ಸತ್ತವರಿಗಾಗಿ ಇದ್ದವರು ಜೀವ ಕೊಡುತ್ತಾರೆಯೇ? ಸತ್ತವರು ಸಾಯಲಿ

ದಿನಕ್ಕೊಂದು ಕಥೆ : ಗುರು ವಾಣಿ ಒಂದು ಊರಲ್ಲಿ ಗುರುಬಸಪ್ಪ ಗುರುಲಿಂಗವ್ವ ಎಂಬ ಗಂಡಹೆಂಡತಿಯರಿದ್ದರು. ಗುರುಬಸಪ್ಪನಂತೂ ತನ್ನ ಹೆಂಡತಿಯನ್ನು ಇನ್ನೊಬ್ಬರ ಎದುರಿನಲ್ಲಿ ಎಷ್ಟು ಹೊಗಳಿದರೂ ತೀರುತ್ತಿರಲಿಲ್ಲ. ಒಂದು ದಿನ ತನ್ನ ಗುರುಗಳ ಬಳಿಗೆ ಹೋದಾಗಲೂ ಕೂಡಾ ಅವನು ತನ್ನ ಹೆಂಡತಿಯ ವರ್ಣನೆಯನ್ನು ಮಾಡುತ್ತಾ “ನನ್ನ ಹೆಂಡತಿಯು ನನಗೆ ಪ್ರಾಣಕ್ಕೆ ಪ್ರಾಣ ಕೊಡಬಲ್ಲಳು” ಎಂದ. ಆಗ ಗುರುಗಳು “ನೀನು ಇಷ್ಟು ಹೆಂಡತಿಯನ್ನು ಹೊಗಳುತ್ತಿರುವಿ ಎಂದಮೇಲೆ ಪರೀಕ್ಷೆಮಾಡಬೇಕು” ಎಂದು ಹೇಳಿ ಗುರುಬಸಪ್ಪನಿಗೆ ಯೋಗಸಾಧನೆಯನ್ನು ಕಲಿಸಿಕೊಟ್ಟು, “ಮನೆಗೆ ಹೋಗಿ ಪ್ರಾಣವಾಯು ವನ್ನು […]

ಪಂದ್ಯದಲ್ಲಿ ಗೆದ್ದು ಪ್ರಥಮ ಪೂಜ್ಯತೆ ಪಡೆದ ಗಣೇಶ

ದಿನಕ್ಕೊಂದು ಕಥೆ ಒಂದು ದಿನ ಕೈಲಾಸ ವಾಸನಾದ ಶಿವ ಮತ್ತು ಮಡದಿ ಪಾರ್ವತಿ ತಮ್ಮಿಬ್ಬರ ಪುತ್ರರಾದ ಗಣೇಶ ಮತ್ತು ಸುಬ್ರಹ್ಮಮಣ್ಯರೊಂದಿಗೆ ಸಂತಸದಿಂದ ಕಾಲಕಳೆಯುತ್ತಿದ್ದರು. ತಮ್ಮ ಇಬ್ಬರ ಮಕ್ಕಳಿಗಾಗಿ ಒಂದು ಸ್ಪರ್ಧೆ ಇಟ್ಟು, ಒಂದು ಹಣ್ಣು ತೋರಿಸಿದರು. ಇಬ್ಬರಿಗೂ ತಮಗೇ ಆ ಹಣ್ಣು ಸೇರಬೇಕೆಂಬ ಆಸೆಯಿತ್ತು. ಏಕೆಂದರೆ ಆ ಹಣ್ಣು ವಿಶೇಷವಾದ ಜ್ಞಾನ ಮತ್ತು ಎಂದಿಗೂ ಅಳಿಯದ ವಿಶೇಷತೆಯನ್ನು ಹೊಂದಿತ್ತು. ಈ ಹಣ್ಣು ಪಡೆಯಲು ಪ್ರಪಂಚವನ್ನು ಮೂರು ಸುತ್ತು ಪ್ರದಕ್ಷಿಣೆ ಹಾಕಿ, ಯಾರು ಮೊದಲು ಬರುವರೋ ಅವರಿಗೆ ಆ […]

ಹಾವೇರಿ ಪಟಾಕಿ ಗೋದಾಮು ದುರಂತ: ನಾಲ್ವರ ವಿರುದ್ಧ ಎಫ್​ಐಆರ್​ ದಾಖಲು, ತನಿಖೆಗೆ ಬೊಮ್ಮಾಯಿ ಆಗ್ರಹ

ಹಾವೇರಿ: ಜಿಲ್ಲೆಯ ಆಲದಕಟ್ಟಿ ಬಳಿ ಪಟಾಕಿ (Firecracker) ಗೋದಾಮಿಗೆ ಬೆಂಕಿ ಹೊತ್ತಿಕೊಂಡು ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರ ವಿರುದ್ಧ ಎಫ್​​ಐಆರ್ (FIR) ದಾಖಲಾಗಿದೆ. ಪಟಾಕಿ ಅಂಗಡಿ ಮಾಲೀಕರಾದ ಕೆ.ಬಿ ಜಯಣ್ಣ, ಸಿ.ಜೆ ವೀರೇಶ್, ವಿಜಯ್ ಯರೇಶೇಮಿ, ಕುಮಾರಪ್ಪ ಸಾತೇನಹಳ್ಳಿ ಅವರ ಮೇಲೆ ಪ್ರಕರಣ ದಾಖಲಾಗಿದೆ. ನಿರ್ಲಕ್ಷ್ಯತನದಿಂದ ಯಾವುದೇ ಸುರಕ್ಷತಾ ಕ್ರಮಕೈಗೊಂಡಿಲ್ಲ. ಅಲ್ಲದೇ ಕಾರ್ಮಿಕರಿಗೆ ಯಾವುದೇ ಸುರಕ್ಷತೆ ಒದಗಿಸದ ಹಿನ್ನೆಲೆಯಲ್ಲಿ ಅನಾಹುತ ಸಂಭವಿಸಿದೆ ಎಂದು ಮೃತ ಕಾರ್ಮಿಕ ದ್ಯಾಮಪ್ಪ ಓಲೇಕಾರ ಸಂಬಂಧಿಕ ಕಾಟೇನಹಳ್ಳಿ ಗ್ರಾಮದ ದುರಗಪ್ಪ ಓಲೆಕಾರ್ […]

ಮಾಜಿ ಸಿಎಂ ಹೆಚ್.​ಡಿ .ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲು

ಬೆಂಗಳೂರು : ಅನಾರೋಗ್ಯದ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸತತ ಪ್ರವಾಸ ಕಾರಣ ಕುಮಾರಸ್ವಾಮಿ ಜ್ವರದಿಂದ ಬಳಲುತ್ತಿದ್ದು, ನಿನ್ನೆ ತಡರಾತ್ರಿ ನಗರದ ಬನ್ನೇರುಘಟ್ಟ ರಸ್ತೆಯ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಮಾಹಿತಿ ದೊರೆತಿದೆ. ಕೋಲಾರ ಭೇಟಿ ರದ್ದು : ಜ್ವರದಿಂದ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆ ಕುಮಾರಸ್ವಾಮಿಯವರ ಇಂದಿನ ಕೋಲಾರ ಭೇಟಿ ರದ್ದಾಗಿದೆ. ಕೋಲಾರದ ಶ್ರೀನಿವಾಸಪುರದಲ್ಲಿ ಕುಮಾರಸ್ವಾಮಿ ರೈತರ ಜಮೀನುಗಳಿಗೆ ಭೇಟಿ ನೀಡುವ ಕಾರ್ಯಕ್ರಮ ನಿಗದಿಯಾಗಿತ್ತು. ಅರಣ್ಯ ಇಲಾಖೆ ಒತ್ತುವರಿ ತೆರವು ವೇಳೆ ರೈತರ […]

‘ಗೃಹಲಕ್ಷ್ಮಿ’ಗೆ ಚಾಲನೆ ನೀಡಲು ರಾಜ್ಯಕ್ಕೆ ಇಂದು ರಾಹುಲ್ ಆಗಮನ

ಬೆಂಗಳೂರು : ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾಗಿರುವ ‘ಗೃಹಲಕ್ಷ್ಮೀ’ ಯೋಜನೆಗೆ ಚಾಲನೆ ನೀಡಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ರಾಜ್ಯಕ್ಕೆ ಆಗಮಿಸಲಿದ್ದಾರೆ. ಬೆಳಗ್ಗೆ 8 ಗಂಟೆಗೆ ದೆಹಲಿಯಿಂದ ಹೊರಡಲಿರುವ ಅವರು, ಖಾಸಗಿ ವಿಮಾನದಲ್ಲಿ 10:50ಕ್ಕೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ. ಬಳಿಕ ಅಲ್ಲಿಂದ ವಿಶೇಷ ವಿಮಾನದ ಮೂಲಕ ನೇರವಾಗಿ ಮೈಸೂರನ ಮಂಡಕಳ್ಳಿ ವಿಮಾನ ನಿಲ್ದಾಣ ಬೆಳಗ್ಗೆ 11:40 ಕ್ಕೆ ತಲುಪಲಿದ್ದಾರೆ. ನಂತರ ಅಲ್ಲಿಂದ ರಸ್ತೆ ಮೂಲಕ ಮಹಾರಾಜ ಕಾಲೇಜ್ ಕಾಲೇಜು ಮೈದಾನ ತಲುಪಲಿದ್ದಾರೆ. […]

ಬಿಜೆಪಿ ವಿಪಕ್ಷ ನಾಯಕನ ಹೆಸರು ಬಹುತೇಕ ಫೈನಲ್?

ಬೆಂಗಳೂರು : ವಿಧಾನಸಭೆ ಚುನಾವಣೆ ನಡೆದು ನಾಲ್ಕು ತಿಂಗಳು ಕಳೆದರೂ, ವಿಪಕ್ಷ ನಾಯಕನನ್ನು ಆಯ್ಕೆ ಮಾಡದೆ ರಾಜ್ಯ ಬಿಜೆಪಿ ತೀವ್ರ ಮುಖಭಂಗ ಎದುರಿಸಿತ್ತು. ಇದೀಗ ಹೈಕಮಾಂಡ್ ನಾಯಕರು ಅಳೆದು ತೂಗಿ ವಿಪಕ್ಷ ನಾಯಕನ ಸ್ಥಾನಕ್ಕೆ ಒಬ್ಬರ ಹೆಸರನ್ನು ಅಂತಿಮಗೊಳಿಸಿದ್ದಾರೆ ಎಂಬ ಮಾಹಿತಿ ದೊರೆತಿದೆ. ವಿಪಕ್ಷ ನಾಯಕ ಸ್ಥಾನದ ರೇಸ್ ನಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಚಿವರಾದ ಆರ್. ಅಶೋಕ್, ಅಶ್ವಥ ನಾರಾಯಣ, ವಿ. ಸೋಮಣ್ಣ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇದ್ದರು. ಈ ಪೈಕಿ […]

ಡಿಕೆಶಿ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಯಾದ ಆಯನೂರು ಮಂಜುನಾಥ್!

ಬೆಂಗಳೂರು: ಶಿವಮೊಗ್ಗದ ಹಿರಿಯ ನಾಯಕರಾದ ಆಯನೂರು ಮಂಜುನಾಥ್ ಅವರು ತಮ್ಮ ಬೆಂಬಲಿಗರೊಂದಿಗೆ ಇಂದು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು. ನಗರದ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಮಂಜುನಾಥ್ ಅವರನ್ನು ಆತ್ಮೀಯವಾಗಿ ಸ್ವಾಗತಿಸಿ ಮುಂದಿ‌ನ ರಾಜಕೀಯ ಜೀವನ ಚೆನ್ನಾಗಿರಲಿ ಎಂದು ಶುಭ ಹಾರೈಸಿದರು. ನಂತರ ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ಪಕ್ಷದ ನಾಯಕರಾಗಲಿ, ಕಾರ್ಯಕರ್ತರಾಗಲಿ ಎಲ್ಲರಿಗೂ ನಾನು ಹೇಳುವುದು ಇಷ್ಟೇ. ನೀವು ಕಾಂಗ್ರೆಸ್ ಪಕ್ಷದಲ್ಲಿ ಬೇರೂರಿದರೆ […]

ಮಿಜೋರಾಂ: ನಿರ್ಮಾಣ ಹಂತದ ರೈಲ್ವೆ ಸೇತುವೆ ಕುಸಿತ ಪ್ರಕರಣ: ಮುಂದುವರೆದ ಶೋಧ, ರಕ್ಷಣಾ ಕಾರ್ಯಾಚರಣೆ

ಮಿಜೋರಾಂ: ಐಜ್ವಾಲ್‌ನಿಂದ ಸುಮಾರು 20 ಕಿ.ಮೀ ದೂರದಲ್ಲಿರುವ ಸೈರಾಂಗ್ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿರುವ ರೈಲ್ವೆ ಸೇತುವೆ ಕುಸಿದು ಬಿದ್ದಿದ್ದು, ಕನಿಷ್ಠ 18 ಕಾರ್ಮಿಕರು ಸಾವನ್ನಪ್ಪಿದ್ದಾರೆ. ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಬುಧವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಐಜ್ವಾಲ್ ನಗರದಿಂದ 19 ಕಿ.ಮೀ ದೂರದಲ್ಲಿರುವ ಸೈರಾಂಗ್​ನಲ್ಲಿ ಈ ಘಟನೆ ನಡೆದಿದೆ.  ಅಧಿಕಾರಿಗಳ ಪ್ರಕಾರ, ಸ್ಥಳದಲ್ಲಿ ಕೆಲಸ ಮಾಡುತ್ತಿದ್ದ ಇತರ ಕಾರ್ಮಿಕರನ್ನು ರಕ್ಷಿಸಲು ದಿನವಿಡೀ ರಕ್ಷಣಾ ಕಾರ್ಯಾಚರಣೆಗಳು ಪ್ರಗತಿಯಲ್ಲಿದೆ. ಈ ಪ್ರದೇಶದ ಗುಡ್ಡಗಾಡು ಪ್ರದೇಶದಲ್ಲಿ ಸುಮಾರು 100 ಮೀಟರ್‌ […]

ಗೊಲ್ಲರಹಟ್ಟಿಯಲ್ಲಿ ಮರುಕಳಿಸಿದ ಮೌಢ್ಯಾಚರಣೆ… ಊರಿಂದ ಹೊರಗೆ ಗುಡಿಸಲಲ್ಲಿ ಇರಿಸಿದ್ದ ಬಾಣಂತಿ, ಶಿಶು ರಕ್ಷಿಸಿದ ಜಡ್ಜ್​!​

ತುಮಕೂರು: ಮೂಢನಂಬಿಕೆ ಪಾಲಿಸಲು ಬಾಣಂತಿ ಹಾಗೂ ಶಿಶುವನ್ನು ಊರಿನಿಂದ ಹೊರಗಿಟ್ಟಾಗ ಜಿಲ್ಲೆಯ ಗೊಲ್ಲರಹಟ್ಟಿ ಸಮೀಪ ಮಗು ಮೃತಪಟ್ಟು ಬಾಣಂತಿ ನರಳಾಡಿದ ಘಟನೆ ಮಾಸುವ ಮುನ್ನವೇ ಮತ್ತೊಂದು ಇದೇ ರೀತಿಯ ಪ್ರಕರಣ ಬೆಳಕಿಗೆ ಬಂದಿದೆ. ಮತ್ತೊಬ್ಬ ಬಾಣಂತಿಯನ್ನು ಗ್ರಾಮದಿಂದ ಹೊರಗಿಡಲಾಗಿದ್ದು, ನ್ಯಾಯಾಧೀಶರು ಮಧ್ಯಪ್ರವೇಶಿಸಿ ಮೌಢ್ಯಾಚರಣೆಗೆ ತಡೆಯೊಡ್ಡಿದ ಘಟನೆ ಗುಬ್ಬಿ ತಾಲೂಕಿನ ವರದೇನಹಳ್ಳಿ ಗೊಲ್ಲರಹಟ್ಟಿಯಲ್ಲಿ ನಡೆದಿದೆ. ಬಾಣಂತಿಯನ್ನು ಹೊರಗಿಟ್ಟಿರುವ ಬಗ್ಗೆ ಬುಧವಾರ ಮಾಹಿತಿ ತಿಳಿದು ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ ಗುಬ್ಬಿ ನ್ಯಾಯಾಲಯದ ನ್ಯಾಯಾಧೀಶರಾದ ಉಂಡಿ ಮಂಜುಳ ಶಿವಪ್ಪ ಅವರು […]

ಚಂದ್ರನ ದಕ್ಷಿಣ ಧ್ರುವದಲ್ಲಿ ಲ್ಯಾಂಡರ್​ ಇಳಿಸಿದ ಇಸ್ರೋಗೆ ವಿಶ್ವದಮೆಚ್ಚುಗೆ

ಶತಮಾನಗಳಿಂದ ಬೆಳಕನ್ನೆ ಕಾಣದ ಚಂದ್ರನ ದಕ್ಷಿಣ ಧ್ರುವಕ್ಕೆ ಚಂದ್ರಯಾನ-3 ನೌಕೆಯ ಲ್ಯಾಂಡರ್​ ಅನ್ನು ಯಶಸ್ವಿಯಾಗಿ ಇಳಿಸಿದ ಭಾರತವನ್ನೀಗ ವಿಶ್ವವೇ ಹಾಡಿ ಹೊಗಳುತ್ತಿದೆ. ಬಾಹ್ಯಾಕಾಶ ಯಾನದಲ್ಲಿ ಸಾಧಿಸಿದ ವಿಕ್ರಮವನ್ನು ಅಮೆರಿಕದ ನಾಸಾ, ರಷ್ಯಾ, ಫ್ರಾನ್ಸ್​, ಇಂಗ್ಲೆಂಡ್​ ಸೇರಿದಂತೆ ವಿವಿಧ ದೇಶಗಳು ಮೆಚ್ಚಿಕೊಂಡು ‘ಭಲೇ ಭಾರತ’ ಎಂದಿವೆ. ಇಂಗ್ಲೆಂಡ್​ ಸಂಸತ್​ ಸದಸ್ಯ ಲಾರ್ಡ್ ರಾಮಿ ರೇಂಜರ್ ಕೂಡ ಭಾರತದ ಚಂದ್ರಯಾನ-3 ಯಶಸ್ವಿ ಲ್ಯಾಂಡಿಂಗ್‌ಗೆ ಅಭಿನಂದಿಸಿದ್ದಾರೆ. ಚಂದ್ರನ ಮೇಲೆ ಯಾವುದೇ ದೇಶ ಮಾಡದ ಸಾಧನೆಯನ್ನು ಭಾತರ ಮಾಡಿ, ಇತಿಹಾಸ ನಿರ್ಮಿಸಿದೆ ಎಂದು […]