ಮಾಜಿ ಸಿಎಂ ಹೆಚ್.ಡಿ .ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲು

ಬೆಂಗಳೂರು : ಅನಾರೋಗ್ಯದ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸತತ ಪ್ರವಾಸ ಕಾರಣ ಕುಮಾರಸ್ವಾಮಿ ಜ್ವರದಿಂದ ಬಳಲುತ್ತಿದ್ದು, ನಿನ್ನೆ ತಡರಾತ್ರಿ ನಗರದ ಬನ್ನೇರುಘಟ್ಟ ರಸ್ತೆಯ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಮಾಹಿತಿ ದೊರೆತಿದೆ. ಕೋಲಾರ ಭೇಟಿ ರದ್ದು : ಜ್ವರದಿಂದ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆ ಕುಮಾರಸ್ವಾಮಿಯವರ ಇಂದಿನ ಕೋಲಾರ ಭೇಟಿ ರದ್ದಾಗಿದೆ. ಕೋಲಾರದ ಶ್ರೀನಿವಾಸಪುರದಲ್ಲಿ ಕುಮಾರಸ್ವಾಮಿ ರೈತರ ಜಮೀನುಗಳಿಗೆ ಭೇಟಿ ನೀಡುವ ಕಾರ್ಯಕ್ರಮ ನಿಗದಿಯಾಗಿತ್ತು. ಅರಣ್ಯ ಇಲಾಖೆ ಒತ್ತುವರಿ ತೆರವು ವೇಳೆ ರೈತರ […]
ಡಿಕೆಶಿ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಯಾದ ಆಯನೂರು ಮಂಜುನಾಥ್!

ಬೆಂಗಳೂರು: ಶಿವಮೊಗ್ಗದ ಹಿರಿಯ ನಾಯಕರಾದ ಆಯನೂರು ಮಂಜುನಾಥ್ ಅವರು ತಮ್ಮ ಬೆಂಬಲಿಗರೊಂದಿಗೆ ಇಂದು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು. ನಗರದ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಮಂಜುನಾಥ್ ಅವರನ್ನು ಆತ್ಮೀಯವಾಗಿ ಸ್ವಾಗತಿಸಿ ಮುಂದಿನ ರಾಜಕೀಯ ಜೀವನ ಚೆನ್ನಾಗಿರಲಿ ಎಂದು ಶುಭ ಹಾರೈಸಿದರು. ನಂತರ ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ಪಕ್ಷದ ನಾಯಕರಾಗಲಿ, ಕಾರ್ಯಕರ್ತರಾಗಲಿ ಎಲ್ಲರಿಗೂ ನಾನು ಹೇಳುವುದು ಇಷ್ಟೇ. ನೀವು ಕಾಂಗ್ರೆಸ್ ಪಕ್ಷದಲ್ಲಿ ಬೇರೂರಿದರೆ […]
ಮಿಜೋರಾಂ: ನಿರ್ಮಾಣ ಹಂತದ ರೈಲ್ವೆ ಸೇತುವೆ ಕುಸಿತ ಪ್ರಕರಣ: ಮುಂದುವರೆದ ಶೋಧ, ರಕ್ಷಣಾ ಕಾರ್ಯಾಚರಣೆ

ಮಿಜೋರಾಂ: ಐಜ್ವಾಲ್ನಿಂದ ಸುಮಾರು 20 ಕಿ.ಮೀ ದೂರದಲ್ಲಿರುವ ಸೈರಾಂಗ್ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿರುವ ರೈಲ್ವೆ ಸೇತುವೆ ಕುಸಿದು ಬಿದ್ದಿದ್ದು, ಕನಿಷ್ಠ 18 ಕಾರ್ಮಿಕರು ಸಾವನ್ನಪ್ಪಿದ್ದಾರೆ. ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಬುಧವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಐಜ್ವಾಲ್ ನಗರದಿಂದ 19 ಕಿ.ಮೀ ದೂರದಲ್ಲಿರುವ ಸೈರಾಂಗ್ನಲ್ಲಿ ಈ ಘಟನೆ ನಡೆದಿದೆ. ಅಧಿಕಾರಿಗಳ ಪ್ರಕಾರ, ಸ್ಥಳದಲ್ಲಿ ಕೆಲಸ ಮಾಡುತ್ತಿದ್ದ ಇತರ ಕಾರ್ಮಿಕರನ್ನು ರಕ್ಷಿಸಲು ದಿನವಿಡೀ ರಕ್ಷಣಾ ಕಾರ್ಯಾಚರಣೆಗಳು ಪ್ರಗತಿಯಲ್ಲಿದೆ. ಈ ಪ್ರದೇಶದ ಗುಡ್ಡಗಾಡು ಪ್ರದೇಶದಲ್ಲಿ ಸುಮಾರು 100 ಮೀಟರ್ […]
ಗೊಲ್ಲರಹಟ್ಟಿಯಲ್ಲಿ ಮರುಕಳಿಸಿದ ಮೌಢ್ಯಾಚರಣೆ… ಊರಿಂದ ಹೊರಗೆ ಗುಡಿಸಲಲ್ಲಿ ಇರಿಸಿದ್ದ ಬಾಣಂತಿ, ಶಿಶು ರಕ್ಷಿಸಿದ ಜಡ್ಜ್!

ತುಮಕೂರು: ಮೂಢನಂಬಿಕೆ ಪಾಲಿಸಲು ಬಾಣಂತಿ ಹಾಗೂ ಶಿಶುವನ್ನು ಊರಿನಿಂದ ಹೊರಗಿಟ್ಟಾಗ ಜಿಲ್ಲೆಯ ಗೊಲ್ಲರಹಟ್ಟಿ ಸಮೀಪ ಮಗು ಮೃತಪಟ್ಟು ಬಾಣಂತಿ ನರಳಾಡಿದ ಘಟನೆ ಮಾಸುವ ಮುನ್ನವೇ ಮತ್ತೊಂದು ಇದೇ ರೀತಿಯ ಪ್ರಕರಣ ಬೆಳಕಿಗೆ ಬಂದಿದೆ. ಮತ್ತೊಬ್ಬ ಬಾಣಂತಿಯನ್ನು ಗ್ರಾಮದಿಂದ ಹೊರಗಿಡಲಾಗಿದ್ದು, ನ್ಯಾಯಾಧೀಶರು ಮಧ್ಯಪ್ರವೇಶಿಸಿ ಮೌಢ್ಯಾಚರಣೆಗೆ ತಡೆಯೊಡ್ಡಿದ ಘಟನೆ ಗುಬ್ಬಿ ತಾಲೂಕಿನ ವರದೇನಹಳ್ಳಿ ಗೊಲ್ಲರಹಟ್ಟಿಯಲ್ಲಿ ನಡೆದಿದೆ. ಬಾಣಂತಿಯನ್ನು ಹೊರಗಿಟ್ಟಿರುವ ಬಗ್ಗೆ ಬುಧವಾರ ಮಾಹಿತಿ ತಿಳಿದು ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ ಗುಬ್ಬಿ ನ್ಯಾಯಾಲಯದ ನ್ಯಾಯಾಧೀಶರಾದ ಉಂಡಿ ಮಂಜುಳ ಶಿವಪ್ಪ ಅವರು […]
ಬೆಂಗಳೂರಿನ ನೆಹರು ತಾರಾಲಯದಲ್ಲಿ ಚಂದ್ರಯಾನ-3 ಲ್ಯಾಂಡಿಂಗ್ ನೇರ ಪ್ರಸಾರ, ಕನ್ನಡದಲ್ಲೇ ವಿವರಣೆ

ಬೆಂಗಳೂರು, (ಆಗಸ್ಟ್ 23): ಸೌರಮಂಡಲದಲ್ಲಿ ಅದೊಂದು ಅಮೂಲ್ಯವಾದ ಸಂಪನ್ಮೂಲ.. ಆಕರ್ಷಕ.. ನಿಗೂಢ.. ಕುಳಿಗಳೇ ತುಂಬಿರೋ ಸುಂದರ ಚಂದಮಾಮನ ಅಂಗಳದಲ್ಲಿ ಏನಿದೆ ಎನ್ನುವುದನ್ನು ತಿಳಿದುಕೊಳ್ಳುವ ಕುತೂಹಲ. ಇಸ್ರೋ ವಿಜ್ಞಾನಿಗಳ 4 ವರ್ಷದ ಕನಸು, 4 ಲಕ್ಷ ಕಿಲೋ ಮೀಟರ್ ಪ್ರಯಾಣ. ಬಾಹ್ಯಾಕಾಶದಲ್ಲಿ ಐತಿಹಾಸಕ ಮೈಲಿಗಲ್ಲು ಸಾಧಿಸುವುದಕ್ಕೆ ಇನ್ನೊಂದೇ ಹೆಜ್ಜೆ ಬಾಕಿ ಇದೆ. ಇಂದು(ಆಗಸ್ಟ್ 23) ಸಂಜೆ 6ಗಂಟೆ 4 ನಿಮಿಷಕ್ಕೆ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಲ್ಯಾಂಡ್ ಆಗುತ್ತಿದ್ದು, ಆ ಕೌತುಕ ದೃಶ್ಯವನ್ನು ಕಣ್ತುಂಬಿಕೊಳ್ಳಲು ಕೆಲ ಗಂಟೆಗಳಷ್ಟೇ ಬಾಕಿ […]
Kirik Keerthi: ಕರಿಮಣಿ ಮಾಲೀಕ ನಾನಲ್ಲ! ಪ್ರೀತಿಸಿ ಮದುವೆಯಾದ ಪತ್ನಿ ಅರ್ಪಿತಾಗೆ ಡಿವೋರ್ಸ್ ನೀಡಿದ ಕಿರಿಕ್ ಕೀರ್ತಿ

Kirik Keerthi: ಪತ್ರಕರ್ತ, ನಿರೂಪಕ, ಬಿಗ್ಬಾಸ್ ಕನ್ನಡದ ಸ್ಪರ್ಧಿ, ಸಿನಿಮಾ ಹೀಗೆ ಹಲವು ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದ ಕಿರಿಕ್ ಕೀರ್ತಿ, ತಮ್ಮ ದಾಂಪತ್ಯದ ವಿಚಾರವಾಗಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಪತ್ನಿ ಅರ್ಪಿತಾ ಜತೆಗೆ ವಿಚ್ಛೇದನ ಪಡೆದಿರುವ ಸಂಗತಿಯನ್ನು ಬಹಿರಂಗಪಡಿಸಿದ್ದಾರೆ. ಈ ಹಿಂದೆಯೇ ಕಿರಿಕ್ ಕೀರ್ತಿ ಮತ್ತು ಅರ್ಪಿತಾ ನಡುವೆ ಯಾವುದೂ ಸರಿಯಿಲ್ಲ ಎಂಬ ವದಂತಿ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿತ್ತು. ಅದ್ಯಾವ ಮಟ್ಟಿಗೆ ಎಂದರೆ, ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರಕ್ಕೂ ಕೀರ್ತಿ ಬಂದಿದ್ದರಂತೆ. ಆಗ ಕೇಳಿ ಬಂದ ವದಂತಿಗೆ ಕೀರ್ತಿ […]
‘ಅರೆರೆ ಅವಳ ನಗುವ, ನೋಡಿ ಮರೆತೆ ಜಗವ..’! ಮೇಘಾ ಶೆಟ್ಟಿ ಚೆಲುವಿಗೆ ಫ್ಯಾನ್ಸ್ ಗುಣಗಾನ

Megha Shetty Photos: ನಟಿ ಮೇಘಾ ಶೆಟ್ಟಿ ನಟನೆ ಮತ್ತು ಸೌಂದರ್ಯದಿಂದಲೇ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಅನು ಸಿರಿಮನೆ ಎಂದೇ ಚಿರಪರಿಚಿತರಾಗಿದ್ದಾರೆ. ಕಿರುತೆರೆಯಿಂದ ಹಿರಿತೆರೆಗೂ ಈ ಚೆಲುವೆ ಕಾಲಿರಿಸಿದ್ದಾರೆ. ಸದ್ಯ ಸಿನಿಮಾ ಜೊತೆಗೆ ಫೋಟೋಶೂಟ್ನಲ್ಲಿ ಬ್ಯುಸಿಯಾಗಿದ್ದಾರೆ. ತಮ್ಮ ವಿಶಿಷ್ಟ ಫ್ಯಾಷನ್ ಸೆನ್ಸ್ ಅನ್ನು ಫೋಟೋಗಳ ಮೂಲಕವೇ ರಿವೀಲ್ ಮಾಡುತ್ತಿರುತ್ತಾರೆ. ಟ್ರೆಡಿಷನಲ್ ಜೊತೆಗೆ ಮಾಡರ್ನ್ ಫೋಟೋಗಳ ಮೂಲಕ ನೋಡುಗರನ್ನು ಆಕರ್ಷಿಸುತ್ತಾರೆ. ಇನ್ಸ್ಟಾದಲ್ಲಿ 1.1 ಮಿಲಿಯನ್ಗೂ ಹೆಚ್ಚು […]
Vijay Raghavendra: ನಿನ್ನನ್ನೇ ಉಸಿರಾಡುತ್ತಿರುವೆ ಚಿನ್ನ; ಪತ್ನಿ ಸ್ಪಂದನಾಳಿಗೆ ಭಾವುಕ ಪದಗಳ ಸಾಲು ಅರ್ಪಿಸಿದ ವಿಜಯ್ ರಾಘವೇಂದ್ರ

ಪತ್ನಿ ಸ್ಪಂದನಾ ಅವರನ್ನು ನೆನೆದು ನಟ ವಿಜಯ್ ರಾಘವೇಂದ್ರ ಭಾವುಕ ಸಾಲುಗಳನ್ನು ಬರೆದುಕೊಂಡಿದ್ದಾರೆ. ಸ್ಪಂದನ, ಹೆಸರಿಗೆ ತಕ್ಕ ಜೀವ, ಉಸಿರಿಗೆ ತಕ್ಕ ಭಾವ, ಅಳತೆಗೆ ತಕ್ಕ ನುಡಿ, ಬದುಕಿಗೆ ತಕ್ಕ ನಡೆ ಎಂದು ಮರೆಯಾದ ಮಡದಿ ಬಗ್ಗೆ ಸೋಷಿಯಲ್ ಮೀಡಿಯಾ ಪೋಸ್ಟ್ ಹಂಚಿಕೊಂಡಿದ್ದಾರೆ. Vijay Raghavendra: ಸ್ಯಾಂಡಲ್ವುಡ್ ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ರಾಘವೇಂದ್ರ ನಿಧನರಾಗಿ ಎರಡು ವಾರ ಕಳೆಯುತ್ತ ಬಂತು. ಇಂದಿಗೂ ಆ ಎರಡೂ ಕುಟುಂಬಗಳಲ್ಲಿ ಕಣ್ಣೀರು ನಿಂತಿಲ್ಲ. ಅಲ್ಲಿ ಮಡುಗಟ್ಟಿದ ಮೌನ, ಉಮ್ಮಳಿಸಿ […]
400 ಕೋಟಿ ರೂಪಾಯಿ ಕ್ಲಬ್ ಸೇರಿದ ‘ಜೈಲರ್’ ಸಿನಿಮಾ; ಕರ್ನಾಟಕದಲ್ಲಿ ಎಷ್ಟು ಗಳಿಕೆ?

ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶನದಲ್ಲಿ ಮೂಡಿ ಬಂದ ‘ಜೈಲರ್’ ಸಿನಿಮಾ ತಮಿಳುನಾಡಿನಲ್ಲಿ ಅಬ್ಬರಿಸಿದೆ. ಈ ಸಿನಿಮಾ ತಮಿಳುನಾಡಿನಲ್ಲಿ ಆರು ದಿನಕ್ಕೆ 134 ಕೋಟಿ ರೂಪಾಯಿ ಬಾಚಿಕೊಂಡಿದೆ. ಆಂಧ್ರ ಪ್ರದೇಶ-ನಿಜಾಮ್ ಭಾಗದಲ್ಲಿ ಸಿನಿಮಾಗೆ 49 ಕೋಟಿ ರೂಪಾಯಿ ಗಳಿಕೆ ಆಗಿದೆ. ನಟ ರಜನಿಕಾಂತ್ ನಟನೆಯ ‘ಜೈಲರ್’ ಸಿನಿಮಾ (Jailer Movie) ಆಗಸ್ಟ್ 10ರಂದು ವಿಶ್ವಾದ್ಯಂತ ರಿಲೀಸ್ ಆಯಿತು. ಮಲ್ಟಿ ಸ್ಟಾರರ್ ಸಿನಿಮಾ ಎನ್ನುವ ಕಾರಣಕ್ಕೆ ಸಿನಿಮಾ ಮೇಲೆ ಹೆಚ್ಚು ನಿರೀಕ್ಷೆ ಇತ್ತು. ಹೀಗಾಗಿ, ಈ ಚಿತ್ರಕ್ಕೆ ಮೊದಲ ದಿನವೇ ಭರ್ಜರಿ ಸ್ವಾಗತ ಸಿಕ್ಕಿತು. ಬಾಕ್ಸ್ […]
ಜಿಆರವಿ ನ್ಯೂಸ ಅತೀ ಶೀಘ್ರವಾಗಿ ನಿಮ್ಮ ಮುಂದೆ ಬರಲಿದೆ.ಗುತ್ತಿಗೆದಾರರ ರಕ್ಷಣೆಗೆ ಹಾಗೂ ಗುತ್ತಿಗೆದಾರರ ಧ್ವನಿ ಆಗಲಿದೆ.