KRGRV
Monday, December 23, 2024
Homeಜಿಲ್ಲಾ ಸುದ್ದಿಗಳುI.N.D.I.A ಒಕ್ಕೂಟ ಸಮನ್ವಯ ಸಮಿತಿಯ ಮೊದಲ ಸಭೆ ಯಶಸ್ವಿ; ಸೀಟು ಹಂಚಿಕೆ ಚರ್ಚೆ

I.N.D.I.A ಒಕ್ಕೂಟ ಸಮನ್ವಯ ಸಮಿತಿಯ ಮೊದಲ ಸಭೆ ಯಶಸ್ವಿ; ಸೀಟು ಹಂಚಿಕೆ ಚರ್ಚೆ

ನವದೆಹಲಿ: ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರ ನಿವಾಸದಲ್ಲಿ ನಡೆದ I.N.D.I.A ಒಕ್ಕೂಟದ ಮೊದಲ ಸಮನ್ವಯ ಸಮಿತಿಯ ಸಭೆ ಅಂತ್ಯಗೊಂಡಿದೆ. ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆ ಹಲವಾರು ವಿಚಾರಗಳು ಈ ಸಭೆಯಲ್ಲಿ ಚರ್ಚೆಯಾಗಿದೆ ಎಂದು ತಿಳಿದುಬಂದಿದೆ.

ಮೈತ್ರಿಕೂಟಗಳ ನಡುವೆ ಸೀಟು ಹಂಚಿಕೆ ಮತ್ತು ಜಾತಿ-ಗಣತಿ ಮುಂತಾದ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲಾಗಿದೆ ಎಂದು ವರದಿಯಾಗಿದೆ. ಸಭೆಯ ನಂತರ I.N.D.I.A ಮೈತ್ರಿಕೂಟ ಜಂಟಿ ಹೇಳಿಕೆಯನ್ನು ಬಿಡುಗಡೆ ಮಾಡಿದೆ.

ಈ ಕುರಿತು ಮಾತನಾಡಿದ ಕಾಂಗ್ರೆಸ್ ನಾಯಕ ಕೆ.ಸಿ. ವೇಣುಗೋಪಾಲ್ ಅಕ್ಟೋಬರ್ ಮೊದಲ ವಾರದಲ್ಲಿ ಭೋಪಾಲ್‌ನಲ್ಲಿ ಜಂಟಿ ರ‍್ಯಾಲಿ ನಡೆಸಲು ಒಮ್ಮತದ ನಿರ್ಧಾರ ಕೈಗೊಳ್ಳಲಾಗಿದೆ. ಸಮನ್ವಯ ಸಮಿತಿಯು ಸೀಟು ಹಂಚಿಕೆ ಪ್ರಕ್ರಿಯೆಗೆ ಚಾಲನೆ ನೀಡಿದ್ದು, ಎಲ್ಲಾ ಪಕ್ಷಗಳು ಆದಷ್ಟು ಬೇಗ ನಿರ್ಧಾರಕ್ಕೆ ಬರಲು ಚರ್ಚೆಯಲ್ಲಿ ತೊಡಗಲು ನಿರ್ಧರಿಸಲಾಗಿದೆ. ಇಂದಿನ ಸಭೆಯಲ್ಲಿ 12 ವಿವಿಧ ಪಕ್ಷಗಳ ಮುಖಂಡರು ಭಾಗವಹಿಸಿದ್ದರು. ಮೊದಲ ರ್ಯಾಲಿಯಲ್ಲಿ , ಹಣದುಬ್ಬರ, ನಿರುದ್ಯೋಗ ಮತ್ತು ಬಿಜೆಪಿಯ ಭ್ರಷ್ಟಾಚಾರದ ವಿಷಯಗಳನ್ನು ಪ್ರಸ್ತಾಪಿಸಲಾಗುವುದು ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ಮುಂಬೈನಲ್ಲಿ ನಡೆದ ಮೂರನೇ ಸಭೆಯಲ್ಲಿ I.N.D.I.A ಒಕ್ಕೂಟ 14 ಸದಸ್ಯರ ಸಮನ್ವಯ ಸಮಿತಿಯನ್ನು ಘೋಷಿಸಿತ್ತು. ಇಂದಿನ ಸಭೆಯಲ್ಲಿ ಸೀಟು ಹಂಚಿಕೆ ಪ್ರಧಾನ ಅಂಶವಾಗಿ ಚರ್ಚಿಸಲಾಗಿದ್ದು, ಎಲ್ಲಾ ಸದಸ್ಯರು ಒಮ್ಮತ ಸೂಚಿಸಿದ್ದಾರೆ ಎಂದು ಬಿಡುಗಡೆ ಮಾಡಲಾದ ಜಂಟಿ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಹೆಚ್ಚಿನ ಸುದ್ದಿ