KRGRV
Thursday, October 15, 2026
Homeಜಿಲ್ಲಾ ಸುದ್ದಿಗಳುಕಿತ್ತೂರು ಉತ್ಸವದ ಯಶಸ್ಸಿಗೆ ಮಾಧ್ಯಮಗಳ ಸಹಕಾರ ಅಗತ್ಯ;ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕ ಗುರುನಾಥ...

ಕಿತ್ತೂರು ಉತ್ಸವದ ಯಶಸ್ಸಿಗೆ ಮಾಧ್ಯಮಗಳ ಸಹಕಾರ ಅಗತ್ಯ;ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕ ಗುರುನಾಥ ಕಡಬೂರ

ಚನ್ನಮ್ಮನ ಕಿತ್ತೂರು, ಅ. 14: ಅಕ್ಟೋಬರ್ 23ರಿಂದ 25ರವರೆಗೆ ನಡೆಯಲಿರುವ ಚನ್ನಮ್ಮನ ಕಿತ್ತೂರು ಉತ್ಸವ-2026ಕ್ಕೆ ವ್ಯಾಪಕ ಪ್ರಚಾರ ನೀಡುವ ಮೂಲಕ ಉತ್ಸವದ ಯಶಸ್ಸಿಗೆ ಮಾಧ್ಯಮ ಪ್ರತಿನಿಧಿಗಳು ಸಹಕರಿಸಬೇಕು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕ ಗುರುನಾಥ ಕಡಬೂರ ಹೇಳಿದರು.

ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ಮಾಧ್ಯಮ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಉತ್ಸವದ ವರದಿಗಾರಿಕೆಗೆ ಆಗಮಿಸುವ ಪತ್ರಕರ್ತರಿಗಾಗಿ ಪ್ರತ್ಯೇಕ ಮಾಧ್ಯಮ ಕೇಂದ್ರ, ಮುಖ್ಯ ವೇದಿಕೆಯ ಮುಂಭಾಗದಲ್ಲಿ ಆಸನ ವ್ಯವಸ್ಥೆ ಹಾಗೂ ನಿಯಮಾನುಸಾರ ಪಾಸ್‌ಗಳನ್ನು ಒದಗಿಸಲಾಗುವುದು ಎಂದು ತಿಳಿಸಿದರು.
ತಾಲೂಕು ಪಂಚಾಯಿತಿಯ ಸಹಾಯಕ ನಿರ್ದೇಶಕ ಸಂಗನಗೌಡ ಹಂದ್ರಾಳ ಮಾತನಾಡಿ, ಮಾಧ್ಯಮ ಕೇಂದ್ರದ ನಿರ್ವಹಣೆಗೆ ಸಿಬ್ಬಂದಿ ನಿಯೋಜಿಸಿ, ಪತ್ರಕರ್ತರಿಗೆ ಅಗತ್ಯ ಸೌಲಭ್ಯ ಕಲ್ಪಿಸಲಾಗುವುದು ಎಂದರು.
ಸಭೆಯಲ್ಲಿ ಪತ್ರಕರ್ತರು ಮಾಧ್ಯಮ ಕೇಂದ್ರದ ವ್ಯವಸ್ಥೆ, ಆಸನ ಸೌಲಭ್ಯ ಹಾಗೂ ಅನಧಿಕೃತ ವ್ಯಕ್ತಿಗಳ ಪ್ರವೇಶ ನಿಯಂತ್ರಣ ಕುರಿತು ಸಲಹೆ ನೀಡಿದರು. ತಾಲೂಕು ಯೋಜನಾಧಿಕಾರಿ ಗೌಡಪ್ಪ ಗಿರಿಮಲ್ಲನವರ ಸೇರಿದಂತೆ ಮಾಧ್ಯಮ ಪ್ರತಿನಿಧಿಗಳು ಉಪಸ್ಥಿತರಿದ್ದರು.
ಫೋಟೋ ಶೀರ್ಷಿಕೆ: ಮಾಧ್ಯಮ ಸಮನ್ವಯ ಸಮಿತಿ ಸಭೆಯಲ್ಲಿ ಗುರುನಾಥ ಕಡಬೂರ ಮಾತನಾಡಿದರು.

ಹೆಚ್ಚಿನ ಸುದ್ದಿ