KRGRV
Friday, August 28, 2026
Homeಬೆಂಗಳೂರುಶಿಕ್ಷಕರ ದಿನಾಚರಣೆ ಸಿದ್ಧತೆ ಕುರಿತು ಪೂರ್ವಭಾವಿ ಸಭೆ

ಶಿಕ್ಷಕರ ದಿನಾಚರಣೆ ಸಿದ್ಧತೆ ಕುರಿತು ಪೂರ್ವಭಾವಿ ಸಭೆ

ಬೆಂಗಳೂರು, ಆ.28:

ಸೆಪ್ಟೆಂಬರ್ 5ರಂದು ಆಯೋಜಿಸಲಾಗಿರುವ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದ ಸಿದ್ಧತೆ ಕುರಿತು ಇಂದು ಬೆಂಗಳೂರಿನ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್‌ನಲ್ಲಿ ಪೂರ್ವಭಾವಿ ಸಭೆ ನಡೆಯಿತು.

ಸಭೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಶ್ರೀ ಮಧು ಬಂಗಾರಪ್ಪ ಹಾಗೂ ಉನ್ನತ ಶಿಕ್ಷಣ ಸಚಿವ ಶ್ರೀ ಬಸವರಾಜ ರಾಯರೆಡ್ಡಿ ಅವರು ಕಾರ್ಯಕ್ರಮದ ಸಿದ್ಧತೆಗಳ ಕುರಿತು ಸಮಾಲೋಚನೆ ನಡೆಸಿದರು.

ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಹಾಗೂ ಅಚ್ಚುಕಟ್ಟಾಗಿ ಆಯೋಜಿಸುವುದು, ಕಾರ್ಯಕ್ರಮದ ರೂಪುರೇಷೆ, ವಿವಿಧ ಕಾರ್ಯಕ್ರಮಗಳ ಆಯೋಜನೆ, ಶಿಕ್ಷಕರಿಗೆ ಗೌರವ ಸಲ್ಲಿಸುವ ವಿಧಾನ ಸೇರಿದಂತೆ ಹಲವು ಪ್ರಮುಖ ವಿಚಾರಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಶಿಕ್ಷಕರ ದಿನಾಚರಣೆಯ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳು ಹಾಗೂ ಕಾರ್ಯಕ್ರಮದ ಯಶಸ್ವಿ ಆಯೋಜನೆಗೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಲಾಯಿತು.

ಸಭೆಯಲ್ಲಿ ಕಂಪ್ಲಿ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ ಜಿ ಎನ್ ಗಣೇಶ್ ಸೇರಿದಂತೆ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ಹೆಚ್ಚಿನ ಸುದ್ದಿ