KRGRV
Monday, December 23, 2024
Homeಜಿಲ್ಲಾ ಸುದ್ದಿಗಳುತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರವನ್ನು ಸಮರ್ಥಿಸಿಕೊಂಡ ಕಾಂಗ್ರೆಸ್

ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರವನ್ನು ಸಮರ್ಥಿಸಿಕೊಂಡ ಕಾಂಗ್ರೆಸ್

ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ಜೆಡಿಎಸ್ ನ ನಾಯಕರು ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.ಇದೇ ವಿಚಾರವಾಗಿ ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೆಪಿಸಿಸಿ ಕಾರ್ಯದರ್ಶಿ ಲಕ್ಷ್ಮಣ್ ಹಾಗೂ ಮಾಜಿ ಎಂಎಲ್ಸಿ ರಮೇಶ್ ಬಾಬು ಬಿಜೆಪಿ‌ ಹಾಗೂ‌ ಜೆಡಿಎಸ್ ನಾಯಕರಿಗೆ ಕ್ಲಾಸ್ ತಗೆದುಕೊಂಡಿದ್ದಾರೆ.ಕಾವೇರಿ ನದಿ ನೀರು ಹಂಚಿಕೆ ಕೇಂದ್ರ ಸರ್ಕಾರಕ್ಕೆ ಬಿಟ್ಟಿದ್ದು ಮಾಜಿ ಸಿಎಂ ಬೊಮ್ಮಾಯಿ ಹಾಗೂ‌ ಕುಮಾರಸ್ವಾಮಿ ಅವರಿಗೆ ಕಾಮನ್ ಸೆನ್ಸ್,ಕನಿಷ್ಠ ಜ್ಞಾನ ಇಲ್ಲದೆ ಲೋಕಸಭೆ ಚುನಾವಣೆಯ ದೃಷ್ಟಿಯಿಂದ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆಂದು ಟಾಂಗ್ ಕೊಟ್ಟಿದ್ದಾರೆ.

ಸರ್ಕಾರ ರಚನೆಯಾದ ಬಳಿಕ ಕುಮಾರಸ್ವಾಮಿ ಮೈಮೇಲೆ ಚೇಳು ಬಿಟ್ಟುಕೊಂಡಂತೆ ಮಾತನಾಡುತ್ತಿದ್ದಾರೆ ವೈಯಕ್ತಿಕವಾಗಿ ಡಿಕೆ ಶಿವಕುಮಾರ್ ಮೇಲೆ ಆರೋಪ ಮಾಡುತ್ತಿದ್ದಾರೆಂದು ಆರೋಪಿಸಿದರು..ಮತ್ತೊಂದು ಕಡೆ ಅಣ್ಣಾಮಲೈ ನೀರು ಬಿಡುವಂತೆ ಕರ್ನಾಟಕ ವಿರುದ್ದ ಪ್ರತಿಭಟನೆ ಮಾಡುತ್ತಿದ್ದರೆ ಮತ್ತೊಂದು ಕಡೆ ಬೊಮ್ಮಾಯಿ ನೀರು ಬಿಡಬೇಡಿ ಎಂದು ಹೇಳುತ್ತಿದ್ದಾರೆ.ಲೋಕಸಭೆ ಚುನಾವಣೆಯಿಂದ ಬಿಜೆಪಿ ಹಾಗೂ ಜೆಡಿಎಸ್ ಏನೇ ಸುಳ್ಳು ಆರೋಪಗಳನ್ನು‌ ಮಾಡಿದರು ಲೋಕ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎಂದು ಭವಿಷ್ಯ ನುಡಿದಿದ್ದಾರೆ.ಅಷ್ಟೇ ಅಲ್ಲದೇ ಬಿಜೆಪಿ ಹಾಗೂ ಜೆಡಿಎಸ್ ನಿಂದ 6+5+6 ಎಂಬ ಕೋಡ್ ನಂತೆ ಹಲವು ಶಾಸಕರು ಹಿರಿಯ ರಾಜಕಾರಣಿಗಳು ಮರಳಿ ಕಾಂಗ್ರೆಸ್ ಗೆ ಬರಲಿದ್ದಾರೆಂದು ಸ್ಪಷ್ಟಪಡಿಸಿದ್ದಾರೆ.

ಹೆಚ್ಚಿನ ಸುದ್ದಿ