ಬೆಂಗಳೂರು, ಅಕ್ಟೋಬರ್ 19: ವಿಕಾಸಸೌಧದಲ್ಲಿ ಸೋಮವಾರ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ತುಂಗಭದ್ರಾ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರಾದ ಶಿವರಾಜ್ ಎಸ್. ತಂಗಡಗಿ ಅವರ ನೇತೃತ್ವದಲ್ಲಿ ತುಂಗಭದ್ರಾ ನೀರಾವರಿ ಸಲಹಾ ಸಮಿತಿಯ ಮಹತ್ವದ ಸಭೆ ನಡೆಯಿತು.
ಸಭೆಯಲ್ಲಿ ತುಂಗಭದ್ರಾ ಜಲಾಶಯದ ನೀರಿನ ಲಭ್ಯತೆ, ನಾಲ್ಕು ಜಿಲ್ಲೆಗಳಿಗೆ ನೀರಿನ ಹಂಚಿಕೆ, ನೀರಾವರಿ ನಿರ್ವಹಣೆ ಹಾಗೂ ರೈತರ ಹಿತಾಸಕ್ತಿಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಅಧಿಕಾರಿಗಳೊಂದಿಗೆ ಸಮಗ್ರ ಚರ್ಚೆ ನಡೆಸಲಾಯಿತು.
ಸಭೆಯಲ್ಲಿ ಮಾಜಿ ಸಚಿವರಾದ ಬೋಸರಾಜ್ ಹಾಗೂ ಬಿ. ನಾಗೇಂದ್ರ, ಶಾಸಕರಾದ ಕೆ. ರಾಘವೇಂದ್ರ ಹಿಟ್ನಾಳ್, ಶಿವರಾಜ್ ಪಾಟೀಲ್, ನಾಗರಾಜ್, ಹಂಪನಗೌಡ ಬಾದರ್ಲಿ, ಗಣೇಶ್, ಬಸವರಾಜ್ ತೂರ್ವಿಹಾಳ್ ಮತ್ತು ಬಸನಗೌಡ ಬಾದರ್ಲಿ ಉಪಸ್ಥಿತರಿದ್ದರು.
ಇದೇ ವೇಳೆ ತುಂಗಭದ್ರಾ ಯೋಜನೆ ವ್ಯಾಪ್ತಿಯ ನಾಲ್ಕು ಜಿಲ್ಲೆಗಳ ಜಿಲ್ಲಾಧಿಕಾರಿಗಳು, ನೀರಾವರಿ ಇಲಾಖೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿ, ಪ್ರಸ್ತುತ ನೀರಿನ ಪರಿಸ್ಥಿತಿ ಹಾಗೂ ಮುಂದಿನ ನೀರು ನಿರ್ವಹಣೆಯ ಕುರಿತ ಮಾಹಿತಿ ನೀಡಿದರು.

