಡ.

ಬೆಂಗಳೂರು, ಜುಲೈ-10: ವಿಂಡ್ ಟನಲ್ ಕೆಳಸೇತುವೆ ಕಾಮಗಾರಿಗೆ ಹೆಚ್ಚಿನ ಸಿಬ್ಬಂದಿಗಳನ್ನು ನಿಯೋಜಿಸಿಕೊಂಡು ವೇಗ ನೀಡಲು *ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಶ್ರೀ ಕೃಷ್ಣ ಬೈರೇಗೌಡ ರವರು ಗುತ್ತಿಗೆದಾರರಿಗೆ ಸೂಚನೆ ನೀಡಿದರು.

ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ ಹಳೆ ವಿಮಾನ ನಿಲ್ದಾಣ ರಸ್ತೆಯ ಯು.ಆರ್. ರಾವ್ ಉಪಗ್ರಹ ಕೇಂದ್ರದ ಬಳಿಯಿರುವ ವಿಂಡ್ ಟನಲ್ ಜಂಕ್ಷನ್‌ಗೆ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ ಮಾತನಾಡಿದ ಅವರು, ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಹೆಚ್ಚುವರಿ ಸಿಬ್ಬಂದಿಯನ್ನು ಬಳಸಿಕೊಳ್ಳುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದರು.

ಕೆಳಸೇತುವೆ ಕಾಮಗಾರಿಗೆ ಸಂಬಂಧಿಸಿದಂತೆ ಜಲಮಂಡಳಿಯ ಪೈಪ್‌ಲೈನ್, ಒಳಚರಂಡಿ, ಬೆಸ್ಕಾಂ ಕೇಬಲ್‌ಗಳು, ಓಎಫ್‌ಸಿ ಕೇಬಲ್‌ಗಳು ಸೇರಿದಂತೆ ಇತರೆ ಯುಟಿಲಿಟಿಗಳ ಸ್ಥಳಾಂತರ ಕಾರ್ಯ ಪೂರ್ಣಗೊಳಿಸಲಾಗಿದೆ. ಇದೀಗ ತಡೆಗೋಡೆ(ರಿಟೈನಿಂಗ್ ವಾಲ್) ಕಾಮಗಾರಿ ಪ್ರಗತಿಯಲ್ಲಿದ್ದು, ಅದಕ್ಕೆ ಮತ್ತಷ್ಟು ವೇಗ ನೀಡಿ 3 ತಿಂಗಳಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ರವರು ಮಾತನಾಡಿ, ವಾಹನ ಸಂಚಾರಕ್ಕೆ ಯಾವುದೇ ಅಡಚಣೆ ಆಗದಂತೆ ಕಾಮಗಾರಿ ನಡೆಸಲಾಗುತ್ತಿದೆ. ಜಂಕ್ಷನ್‌ನ ಎರಡೂ ಬದಿಗಳಲ್ಲಿರುವ ರಕ್ಷಣಾ, ಇಸ್ರೋ, ಎನ್.ಎ.ಎಲ್. ಇಲಾಖೆ ಹಾಗೂ ಖಾಸಗಿ ಜಾಗಗಳಲ್ಲಿ ತಾತ್ಕಾಲಿಕ ರಸ್ತೆಗಳನ್ನು ತ್ವರಿತವಾಗಿ ನಿರ್ಮಿಸಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಶೇ. 75 ರಷ್ಟು ಕಾಮಗಾರಿ ಪೂರ್ಣ:

ವಿಂಡ್ ಟನಲ್ ಜಂಕ್ಷನ್‌ನಲ್ಲಿ 19 ಕೋಟಿ ರೂ. ವೆಚ್ಚದಲ್ಲಿ 300 ಮೀಟರ್ ಉದ್ದದ ಕೆಳಸೇತುವೆ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದ್ದು, ಎರಡೂ ಬದಿಗಳಲ್ಲಿ 7.5 ಮೀಟರ್ ಅಗಲದ 4 ಪಥಗಳ ಕೆಳಸೇತುವೆ ನಿರ್ಮಿಸಲಾಗುತ್ತಿದೆ. ಪ್ರಸ್ತುತ ಒಂದು ಭಾಗದಲ್ಲಿ ಉಪಯುಕ್ತತೆಗಳ ಸ್ಥಳಾಂತರ, ಆರ್.ಸಿ.ಸಿ. ಗೋಡೆ ನಿರ್ಮಾಣ, ಸರ್ವೀಸ್ ರಸ್ತೆ ನಿರ್ಮಾಣ ಹಾಗೂ ಮಧ್ಯಭಾಗದಲ್ಲಿ ಅಳವಡಿಸಲಾಗುವ ಬಾಕ್ಸ್‌ಗಳ ತಯಾರಿಕೆ ಸೇರಿದಂತೆ ಶೇ. 75 ರಷ್ಟು ಕಾಮಗಾರಿ ಪೂರ್ಣಗೊಂಡಿದೆ.

ಕೆಳಸೇತುವೆ ಕಾಮಗಾರಿಯ ಹಂತಗಳು:

ಯುಟಿಲಿಟಿಗಳ ಸ್ಥಳಾಂತರ ಕಾರ್ಯವನ್ನು ಪೂರ್ಣಗೊಲೀಸಲಾಗಿದ್ದು, ತಡೆಗೋಡೆ ಕಾಮಗಾರಿ ಕಾರ್ಯ ಪ್ರಗತಿಯಲ್ಲಿದೆ. ತಡೆಗೋಡೆ ಕಾರ್ಯ ಮುಗಿದ ಬಳಿಕ ಮಧ್ಯಭಾಗಕ್ಕೆ ಸಿದ್ಧಪಡಿಸಿರುವ ಬಾಕ್ಸ್‌ಗಳನ್ನು ಅಳವಡಿಸಿ, ಕೊನೆಯ ಹಂತದಲ್ಲಿ ಸರ್ವೀಸ್ ರಸ್ತೆಗಳನ್ನು ನಿರ್ಮಿಸಲಾಗುವುದು.

ಪರಿಶೀಲನೆ ವೇಳೆ ಕೇಂದ್ರ ನಗರ ಪಾಲಿಕೆ ಆಯುಕ್ತರಾದ ವೆಂಕಟಾ ಚಲಪತಿ, ಮುಖ್ಯ ಅಭಿಯಂತರರಾದ ವಿಜಯ್ ಕುಮಾರ್ ಹರಿದಾಸ್, ಹೇಮಲತಾ ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಹೆಚ್ಚಿನ ಸುದ್ದಿ