KRGRV
Monday, September 21, 2026
Homeಜಿಲ್ಲಾ ಸುದ್ದಿಗಳು🚨 ಕಲ್ಲಿನಿಂದ ಜಜ್ಜಿ ಮಹಿಳೆಯ ಬರ್ಬರ ಹ**ತ್ಯೆ; ನರಳಾಡುತ್ತಿದ್ದ ತಾಯಿಯ ಎದೆ ಮೇಲೆ ಮಲಗಿದ್ದ 2...

🚨 ಕಲ್ಲಿನಿಂದ ಜಜ್ಜಿ ಮಹಿಳೆಯ ಬರ್ಬರ ಹ**ತ್ಯೆ; ನರಳಾಡುತ್ತಿದ್ದ ತಾಯಿಯ ಎದೆ ಮೇಲೆ ಮಲಗಿದ್ದ 2 ವರ್ಷದ ಕಂದಮ್ಮ.!!

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಆರ್.ಹೆಚ್. ಕ್ಯಾಂಪ್-5ರ ಹೊರವಲಯದ ಜಮೀನಿನಲ್ಲಿ ಮಹಿಳೆಯೊಬ್ಬರನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಹ**ತ್ಯೆ ಮಾಡಿರುವ ಘಟನೆ ನಡೆದಿದೆ.

ಆರ್.ಹೆಚ್. ಕ್ಯಾಂಪ್-4ರ ನಿವಾಸಿ ಸ್ನೇಹಾ (25) ಮೃತ ಮಹಿಳೆ. ಮಾರಣಾಂತಿಕ ಹಲ್ಲೆಯಿಂದ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಸ್ನೇಹಾಳ ಪಕ್ಕದಲ್ಲೇ ಆಕೆಯ 2 ವರ್ಷದ ಮಗುವನ್ನು ಬಿಟ್ಟು ಆರೋಪಿಗಳು ಪರಾರಿಯಾಗಿದ್ದಾರೆ ಎನ್ನಲಾಗಿದೆ.

ತಾಯಿಯ ಸ್ಥಿತಿ ಅರಿಯದ ಪುಟ್ಟ ಕಂದಮ್ಮ, ಕೆಲಕಾಲ ತಾಯಿಯ ಎದೆ ಮೇಲೆಯೇ ಮಲಗಿತ್ತು. ಬಳಿಕ ಸ್ಥಳೀಯರು ಮಹಿಳೆಯನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಿಂಧನೂರು ತಾಲೂಕು ಆಸ್ಪತ್ರೆಯಲ್ಲಿ ಸ್ನೇಹಾ ಮೃತಪಟ್ಟಿದ್ದಾಳೆ.

ಮಗುವಿನ ತಲೆಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸದ್ಯ ಚೇತರಿಸಿಕೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಳ ಪತಿ ಅಮಿತ್ ಹಾಗೂ ಆಕೆಯ ಪ್ರಿಯಕರ ಎಂದು ಹೇಳಲಾಗಿರುವ ಶುಭಂ ಅವರನ್ನು ಸಿಂಧನೂರು ಗ್ರಾಮೀಣ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಪತಿಯೊಂದಿಗೆ ಜಗಳ ಮಾಡಿಕೊಂಡಿದ್ದ ಸ್ನೇಹಾ ಸುಮಾರು 15 ದಿನಗಳ ಹಿಂದೆ ತವರು ಮನೆಗೆ ತೆರಳಿದ್ದಳು ಎನ್ನಲಾಗಿದೆ. ಸೆ.19ರಂದು ಬೆಳಗಿನ ಜಾವ ಸುಮಾರು 4 ಗಂಟೆಗೆ ಅಣ್ಣನ ಮನೆಯಿಂದ ಹೊರಗೆ ಬಂದಿದ್ದಳು ಎಂದು ತಿಳಿದುಬಂದಿದೆ. ಘಟನೆ ಕುರಿತು ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

🔎 ಪ್ರಕರಣದ ತನಿಖೆ ಮುಂದುವರಿದಿದ್ದು, ಹತ್ಯೆಯ ನಿಖರ ಕಾರಣ ಹಾಗೂ ಘಟನೆಯ ಹಿಂದಿರುವ ಸಂಗತಿಗಳ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಹೆಚ್ಚಿನ ಸುದ್ದಿ