KRGRV
Monday, October 12, 2026
Homeರಾಜಕೀಯರಾಹುಲ್ ಗಾಂಧಿ ನೇತೃತ್ವದ ಎಸ್‌ಐಆರ್‌ ವಿರೋಧಿ ಪ್ರತಿಭಟನೆಗೆ ಎಸ್‌.ಎನ್‌. ನಾರಾಯಣಸ್ವಾಮಿ ಸೇರಿದಂತೆ ರಾಜ್ಯ ನಾಯಕರು ಭಾಗಿ

ರಾಹುಲ್ ಗಾಂಧಿ ನೇತೃತ್ವದ ಎಸ್‌ಐಆರ್‌ ವಿರೋಧಿ ಪ್ರತಿಭಟನೆಗೆ ಎಸ್‌.ಎನ್‌. ನಾರಾಯಣಸ್ವಾಮಿ ಸೇರಿದಂತೆ ರಾಜ್ಯ ನಾಯಕರು ಭಾಗಿ

ನವದೆಹಲಿ, ಅಕ್ಟೋಬರ್ 12:
ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (SIR) ಕ್ರಮವನ್ನು ವಿರೋಧಿಸಿ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನವದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗವಹಿಸಲು ಕೆಯುಐಡಿಎಫ್‌ಸಿ ಅಧ್ಯಕ್ಷ ಹಾಗೂ ಶಾಸಕರಾದ ಎಸ್‌.ಎನ್‌. ನಾರಾಯಣಸ್ವಾಮಿ ಸೇರಿದಂತೆ ಕರ್ನಾಟಕದ ಹಲವು ನಾಯಕರು ದೆಹಲಿಗೆ ಆಗಮಿಸಿದ್ದಾರೆ.

ನವದೆಹಲಿಯ ಕರ್ನಾಟಕ ಭವನದಲ್ಲಿ ಅಕ್ಟೋಬರ್ 12ರಂದು ಮಾಧ್ಯಮಗಳೊಂದಿಗೆ ಮಾತನಾಡಿದ ಎಸ್‌.ಎನ್‌. ನಾರಾಯಣಸ್ವಾಮಿ ಅವರು, ಎಸ್‌ಐಆರ್‌ ಪ್ರಕ್ರಿಯೆ ಕುರಿತು ಕಾಂಗ್ರೆಸ್‌ ಪಕ್ಷದ ಆಕ್ಷೇಪಣೆಗಳು ಹಾಗೂ ಮತದಾರರ ಹಕ್ಕುಗಳ ರಕ್ಷಣೆಯ ಅಗತ್ಯತೆ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದರು.

ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಈ ಹೋರಾಟದಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಶಾಸಕರಾದ ಕೊಟ್ಟೂರು ಮಂಜುನಾಥ್, ಕೆ.ವೈ. ನಂಜೇಗೌಡ, ವಿಧಾನ ಪರಿಷತ್ ಸದಸ್ಯ ಅನಿಲ್ ಕುಮಾರ್, ಕೋಲಾರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ನಾರಾಯಣಸ್ವಾಮಿ, ಬಿವೈಪಿ ಅಧ್ಯಕ್ಷ ಆರ್‌. ಮುನಿರಾಜು ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಪಾಡಬೇಕು ಹಾಗೂ ಪ್ರಜಾಪ್ರಭುತ್ವದ ಹಕ್ಕುಗಳನ್ನು ರಕ್ಷಿಸಬೇಕು ಎಂಬ ಬೇಡಿಕೆಯೊಂದಿಗೆ ಕಾಂಗ್ರೆಸ್‌ ಪಕ್ಷದ ವತಿಯಿಂದ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ನಾಯಕರು ತಿಳಿಸಿದ್ದಾರೆ.

ವರದಿ: ಜೋಶ್, ನವದೆಹಲಿ

ಹೆಚ್ಚಿನ ಸುದ್ದಿ