ಬೆಂಗಳೂರು : ಹೃದಯಾಘಾತದಿಂದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ(84) ನಿಧನರಾಗಿದ್ದಾರೆ. ಬೆಂಗಳೂರಿನ ಜ್ಯೋತಿಪುರ ನಿವಾಸದಲ್ಲಿ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಕೆಂಪಣ್ಣ ಅವರು ಬಿಜೆಪಿ ಸರ್ಕಾರದ ವಿರುದ್ಧ 40 % ಕಮಿಷನ್ ಆರೋಪ ಮಾಡಿ ಬಹಳ ಸುದ್ದಿಯಾಗಿದ್ದರು.
ಕೆಂಪಣ್ಣ ಅವರು ಬೊಮ್ಮಾಯಿ ಸರ್ಕಾರದ ವಿರುದ್ಧ 40 % ಕಮಿಷನ್ ಆರೋಪ ಮಾಡಿದ ಬಳಿಕ 40 % ಕಮಿಷನ್ ಆರೋಪ ರಾಜ್ಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು.