ಬೆಂಗಳೂರು: D.21: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಬಗ್ಗೆ ನಿರ್ಧಾರ ಪ್ರಕಟವಾದ ನಂತರ ಇದೇ ಮೊದಲ ಬಾರಿಗೆ ಜೆಡಿಎಸ್ ಮುಖಂಡರು ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾಗಿದ್ದಾರೆ.
ದೆಹಲಿಯ ಸಂಸತ್ ಭವನದಲ್ಲಿ ಇಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಪುತ್ರರಾದ ಎಚ್.ಡಿ ಕುಮಾರಸ್ವಾಮಿ ಮತ್ತು ಎಚ್.ಡಿ ರೇವಣ್ಣ ಅವರ ಜೊತೆ ಪ್ರಧಾನಿ ಮೋದಿ ಭೇಟಿಯಾಗಿದ್ದಾರೆ.
ಈ ವಿಚಾರವನ್ನು ಪ್ರಧಾನಿ ಮೋದಿ ಎಕ್ಸ್ ( ಟ್ವಿಟರ್ ) ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ರಾಷ್ಟ್ರದ ಪ್ರಗತಿಗೆ ದೇವೇಗೌಡ ಜಿ ಅವರ ಅನುಕರಣೀಯ ಕೊಡುಗೆಯನ್ನು ಭಾರತವು ಬಹಳವಾಗಿ ಗೌರವಿಸುತ್ತದೆ ಎಂದು ಪೋಸ್ಟ್ ಮಾಡಿದ್ದಾರೆ.