ನಗರದ ಸ್ವಚ್ಚತೆಗಾಗಿ ಪೌರಕಾರ್ಮಿರ ಪಾತ್ರ ಮಹತ್ವದ್ದು
ಅಂಬೇಡ್ಕರ್ ರವರ ಆಶಯದಂತೆ ಶಿಕ್ಷಣಕ್ಕೆ ಒತ್ತು ನೀಡಲು ನೂತನ ವಸತಿ ಶಾಲೆಗಳ ಆರಂಭ
ಬೆಂಗಳೂರು, ಸೆ.25:
👇
ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ನಗರಾಭಿವೃದ್ಧಿ ಇಲಾಖೆ ಹಾಗೂ ಪೌರಾಡಳಿತ ನಿರ್ದೇಶನಾಲಯದ ವತಿಯಿಂದ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾನ್ಯ ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಕೆಹೆಚ್. ಮುನಿಯಪ್ಪ ರವರು ಮಾತನಾಡಿದರು
ಈ ನಗರದ ಸ್ವಚ್ಚತೆಗೆ ಪ್ರಮುಖ ಕಾರಣಕರ್ತರೆ ನೀವು
ಪೌರ ಕಾರ್ಮಿಕರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಿ, ಅವರು ಭವಿಷ್ಯದಲ್ಲಿ ವೈದ್ಯರು, ಇಂಜಿನಿಯರ್ಗಳು, ಐಎಎಸ್ ಹಾಗೂ ಕೆಎಎಸ್ ಅಧಿಕಾರಿಗಳಾಗುವಂತೆ ಅಗತ್ಯ ಅವಕಾಶಗಳನ್ನು ಕಲ್ಪಿಸಲಾಗುವುದು ಎಂದರು.
ಕಾರ್ಮಿಕರ ಸೇವೆ ಸಮಾಜಕ್ಕೆ ಅತ್ಯಂತ ಮಹತ್ವದ್ದಾಗಿದೆ. ಅವರ ಕಲ್ಯಾಣ ಹಾಗೂ ಮಕ್ಕಳ ಭವಿಷ್ಯಕ್ಕೆ ಸರ್ಕಾರ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.
ಪೌರ ಕಾರ್ಮಿಕರ ಹಲವು ವರ್ಷಗಳ ಹೋರಾಟದ ಫಲವಾಗಿ ಸಾವಿರಾರು ಕಾರ್ಮಿಕರನ್ನು ಕಾಯಂಗೊಳಿಸುವ ಕೆಲಸವನ್ನು ಸರ್ಕಾರ ಮಾಡಿದೆ. ಉಳಿದಿರುವ ಲೋಡರ್ಗಳು, ಕ್ಲೀನರ್ಗಳು, ಚಾಲಕರು ಸೇರಿದಂತೆ ಸಂಬಂಧಿತ ಸಿಬ್ಬಂದಿಯ ಕಾಯಂಗೊಳಿಸುವಿಕೆ ಸೇರಿದಂತೆ ವಿವಿಧ ಬೇಡಿಕೆಗಳ ಕುರಿತು ಸರ್ಕಾರದ ಗಮನಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ತಿಳಿಸಿದರು.
ಪೌರ ಕಾರ್ಮಿಕರ ಆರೋಗ್ಯದ ಹಿತದೃಷ್ಟಿಯಿಂದ ಬೆಳಗಿನ ಉಪಹಾರ ಭತ್ಯೆಯನ್ನು ಹೆಚ್ಚಿಸಿರುವುದು ಸೇರಿದಂತೆ ಹಲವು ಕಲ್ಯಾಣ ಕಾರ್ಯಕ್ರಮಗಳನ್ನು ಸರ್ಕಾರ ಜಾರಿಗೊಳಿಸಿದೆ. ಪೌರ ಕಾರ್ಮಿಕರ ಕುಟುಂಬಗಳ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಅಭಿವೃದ್ಧಿಗೆ ಇನ್ನಷ್ಟು ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿದೆ ಎಂದು ಹೇಳಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು, ಶಿಕ್ಷಣ, ವಸತಿ ಹಾಗೂ ಉದ್ಯೋಗಾವಕಾಶಗಳ ಮೂಲಕ ಸಾಮಾಜಿಕ ಸಮಾನತೆಯನ್ನು ಸಾಧಿಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ ಎಂದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮಾದಾರ ಮಹಾಸಭಾದ ಮೂಲಕ ಮಕ್ಕಳ ಶೈಕ್ಷಣಿಕ ಮತ್ತು ಸಾಮಾಜಿಕ ಅಭಿವೃದ್ಧಿಗಾಗಿ 11 ಎಕರೆ ಜಮೀನು ಒದಗಿಸಿರುವುದು ಸಮುದಾಯದ ಅಭಿವೃದ್ಧಿಗೆ ಮಹತ್ವದ ಹೆಜ್ಜೆಯಾಗಿದೆ.
ಈ ಜಮೀನನ್ನು ಶೈಕ್ಷಣಿಕ ಹಾಗೂ ಸಾಮಾಜಿಕ ಉದ್ದೇಶಗಳಿಗೆ ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು ಎಂದು ಸಚಿವರು ಹೇಳಿದರು.
ಅಂಬೇಡ್ಕರ್ ಅವರ ಆಶಯದಂತೆ ವಿವಿಧ ಸ್ಥಳಗಳಲ್ಲಿ ಹೊಸ ವಸತಿ ಶಾಲೆಗಳನ್ನು ಆರಂಭಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಪ್ರತಿಯೊಬ್ಬ ಮಗುವಿಗೂ ಉತ್ತಮ ಶಿಕ್ಷಣ ದೊರೆಯಬೇಕು ಹಾಗೂ ಯಾವುದೇ ಭೇದಭಾವವಿಲ್ಲದೆ ಸಮಾನ ಅವಕಾಶಗಳು ಸಿಗಬೇಕು ಎಂಬುದು ಸರ್ಕಾರದ ಆಶಯವಾಗಿದೆ ಎಂದರು.
ಈ ಸಂದರ್ಭದಲ್ಲಿ ಸಚಿವರಾದ ಹೆಚ್.ಸಿ.ಬಾಲಕೃಷ್ಣ, ಯತೀಂದ್ರ ಸಿದ್ದರಾಮಯ್ಯ, ಬಸವಂತಪ್ಪ,ಮಾಜಿ ಸಚಿವ ಹೆಚ್. ಆಂಜನೇಯ,ಶಾಸಕರು, ಅಧ್ಯಕ್ಷರಾದ ಅಶೋಕ ಸಾಲಪ್ಪ, ಮಾಜಿ ಮೇಯರ್ ನಾರಾಯಣ್ ಹಾಗೂ ಅಧಿಕಾರಿಗಳು ,ಉಪಸ್ಥಿತರಿದ್ದರು.

