KRGRV
Friday, November 6, 2026
Homeಬೆಂಗಳೂರುಬಸವರಾಜ ರಾಯರಡ್ಡಿ ಅವರಿಂದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪನಾ ದಿನಾಚರಣೆ ಧ್ವಜ ಚೀಟಿ ಬಿಡುಗಡೆ

ಬಸವರಾಜ ರಾಯರಡ್ಡಿ ಅವರಿಂದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪನಾ ದಿನಾಚರಣೆ ಧ್ವಜ ಚೀಟಿ ಬಿಡುಗಡೆ

ಬೆಂಗಳೂರು: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್‌ನಲ್ಲಿ ಧ್ವಜ ಚೀಟಿ ಬಿಡುಗಡೆ ಕಾರ್ಯಕ್ರಮ ನಡೆಯಿತು.

ಉನ್ನತ ಶಿಕ್ಷಣ ಸಚಿವರು ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಉಪಾಧ್ಯಕ್ಷರಾದ ಬಸವರಾಜ ರಾಯರಡ್ಡಿ ಅವರು ಧ್ವಜ ಚೀಟಿಯನ್ನು ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವರು ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಆಯುಕ್ತರಾದ ಪಿ.ಜಿ.ಆರ್. ಸಿಂಧ್ಯಾ, ಸಂಸ್ಥೆಯ ರಾಜ್ಯ ಪದಾಧಿಕಾರಿಗಳು, ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ತುಳಸಿ ಮದ್ದಿನೇನಿ, ಕರ್ನಾಟಕ ಉನ್ನತ ಶಿಕ್ಷಣ ಪರಿಷತ್ ಉಪಾಧ್ಯಕ್ಷ ಪ್ರೊ. ಎಸ್.ಆರ್. ನಿರಂಜನ, ತಾಂತ್ರಿಕ ಶಿಕ್ಷಣ ಇಲಾಖೆ ನಿರ್ದೇಶಕ ಹರೀಶ್ ಕುಮಾರ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯು ವಿದ್ಯಾರ್ಥಿಗಳಲ್ಲಿ ಶಿಸ್ತು, ಸೇವಾ ಮನೋಭಾವ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ಕಾರ್ಯಕ್ರಮದಲ್ಲಿ ತಿಳಿಸಲಾಯಿತು.

ಹೆಚ್ಚಿನ ಸುದ್ದಿ