KRGRV
Friday, November 14, 2025
Homeಆಧ್ಯಾತ್ಮಡಿಕೆಶಿ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಯಾದ ಆಯನೂರು ಮಂಜುನಾಥ್!

ಡಿಕೆಶಿ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಯಾದ ಆಯನೂರು ಮಂಜುನಾಥ್!

ಬೆಂಗಳೂರು: ಶಿವಮೊಗ್ಗದ ಹಿರಿಯ ನಾಯಕರಾದ ಆಯನೂರು ಮಂಜುನಾಥ್ ಅವರು ತಮ್ಮ ಬೆಂಬಲಿಗರೊಂದಿಗೆ ಇಂದು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು.

ನಗರದ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಮಂಜುನಾಥ್ ಅವರನ್ನು ಆತ್ಮೀಯವಾಗಿ ಸ್ವಾಗತಿಸಿ ಮುಂದಿ‌ನ ರಾಜಕೀಯ ಜೀವನ ಚೆನ್ನಾಗಿರಲಿ ಎಂದು ಶುಭ ಹಾರೈಸಿದರು.

ನಂತರ ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ಪಕ್ಷದ ನಾಯಕರಾಗಲಿ, ಕಾರ್ಯಕರ್ತರಾಗಲಿ ಎಲ್ಲರಿಗೂ ನಾನು ಹೇಳುವುದು ಇಷ್ಟೇ. ನೀವು ಕಾಂಗ್ರೆಸ್ ಪಕ್ಷದಲ್ಲಿ ಬೇರೂರಿದರೆ ನಿಮಗೆ ಸೂಕ್ತ ಸ್ಥಾನಮಾನಗಳು ಸಿಗಲಿವೆ ಎಂದರು.

ನೀವು ಬಂದು ಹೋಗುವ ಪ್ರವೃತ್ತಿ ಮೈಗೂಡಿಸಿಕೊಂಡರೆ ನಿಮಗೆ ಸಿಗಬೇಕಾದ ಅವಕಾಶಗಳು ತಪ್ಪುತ್ತವೆ, ಅಷ್ಟೇ ಅಲ್ಲ ಜನ ನಿಮ್ಮ ಮೇಲೆ ನಂಬಿಕೆ ಕಳೆದುಕೊಳ್ಳುತ್ತಾರೆ. ರಾಷ್ಟ್ರ ಧ್ವಜದ ಗುರುತು ಹೊಂದಿರುವ ಕಾಂಗ್ರೆಸ್ ಪಕ್ಷಕ್ಕೆ ತನ್ನದೇ ಇತಿಹಾಸವಿದೆ. ಕಾಂಗ್ರೆಸ್ ಶಕ್ತಿ ಈ ದೇಶದ ಶಕ್ತಿ. ಕಾಂಗ್ರೆಸ್ ಇತಿಹಾಸ ಈ ದೇಶದ ಇತಿಹಾಸ.

ಹೆಚ್ಚಿನ ಸುದ್ದಿ