KRGRV
Monday, October 19, 2026
Homeಜಿಲ್ಲಾ ಸುದ್ದಿಗಳುಕಿತ್ತೂರಿನ ರೈತರ ಪಾದಯಾತ್ರೆ ಸ್ಥಳಕ್ಕೆ ತೆರಳಿ ಕಬ್ಬು ರೈತರ ಬೇಡಿಕೆ ಆಲಿಸಿದ ಸಿಎಂ, ದಸರೆ ಬಳಿಕ...

ಕಿತ್ತೂರಿನ ರೈತರ ಪಾದಯಾತ್ರೆ ಸ್ಥಳಕ್ಕೆ ತೆರಳಿ ಕಬ್ಬು ರೈತರ ಬೇಡಿಕೆ ಆಲಿಸಿದ ಸಿಎಂ, ದಸರೆ ಬಳಿಕ ಬೆಳಗಾವಿ/ಬೆಂಗಳೂರಲ್ಲಿ ಸಭೆ ರೈತರ ಬೆಳೆಗಳಿಗೆ ಬೆಲೆ ನಿಗದಿ ಬಗ್ಗೆ ಚರ್ಚೆಯ ಭರವಸೆ

ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ಕಬ್ಬು ಬೆಳೆಗಾರರು ತಮ್ಮ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹಮ್ಮಿಕೊಂಡಿದ್ದ ಪಾದಯಾತ್ರೆ, ರಾಜ್ಯದ ಮುಖ್ಯ ಮಂತ್ರಿ ಆಗಮನ ಮತ್ತು ರೈತರ ಬೇಡಿಕೆಗಳಿಗೆ ಸ್ಪಂದಿಸಲು ತಯಾರು ಎಂದ ರಾಜ್ಯ ಸರ್ಕಾರ.
..

ಚನ್ನಮ್ಮನ ಕಿತ್ತೂರು: ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ಕಬ್ಬು ಬೆಳೆಗಾರರು ತಮ್ಮ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಹಮ್ಮಿಕೊಂಡಿರುವ ಹುಬ್ಬಳ್ಳಿ ವರೆಗೆ ಪಾದಯಾತ್ರೆ ನಿನ್ನೆ ಶನಿವಾರ ಚನ್ನಮ್ಮನ ಕಿತ್ತೂರಿಗೆ ಬಂದು ತಲುಪಿದ ಲಕ್ಷಾಂತರ ರೈತರು…..

ಶನಿವಾರ ರಾತ್ರಿ ಪ್ರತಿಭಟನಾ ಸ್ಥಳಕ್ಕೆ ಖುದ್ದು ಆಗಮಿಸಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಮನ –
ಅವರು ರೈತರ ಅಹವಾಲುಗಳನ್ನು ಆಲಿಸಿ, ರೈತರನ್ನು ಉದ್ದೇಶಿಸಿ ಮಾತನಾಡಿ, “ನಿಮ್ಮ ನೋವು ನನಗೆ ಅರ್ಥವಾಗುತ್ತದೆ, ನೀವು ದೇವರ ಸಮಾನ… ದಯವಿಟ್ಟು ಪಾದಯಾತ್ರೆ ನಿಲ್ಲಿಸಿ. ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಸರ್ಕಾರ ಬದ್ಧವಾಗಿದೆ, ಆದರೆ ಸ್ವಲ್ಪ ಸಮಯಾವಕಾಶ ಬೇಕು” ಎಂದು ಮನವಿ ಮಾಡಿದರು.

ಸರ್ಕಾರದ ಭರವಸೆ: ದಸರೆ ಹಬ್ಬದ ಮುಗಿದ ಬಳಿಕ ಬೆಂಗಳೂರು ಅಥವಾ ಬೆಳಗಾವಿಯಲ್ಲಿ ರೈತ ಮುಖಂಡರೊಂದಿಗೆ ವಿಶೇಷ ಸಭೆ ನಡೆಸಿ, ಕಬ್ಬಿನ ಬೆಲೆ ಹಾಗೂ ಇತ್ಯರ್ಥಪಡಿಸಬೇಕಾದ ಸಮಸ್ಯೆಗಳ ಕುರಿತು ಮುಕ್ತವಾಗಿ ಚರ್ಚಿಸುವುದಾಗಿ ಭರವಸೆ ನೀಡಿದರು.
ಇದಕ್ಕೆ ರೈತರ ನಮ್ಮ ಬೇಡಿಕೆ ಈಡೇರಿಕೆ ಆಗುವವರೆಗೆ ಪಾದಯಾತ್ರೆ ನಿಲ್ಲಿಸಲು ಸಾಧ್ಯವಿಲ್ಲ ಎಂದು ತಿಳಿಸಿದ ರೈತ ಬಾಂಧವರು..
ರೈತರಿಗೆ ಸಿಗಬೇಕಾದ ಸವಲತ್ತುಗಳನ್ನು ರಾಜ್ಯ ಸರ್ಕಾರ ನೀಡಬೇಕು ಎಂದು ರೈತ ಮುಖಂಡರು ಮುಖ್ಯಮಂತ್ರಿ ಅವರಿಗೆ ಮನವಿ ಮಾಡಿ ರೈತರ ಸಮಸ್ಯೆಗಳನ್ನು ತಿಳಿಸಿದರು.

ರೈತರ ಹೋರಾಟಕ್ಕೆ ಹೈಕೋರ್ಟ್ ನಿರ್ಬಂಧ-
ಹೈಕೋರ್ಟ್ ನಿರ್ಬಂಧ: ಮತ್ತೊಂದೆಡೆ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ನಿವಾಸದ ಎದುರು ಕಬ್ಬು ಬೆಳೆಗಾರರು ಹಮ್ಮಿಕೊಳ್ಳಲು ಉದ್ದೇಶಿಸಿದ್ದ ಪ್ರತಿಭಟನೆಗೆ ಹೈಕೋರ್ಟ್ ನಿರ್ಬಂಧ ವಿಧಿಸಿದೆ. ಜನವಸತಿ ಪ್ರದೇಶದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವುದನ್ನು ತಪ್ಪಿಸಲು, ಪ್ರತಿಭಟನೆಗಾಗಿ ಬೇರೆಡೆ ನಿಗದಿತ ಜಾಗವನ್ನು ಗುರುತಿಸಿ ಅವಕಾಶ ಮಾಡಿಕೊಡುವಂತೆ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ. ​

ಸಂಪಾದಕರು: ರಾಮಚಂದ್ರಪ್ಪ ಪೂಜೇರ

ಹೆಚ್ಚಿನ ಸುದ್ದಿ