‘ಅನ್ನಭಾಗ್ಯ’ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಹಣದ ಬದಲು ‘ದಿನಸಿ ಕಿಟ್’ ನೀಡಲು ರಾಜ್ಯ ಸರ್ಕಾರ ನಿರ್ಧಾರ..!
ಬೆಂಗಳೂರು : ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ ಎಂಬಂತೆ ಇನ್ಮುಂದೆ ಅನ್ನಭಾಗ್ಯದ ಹಣದ ಬದಲು ಆಹಾರದ ಕಿಟ್ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಈ ಕುರಿತು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಘೋಷಣೆ ಮಾಡಿದ್ದಾರೆ. ಅನ್ನಭಾಗ್ಯದ ಹಣದ ಬದಲು ಆಹಾರದ ಕಿಟ್ ನೀಡಲಾಗುತ್ತದೆ.
ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದೇವೆ ಎಂದು ಹೇಳಿದರು. ಎಣ್ಣೆ, ಬೇಳೆ, ಕಾಳು ಒಳಗೊಂಡಂತಹ ದಿನಸಿ ಕಿಟ್ ನೀಡಲು ಸರ್ಕಾರ ನಿರ್ಧರಿಸಿದೆ.
ಅನ್ನಭಾಗ್ಯದ ಹಣ ಡಿಬಿಟಿ ಫಲಾನುಭವಿಗಳ ಖಾತೆಗೆ ಸರಿಯಾಗಿ ಸಮಯಕ್ಕೆ ಜಮಾ ಆಗದಿರುವ ಹಿನ್ನೆಲೆ ಅನ್ನಭಾಗ್ಯದ ಹಣದ ಬದಲು ಆಹಾರದ ಕಿಟ್ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರ ಈ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಲಿದೆ.
ಫಲಾನುಭವಿಗಳಿಗೆ ಹಣ ನೀಡುವ ಪ್ರಕ್ರಿಯೆ ಮುಂದುವರಿಸುವುದು ಸೂಕ್ತವಲ್ಲ ಎಂದು ಆಹಾರ ಇಲಾಖೆಯ ಅಧಿಕಾರಿಗಳಿಂದ ಸರಕಾರಕ್ಕೆ ಸಲಹೆ ಬಂದಿರುವ ಹಿನ್ನೆಲೆ ಹಣದ ಬದಲು ದಿನಸಿ ಕಿಟ್ ನೀಡುವುದು ಸೂಕ್ತ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎನ್ನಲಾಗಿದೆ.