KRGRV
Wednesday, August 5, 2026
Homeರಾಜಕೀಯಶಾಸಕ ಡಾ ॥ ಎನ್ ಟಿ ಶ್ರೀನಿವಾಸ್ ರವರು ಸಂಘಟನಾಚತುರರು , ಹಾಗೂ ಬಹು ಜನಪ್ರೀಯ...

ಶಾಸಕ ಡಾ ॥ ಎನ್ ಟಿ ಶ್ರೀನಿವಾಸ್ ರವರು ಸಂಘಟನಾಚತುರರು , ಹಾಗೂ ಬಹು ಜನಪ್ರೀಯ ಮಾದರಿ ಶಾಸಕರಾಗಿದ್ದಾರೆ – ಹರ್ಕರ್ ವೇಣುಗೋಪಾಲ್ ರಾವ್

ಕೂಡ್ಲಿಗಿ : ಪಟ್ಟಣಕ್ಕೆ , ಜು 30 ರಂದು. ಎಐಸಿಸಿ ಕಾರ್ಯದರ್ಶಿ ಹಾಗೂ ಪಕ್ಷದ ವೀಕ್ಷಕರಾದ , ಹರ್ಕರ್ ವೇಣುಗೋಪಾಲ್ ರವರು ಭೇಟಿ ನೀಡಿದರು. ಅವರು ಪಟ್ಟಣದ ಅನುಬಂಧ ಕಲ್ಯಾಣ ಮಂಟಪದಲ್ಲಿ , ಪಕ್ಷದ ವಿವಿದ ಪದಾಧಿಕಾರಿಗಳ ಹಾಗೂ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಕೇಂದ್ರ ಸರ್ಕಾರ ನೀಟ್ ಪ್ರೆಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಮೂಲಕ , ಪ್ರತಿಭಾನ್ವಿತ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿದೆ. ಸಂಬಂಧಿಸಿದಂತೆ ರಾಹುಲ್ ಗಾಂದಿಯವರ ನೇತೃತ್ವದಲ್ಲಿ , ಕೇಂದ್ರ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ನಿರಂತರ ಹೋರಾಟ ಮಾಡಲಾಗುತ್ತಿದೆ. ಜನ ಪ್ರಜ್ಞಾವಂತರಿದ್ದು , ಮುಂದಿನ ದಿನಗಳಲ್ಲಿ ಮೋದಿ ಅಮಿತ್ ಷ್ ನೇತೃತ್ವದ ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು. ಪಕ್ಷದ ಗಣ್ಯಾತಿ ಗಣ್ಯರು ಭಾಗಿ– ಸಭೆಯಲ್ಲಿ ಕೆಪಿಸಿಸಿ ಅಬ್ಜರ್ವರ್ ಗಳಾದ ಮರಿಯೋಜಿರಾವ್ , ಶ್ರೀಮತಿ ಆರತಿ ಚಂದ್ರಶೇಖರ್ , ಕೆಪಿಸಿಸಿ ಕಾರ್ಯದರ್ಶಿಗಳು ಹಾಗೂ ಶಾಸಕರಾದ ಸುಭಾಷ್ ರಾಥೋಡ್‌ , ಕಾಂಗ್ರೇಸ್ ಪಕ್ಷದ ವಿಜಯನಗರ ಜಿಲ್ಲಾಧ್ಯಕ್ಷರು ಹಾಗು ಮಾಜಿ ಶಾಸಕರಾದ ಶಿರಾಜ್ ಶೇಖ್ , ಶಾಸಕರಾದ ಡ‍ಾ ॥ ಎನ್ ಟಿ ಶ್ರೀನಿವಾಸ್ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದು ಮಾತನಾಡಿದರು. ಜಿಲ್ಲಾ ಹ‍ಾಗೂ ತಾಲೂಕು ಮುಖಂಡರ ಅಭಿಪ್ರಾಯಗಳನ್ನು , ಸಲಹೆ ಸೂಸನೆಗಳನ್ನು ಆಲಿಸಲಾಯಿತು. ಪಕ್ಷದ ಸಂಘಟೆ ಭಲವರ್ಧೆನೆಗಾಗಿ , ಪ್ರಮುಖರು ಸದೀರ್ಘವ‍ಾಗಿ ಚರ್ಚಿಸಿದರು. ಪಟ್ಟಣ ಪಂಚ‍ಾಯ್ತಿ ಮಾಜಿ ಅಧ್ಯಕ್ಷರಾದ ಕಾವಲ್ಲಿ ಶಿವಪ್ಪನ‍‍ಾಯಕ , ಕೂಡ್ಲಿಗಿ ಬ್ಲ‍ಾಕ್ ಕ‍ಾಂಗ್ರೇಸ್ ಅಧ್ಯಕ್ಷ ಎಮ್ ಗುರುಸಿದ್ದನಗೌಡ , ಹೊಸಹಳ್ಳಿ ಬ್ಲ‍ಾಕ್ ಕಾಂಗ್ರೆಸ್ಆಧ್ಯಕ್ಷ ಕೆ.ಜಿ.ಕಮಾರ್ ಕಾರ್ಯಕ್ರಮದಲ್ಲಿ ಸ್ವಾಗತಿಸಿ ನಿರೂಪಿಸಿ ವಂದಿಸಿದರು. ಪಕ್ಷದ ಅನೇಕ ಮುಖಂಡರು , ವಿವಿದ ವಿಭಾಗಗಳ ಪ್ರಮುಖರು , ಕ್ಷೇತ್ರದೆಲ್ಲೆಡೆಗಳಿಂದ ಆಗಮಿಸಿದ್ದ ನೂರಾರು ಕಾರ್ಯಕರ್ತರು ಅಭಿಯಾನದಲ್ಲಿ ಭಾಗವಹಿಸಿದ್ದರು. ✍️ ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ – 9008937428 / 8151937428

ಹೆಚ್ಚಿನ ಸುದ್ದಿ