KRGRV
Wednesday, October 14, 2026
Homeಜಿಲ್ಲಾ ಸುದ್ದಿಗಳುಇಂದು ಸಂಜೆವರೆಗೆ ಗಡುವು - ಸ್ಪಂದಿಸದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ -ರೈತ ಹೋರಾಟ ಶಶಿಕಾಂತ ಗುರೂಜಿ

ಇಂದು ಸಂಜೆವರೆಗೆ ಗಡುವು – ಸ್ಪಂದಿಸದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ -ರೈತ ಹೋರಾಟ ಶಶಿಕಾಂತ ಗುರೂಜಿ

ಬೆಳಗಾವಿ : ರೈತರ ಬೇಡಿಕೆಗಳಿಗೆ ಕೇಂದ್ರ ಸರ್ಕಾರ ಸ್ಪಂದಿಸದ ಹಿನ್ನೆಲೆಯಲ್ಲಿ ಇಂದು ಸಂಜೆವರೆಗೆ ನಿರಂತರ ಹೋರಾಟ ನಡೆಸಲಾಗುವುದು. ಅಷ್ಟರೊಳಗೆ ಯಾವುದೇ ಪ್ರತಿಕ್ರಿಯೆ ಬಾರದಿದ್ದರೆ ಉಗ್ರ ಹೋರಾಟಕ್ಕೆ ಮುಂದಾಗುತ್ತೇವೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಗೌರವಾಧ್ಯಕ್ಷ ಶಶಿಕಾಂತ ಗುರೂಜಿ ರಾಷ್ಟ್ರೀಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಬೆಳಗಾವಿ ಜಿಲ್ಲೆಯ ಹತ್ತರಗಿ ಟೋಲ್ ಬಳಿ ಮಾತನಾಡಿದ ಅವರು, ನಾವು ಯಾವುದೇ ಪಕ್ಷ ಅಥವಾ ವ್ಯಕ್ತಿಯ ವಿರುದ್ಧ ಹೋರಾಟ ಮಾಡುತ್ತಿಲ್ಲ. ರೈತರ ಪರವಾಗಿ ಹೋರಾಟ ಮಾಡುತ್ತಿದ್ದೇವೆ. ಬೆಳಗ್ಗೆಯಿಂದ ಪ್ರತಿಭಟನೆ ನಡೆಸುತ್ತಿದ್ದರೂ ಈವರೆಗೆ ಕೇಂದ್ರ ಸರ್ಕಾರದಿಂದ ಯಾರೊಬ್ಬರೂ ಪ್ರತಿಕ್ರಿಯೆ ನೀಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕರ್ನಾಟಕ ರಾಜ್ಯದ ಒಂಬತ್ತು ಕಡೆಗಳಲ್ಲಿ ಟೋಲ್ ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು

ಕೇಂದ್ರ ಸರ್ಕಾರಕ್ಕೆ ಹೋರಾಟದ ಬಿಸಿ ಮುಟ್ಟಬೇಕಾದರೆ ರಾಷ್ಟ್ರೀಯ ಹೆದ್ದಾರಿಗಳನ್ನು ಬಂದ್‌ ಮಾಡಬೇಕಾಗುತ್ತದೆ. ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರನ್ನು ಉದ್ದೇಶಿಸಿ ಮಾತನಾಡಿದ ಶಶಿಕಾಂತ ಗುರೂಜಿ, “ಜೋಶಿ ಅವರೇ, ನೀವು ಜ್ಞಾನವಂತರು. ರೈತರ ಸಮಸ್ಯೆಗಳಿಗೆ ಸ್ಪಂದಿಸಿ” ಎಂದು ಮನವಿ ಮಾಡಿದರು.

ಪ್ರಹ್ಲಾದ ಜೋಶಿ ಅವರು ಇಂದೇ ಸಕ್ಕರೆ ಖಾತೆಯನ್ನು ಬೇರೆಯವರಿಗೆ ಬಿಟ್ಟುಕೊಟ್ಟರೂ, ಆ ಖಾತೆಯನ್ನು ನಿರ್ವಹಿಸುವವರ ವಿರುದ್ಧ ರೈತರು ಹೋರಾಟ ಮುಂದುವರಿಸಲಿದ್ದಾರೆ ಎಂದು ಎಚ್ಚರಿಕೆ ನೀಡಿದರು.

ನಾಳೆ ಸಂಜೆವರೆಗೂ ಕೇಂದ್ರ ಸರ್ಕಾರದಿಂದ ಯಾವುದೇ ಸ್ಪಂದನೆ ಸಿಗದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಶಶಿಕಾಂತ ಗುರೂಜಿ ಸ್ಪಷ್ಟಪಡಿಸಿದರು.

ಹೆಚ್ಚಿನ ಸುದ್ದಿ