KRGRV
Tuesday, November 18, 2025
Homeರಾಜ್ಯಸಚಿವ ಬೈರತಿ ಸುರೇಶ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

ಸಚಿವ ಬೈರತಿ ಸುರೇಶ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

ಬೆಂಗಳೂರು, ಡಿ.24- ಗದಗದಲ್ಲಿ ಕಾರ್ಯಕ್ರಮವೊಂದಕ್ಕೆ ಭಾಗಿಯಾಗಲು ನಗಾರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು ಪ್ರಯಾಣಿಸುತ್ತಿದ್ದ ಹೆಲಿಕ್ಯಾಪ್ಟರ್ ತಾಂತ್ರಿಕ ದೋಷ ಕಂಡು ಬಂದು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಹಾರನಕಟ್ಟೆ ಗ್ರಾಮದ ಜಮೀನೊಂದರಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಇಂದು ಬೆಳಿಗ್ಗೆ 10.15ಕ್ಕೆ ಬೆಂಗಳೂರಿನ ಜಕ್ಕೂರು ಏರೋಡ್ರಮ್‍ನಿಂದ ಮೇಲಾರಿದ ಹೆಲಿಕ್ಯಾಪ್ಟರ್ ಮಾರ್ಗಮಧ್ಯೆ ತಾಂತ್ರಿಕ ಸಮಸ್ಯೆ ಎದುರಾಗಿದೆ. ಕೂಡಲೇ ಪೈಲೆಟ್ 11.15ರ ಸಮಯದಲ್ಲಿ ಸಮಯೋಚಿತ ನಿರ್ಧಾರ ಕೈಗೊಂಡು ಸುರಕ್ಷಿತವಾಗಿ ತುರ್ತು ಭೂಸ್ಪರ್ಶ ಮಾಡಿದ್ದಾರೆ.

ನಂತರ ಸಚಿವರು ರಸ್ತೆ ಮಾರ್ಗವಾಗಿ ಕಾರಿನಲ್ಲಿ ಗದಗಕ್ಕೆ ತೆರಳಿದ್ದಾರೆ. ಘಟನೆ ತಿಳಿಯುತ್ತಿದ್ದಂತೆ ಹಿರಿಯೂರು ಪೊಲೀಸರು ಸ್ಥಳಕ್ಕೆ ಧಾವಿಸಿ ಭದ್ರತೆ ನೀಡಿದ್ದಾರೆ. ಒಟ್ಟಾರೆ ಸಚಿವರ ಕಾಪ್ಟರ್ ತಾಂತ್ರಿಕ ಸಮಸ್ಯೆ ಉಂಟಾಗಿ ಸುರಕ್ಷಿತವಾಗಿ ಇಳಿದಿರುವುದರಿಂದ ಎಲ್ಲರೂ ಸಮಾಧಾನದ ನಿಟ್ಟುಸಿರು ಬಿಟ್ಟಿದ್ದಾರೆ.

ಹೆಚ್ಚಿನ ಸುದ್ದಿ