ನವದೆಹಲಿ : ಇಂದು ಐತಿಹಾಸಿಕ ಚಂದ್ರಯಾನ-3 ಚಂದ್ರನ ಗುರುತೇ ಇರದಂತಹ ದಕ್ಷಿಣ ಧ್ರುವದಲ್ಲಿ ಇಳಿಯಲಿದೆ, ಪ್ರಧಾನಿ ನರೇಂದ್ರ ಮೋದಿ ಅವರು 15 ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ಮೂರು ದಿನಗಳ ಅಧಿಕೃತ ಭೇಟಿಯಲ್ಲಿರುವ ದಕ್ಷಿಣ ಆಫ್ರಿಕಾದಿಂದ ಲ್ಯಾಂಡಿಂಗ್ ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಿಸಲಿದ್ದಾರೆ.
ಚಂದ್ರಯಾನ-3ರ ಲ್ಯಾಂಡರ್ ಮಾಡ್ಯೂಲ್ (LM) – ಲ್ಯಾಂಡರ್ ವಿಕ್ರಮ್ ಮತ್ತು ರೋವರ್ ಪ್ರಗ್ಯಾನ್ – ಇಂದು ಸಂಜೆ 6.04 ಕ್ಕೆ ಚಂದ್ರನ ದಕ್ಷಿಣ ಧ್ರುವದ ಬಳಿ ಸ್ಪರ್ಶಿಸಲಿದೆ.
ಅದೇ ಸಾಧನೆಯನ್ನು ಮಾಡಲು ರಷ್ಯಾದ ವಾಹನ ವಿಫಲವಾದ ಕೆಲವು ದಿನಗಳ ಬಳಿಕ, ಚಂದ್ರಯಾನ-3ರ ಯಶಸ್ಸು ಚಂದ್ರನ ಮೇಲ್ಮೈಯಲ್ಲಿ ಸಾಫ್ಟ್ ಲ್ಯಾಂಡಿಂಗ್ ತಂತ್ರಜ್ಞಾನವನ್ನು ಯುಎಸ್, ಚೀನಾ ಮತ್ತು ಹಿಂದಿನ ಸೋವಿಯತ್ ಒಕ್ಕೂಟದ ನಂತರ ಕರಗತ ಮಾಡಿಕೊಂಡ ರಾಷ್ಟ್ರಗಳ ಸಾಲಿನಲ್ಲಿ ಭಾರತವು ನಾಲ್ಕನೇ ಸ್ಥಾನವನ್ನು ಪಡೆಯಲಿದೆ.
ಚಂದ್ರನತ್ತ ಸಾಗುವ ಭಾರತೀಯ ಬಾಹ್ಯಾಕಾಶ ನೌಕೆಯಲ್ಲಿನ ಎಲ್ಲಾ ವ್ಯವಸ್ಥೆಗಳು “ಸಂಪೂರ್ಣವಾಗಿ” ಕಾರ್ಯನಿರ್ವಹಿಸುತ್ತಿವೆ ಮತ್ತು ಲ್ಯಾಂಡಿಂಗ್ ದಿನದಂದು ಯಾವುದೇ ಅಡಚಣೆ ಉಂಟಾಗುವುದಿಲ್ಲ ಎಂದು ಇಸ್ರೋ ವಿಜ್ಞಾನಿಗಳು ತಿಳಿಸಿದ್ದಾರೆ.
ಚಂದ್ರಯಾನ-3ರ ನೌಕೆಯನ್ನು ಕಳೆದ ಜುಲೈ 14ರಂದು ಆಂಧ್ರ ಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆ ಮಾಡಲಾಗಿತ್ತು.