KRGRV
Sunday, September 20, 2026
Homeಜಿಲ್ಲಾ ಸುದ್ದಿಗಳುಅಮೇಥಿಯಿಂದ ರಾಹುಲ್ ಗಾಂಧಿ , ವಾರಾಣಾಸಿಯಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧೆ

ಅಮೇಥಿಯಿಂದ ರಾಹುಲ್ ಗಾಂಧಿ , ವಾರಾಣಾಸಿಯಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧೆ

ಲಖನೌ: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ ಭರ್ಜರಿ ತಯಾರಿ ನಡಸುತ್ತಿದೆ. ಇತ್ತ ರಾಹುಲ್ ಹಾಗೂ ಪ್ರಿಯಾಂಕಾ ಗಾಂಧಿ ಸ್ಪರ್ಧೆ ಕುರಿತು ಚರ್ಚೆಗಳು ಆರಂಭಗೊಂಡಿದೆ. 2024ರ ಲೋಕಸಭೆ ಚುನಾವಣೆಗೆ ರಾಹುಲ್ ಗಾಂಧಿ ಅಮೇಥಿಯಿಂದ ಸ್ಪರ್ಧಿಸಲಿದ್ದಾರೆ ಎಂದು ಉತ್ತರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಅಜಯ್ ರೈ ಹೇಳಿದ್ದಾರೆ.

ಪ್ರಿಯಾಂಕಾ ಗಾಂಧಿ ವಾರಣಾಸಿ ಸೇರಿ ಎಲ್ಲಿಬೇಕಾದರೂ ಸ್ಪರ್ಧಿಸಲಿ ಅವರನ್ನು ಗೆಲ್ಲಿಸಲು ಕಾರ್ಯಕರ್ತರು ಅವಿರತ ಪ್ರಯತ್ನ ಮಾಡಲಿದ್ದೇವೆ ಎಂದಿದ್ದಾರೆ. 2019ರಲ್ಲಿ ಪ್ರಿಯಾಂಕಾ ಗಾಂಧಿ ವಾರಣಾಸಿಯಿಂದ ಪ್ರಧಾನಿ ಮೋದಿ ವಿರುದ್ಧ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ ಬಳಿಕ ಅಂತಿಮ ಕ್ಷಣದಲ್ಲಿ ಅಜಯ್ ರೈ ಕಣಕ್ಕಿಳಿದಿದ್ದರು. ಈ ಬಾರಿ ವಾರಣಾಸಿಯಿಂದ ಪ್ರಿಯಾಂಕಾ ಹೆಸರು ಕೇಳಿಬರುತ್ತಿದೆ. ಲೋಕಸಭೆ ಚುನಾವಣೆ ಹಿನ್ನೆಲೆ ಉತ್ತರ ಪ್ರದೇಶದ ಕಾಂಗ್ರೆಸ್ ಅಧ್ಯಕ್ಷರ ಬದಲಿಸಲಾಗಿದೆ. ಬ್ರಿಜ್ಲಾಲ್ ಖಾಬ್ರಿ ಬದಲಿಗೆ ಅಜಯ್‌ ರೈ ಅವರನ್ನು ನೇಮಕ ಮಾಡಲಾಗಿದೆ.

2019ರಲ್ಲಿ ರಾಹುಲ್ ಗಾಂಧಿ ಅಮೇಥಿ ಮತ್ತು ವಯನಾಡ್ ಎರಡೂ ಕಡೆ ಸ್ಪರ್ಧಿಸಿದ್ದರು. ಅಮೇಥಿಯಲ್ಲಿ ಸ್ಮೃತಿ ಇರಾನಿ ವಿರುದ್ಧ ಸೋಲು ಕಂಡಿದ್ದರು. ಈ ಬಾರಿಯೂ ಎರಡೂ ಕಡೆ ಸ್ಪರ್ಧಿಸುವ ಸಾಧ್ಯತೆ ಇದ್ದು, ಅಮೇಥಿಯಲ್ಲಿ ಗೆಲ್ಲುವ ವಿಶ್ವಾಸ ಹೊಂದಿದ್ದಾರೆ.

ಹೆಚ್ಚಿನ ಸುದ್ದಿ