KRGRV
Tuesday, October 6, 2026
Homeರಾಜಕೀಯವರುಣಾದಲ್ಲಿ ₹183.78 ಕೋಟಿ ಅಭಿವೃದ್ಧಿ ಮಹಾಪರ್ವ: 161 ಕಾಮಗಾರಿಗಳಿಗೆ ಸಿದ್ದರಾಮಯ್ಯ ಚಾಲನೆ

ವರುಣಾದಲ್ಲಿ ₹183.78 ಕೋಟಿ ಅಭಿವೃದ್ಧಿ ಮಹಾಪರ್ವ: 161 ಕಾಮಗಾರಿಗಳಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು, ಅಕ್ಟೋಬರ್ 5: ಮೈಸೂರಿನ ವರುಣಾ ವಿಧಾನಸಭಾ ಕ್ಷೇತ್ರದ ದಾಸನೂರು ಗ್ರಾಮದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ವಿವಿಧ ಇಲಾಖೆಗಳ ಒಟ್ಟು ₹183.78 ಕೋಟಿ ವೆಚ್ಚದ 161 ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಅಭಿವೃದ್ಧಿಯ ಹೊಸ ಅಧ್ಯಾಯಕ್ಕೆ ಮುನ್ನುಡಿ ಬರೆದರು.

ಈ ಸಂದರ್ಭದಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ನಿರ್ಮಿತಿ ಕೇಂದ್ರ, ಲೋಕೋಪಯೋಗಿ ಇಲಾಖೆ, ಮೈಸೂರು ಅಭಿವೃದ್ಧಿ ಪ್ರಾಧಿಕಾರ, ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ, ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಹಾಗೂ ಕಾವೇರಿ ನೀರಾವರಿ ನಿಗಮ ಸೇರಿದಂತೆ ವಿವಿಧ ಇಲಾಖೆಗಳ ₹143.38 ಕೋಟಿ ವೆಚ್ಚದ 134 ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ₹40.40 ಕೋಟಿ ವೆಚ್ಚದ 27 ಕಾಮಗಾರಿಗಳ ಉದ್ಘಾಟನೆ ನೆರವೇರಿಸಲಾಯಿತು.

ಅಭಿವೃದ್ಧಿ ಕಾಮಗಾರಿಗಳು ಶಿಕ್ಷಣ, ಕುಡಿಯುವ ನೀರು, ರಸ್ತೆ, ನೀರಾವರಿ ಹಾಗೂ ಸಾರ್ವಜನಿಕ ಮೂಲಸೌಕರ್ಯ ವಲಯಗಳಿಗೆ ಸಂಬಂಧಿಸಿದ್ದು, ವರುಣಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಮತ್ತಷ್ಟು ವೇಗ ನೀಡಲಿವೆ.

ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ, ಶಾಸಕರಾದ ದರ್ಶನ್ ಧ್ರುವನಾರಾಯಣ್, ವಿಧಾನ ಪರಿಷತ್ ಸದಸ್ಯರಾದ ಡಾ. ಡಿ. ತಿಮ್ಮಯ್ಯ ಹಾಗೂ ಶಿವಕುಮಾರ್, ಮೈಸೂರು ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಬೀರಿಹುಂಡಿ ಬಸವಣ್ಣ, ಮೈಸೂರು ಮೃಗಾಲಯ ಪ್ರಾಧಿಕಾರದ ಅಧ್ಯಕ್ಷರಾದ ರಂಗಸ್ವಾಮಿ, ಕಾಂಗ್ರೆಸ್ ಮುಖಂಡರು, ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ಹೆಚ್ಚಿನ ಸುದ್ದಿ