ಬೆಂಗಳೂರು: ಕಾಂಗ್ರೆಸ್ ರಾಷ್ಟ್ರೀಯ ವೃತ್ತಿಪರ ಘಟಕದ ರಾಷ್ಟ್ರೀಯ ಅಧ್ಯಕ್ಷ ಮಧು ಯಾಕ್ಷಿ ಗೌಡ ಅವರು ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಸಮಕಾಲೀನ ರಾಜಕೀಯ ಬೆಳವಣಿಗೆಗಳು ಹಾಗೂ ಪಕ್ಷ ಸಂಘಟನೆ ಕುರಿತು ಚರ್ಚಿಸಿದರು.
ಈ ಸಂದರ್ಭದಲ್ಲಿ ಸಚಿವರಾದ ಜಮೀರ್ ಅಹಮದ್ ಖಾನ್, ಯತೀಂದ್ರ ಸಿದ್ದರಾಮಯ್ಯ ಹಾಗೂ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸುದೀಂದ್ರ ಅವರು ಉಪಸ್ಥಿತರಿದ್ದರು.
ಭೇಟಿಯ ವೇಳೆ ಕಾಂಗ್ರೆಸ್ ವೃತ್ತಿಪರ ಘಟಕದ ಚಟುವಟಿಕೆಗಳು, ವೃತ್ತಿಪರರೊಂದಿಗೆ ಪಕ್ಷದ ಸಂಪರ್ಕ ವೃದ್ಧಿ, ಮುಂದಿನ ಸಂಘಟನಾ ಕಾರ್ಯತಂತ್ರಗಳ ಕುರಿತು ಚರ್ಚೆ ನಡೆದಿರುವುದಾಗಿ ತಿಳಿದು ಬಂದಿದೆ.

