KRGRV
Thursday, November 5, 2026
Homeಜಿಲ್ಲಾ ಸುದ್ದಿಗಳುಬೇಡ್ತಿ–ಅಘನಾಶಿನಿ ನದಿ ಜೋಡಣೆ ಯೋಜನೆ ವಿರೋಧಿಸಿ ಯಲ್ಲಾಪುರದಲ್ಲಿ ಬೃಹತ್ ಪ್ರತಿಭಟನೆ ಯಶಸ್ವಿ

ಬೇಡ್ತಿ–ಅಘನಾಶಿನಿ ನದಿ ಜೋಡಣೆ ಯೋಜನೆ ವಿರೋಧಿಸಿ ಯಲ್ಲಾಪುರದಲ್ಲಿ ಬೃಹತ್ ಪ್ರತಿಭಟನೆ ಯಶಸ್ವಿ

ಯಲ್ಲಾಪುರ, ನವೆಂಬರ್ 03: ಬೇಡ್ತಿ–ಅಘನಾಶಿನಿ ನದಿ ಜೋಡಣೆ ಯೋಜನೆಯನ್ನು ವಿರೋಧಿಸಿ, ನಾಡಿನ ನೆಲ, ಜಲ, ಅರಣ್ಯ ಹಾಗೂ ನೈಸರ್ಗಿಕ ಸಂಪತ್ತಿನ ಸಂರಕ್ಷಣೆಗಾಗಿ ಇಂದು ಯಲ್ಲಾಪುರ ಪಟ್ಟಣದಲ್ಲಿ ನಡೆದ ರಾಷ್ಟ್ರೀಯ ಹೆದ್ದಾರಿ ತಡೆ ಬೃಹತ್ ಪ್ರತಿಭಟನೆ ಅತ್ಯಂತ ಯಶಸ್ವಿಯಾಗಿ ಜರುಗಿತು. ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರು, ವಿವಿಧ ಸಂಘಟನೆಗಳ ಮುಖಂಡರು ಹಾಗೂ ಪರಿಸರ ಹೋರಾಟಗಾರರು ಭಾಗವಹಿಸಿ ಯೋಜನೆಯ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಪಾಲ್ಗೊಂಡ ಮಾನ್ಯ ಶಾಸಕರಾದ ಶ್ರೀ ಶಿವರಾಮ ಹೆಬ್ಬಾರ್ ಅವರು ಮಾತನಾಡಿ, ಬೇಡ್ತಿ–ಅಘನಾಶಿನಿ ನದಿ ಜೋಡಣೆ ಯೋಜನೆಯಿಂದ ಪರಿಸರದ ಮೇಲೆ ಉಂಟಾಗಬಹುದಾದ ಗಂಭೀರ ಪರಿಣಾಮಗಳು, ಪಶ್ಚಿಮ ಘಟ್ಟಗಳ ಜೀವವೈವಿಧ್ಯಕ್ಕೆ ಎದುರಾಗಬಹುದಾದ ಅಪಾಯಗಳು ಹಾಗೂ ಸ್ಥಳೀಯ ಜನಜೀವನದ ಮೇಲಾಗುವ ದುಷ್ಪರಿಣಾಮಗಳ ಕುರಿತು ಆತಂಕ ವ್ಯಕ್ತಪಡಿಸಿದರು. ನಮ್ಮ ನಾಡಿನ ನೈಸರ್ಗಿಕ ಸಂಪತ್ತನ್ನು ಉಳಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಈ ಹೋರಾಟದಲ್ಲಿ ಪಕ್ಷಭೇದ ಮರೆತು ಎಲ್ಲರೂ ಒಗ್ಗಟ್ಟಿನಿಂದ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಸಂಸದರಾದ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕರಾದ ಶ್ರೀ ಭೀಮಣ್ಣ ನಾಯ್ಕ, ಶ್ರೀ ದಿನಕರ ಶೆಟ್ಟಿ, ಮಾಜಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಶಾಂತಾರಾಮ ಸಿದ್ದಿ, ಬೇಡ್ತಿ–ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿಯ ಅಧ್ಯಕ್ಷರಾದ ಶ್ರೀ ಅನಂತ್ ಆಶೀಸರ ಸೇರಿದಂತೆ ವಿವಿಧ ಸಂಘಟನೆಗಳ ಪ್ರಮುಖರು, ಪರಿಸರ ಹೋರಾಟಗಾರರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ವರದಿಗಾರರು: ಬಸಯ್ಯ ತೋಟಯ್ಯನವರ

ಹೆಚ್ಚಿನ ಸುದ್ದಿ