ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ಟಿಕೆಟ್ ಗೊಂದಲದ ನಡುವೆಯೇ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿಪಿ ಯೋಗಿಶ್ವರ್ ಅವರು ವಿಧಾನ ಪರಿಷತ್ ಸ್ಥಾನಕ್ಕೆ ಇಂದು (ಅಕ್ಟೋಬರ್ 21) ರಾಜೀನಾಮೆ ಸಲ್ಲಿಸಲಿದ್ದಾರೆ. ಇಂದು ನಾಲ್ಕು ಗಂಟೆಗೆ ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿ ತಮ್ಮ ರಾಜೀನಾಮೆ ಪತ್ರವನ್ನು ನೀಡಲಿದ್ದಾರೆ.ಇದು ಚನ್ನಪಟ್ಟಣ ಉಪ ಚುನಾವಣೆ ಕಾವು ಮತ್ತಷ್ಟು ಹೆಚ್ಚಾಗುವಂತೆ ಮಾಡಿದೆ.
ಅಲ್ಲದೆ, ಹೆಚ್ಡಿ ಕುಮಾರಸ್ವಾಮಿ ಪುತ್ರ ನಿಖಿಲ್ಗೆ ಟಿಕೆಟ್ ನೀಡುವುದು ಖಚಿತವಾಗಿರುವ ಬೆನ್ನಲ್ಲೇ ಸ್ವತಂತ್ರವಾಗಿ ಸ್ಪರ್ಧಿಸಲು ಸಿಪಿವೈ ಸಿದ್ದತೆ ನಡೆಸಿದ್ದಾರೆ.
ಬಿಜೆಪಿಯಿಂದ ಕ್ಷೇತ್ರದ ಟಿಕೆಟ್ ಸಿಗದಿರುವ ಹಿನ್ನೆಲೆಯಲ್ಲಿ ಈಗಾಗಲೇ ಅಸಮಾಧಾನ ಹೊರಹಾಗಿರುವ ಯೋಗಿಶ್ವರ್, ತಮ್ಮ ಎಂಎಲ್ಸಿ ಸ್ಥಾನ ತೊರೆದು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಲೆಕ್ಕಾಚಾರದಲ್ಲಿದ್ದಾರೆ. ಚನ್ನಪಟ್ಟಣ ಕ್ಷೇತ್ರಕ್ಕೆ ಟಿಕೆಟ್ ಅಂತಿಮಗೊಳಿಸುವ ಕುರಿತು ಈಗಾಗಲೇ ಹಲವು ಸಭೆಗಳು ನಡೆದಿವೆ. ಬಿಜೆಪಿ ಮತ್ತು ಜೆಡಿಎಸ್ ಮುಖಂಡರು, ನಾಯಕರೊಂದಿಗೆ ಸಭೆ ನಡೆಸಿರುವ ಸಿಪಿವೈ, ಹೆಚ್ಡಿಕೆ, ಯಾರಿಗೆ ಟಿಕೆಟ್ ನೀಡಬೇಕು ಎನ್ನುವುದರ ಕುರಿತು ಚರ್ಚೆ ನಡೆದಿದೆ. ಆದರೆ ಸಿಪಿವೈ, ನಿಖಿಲ್ಗೆ ಟಿಕೆಟ್ ನೀಡುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಜೆಡಿಎಸ್ನಿಂದಲೇ ಸ್ಪರ್ಧಿಸುವಂತೆ ಯೋಗಿಶ್ವರ್ಗೆ ಆಫರ್ ನೀಡಿದ್ದಾರೆ. ಆದರೆ, ಅವರು ಒಪ್ಪಿಗೆ ನೀಡಿಲ್ಲ.
ಸಿಪಿ ಯೋಗಿಶ್ವರ್ ಹೇಳಿದ್ದೇನು?
ಆದರೆ, ಸಿಪಿವೈ ಬಿಜೆಪಿಯಿಂದಲೇ ಸ್ಪರ್ಧಿಸುವುದಾಗಿ ಕಡ್ಡಿ ಮುರಿದಂತೆ ಹೇಳಿಕೆ ನೀಡಿದ್ದಾರೆ. ಕುಮಾರಸ್ವಾಮಿ ಅವರ ಬಳಿ ಮನವೊಲಿಸಲು ಸಿಪಿವೈ ಪ್ರಯತ್ನಿಸಿದ್ದಾರೆ. ಆದರೆ ಹೆಚ್ಡಿಕೆ, ಒಪ್ಪುತ್ತಿಲ್ಲ. ಆದರೆ, ಈ ಸಭೆಗಳಲ್ಲಿ ನಿಖಿಲ್ ಕುಮಾರಸ್ವಾಮಿಗೆ ಟಿಕೆಟ್ ನೀಡಲು ಹೆಚ್ಚು ಬೆಂಬಲ ಸಿಕ್ಕಿದೆ. ಹೀಗಾಗಿ ಟಿಕೆಟ್ ಸಿಗದ್ದಕ್ಕೆ ಬೇಸರ ಹೊರ ಹಾಕಿರುವ ಯೋಗಿಶ್ವರ್, ಜೆಡಿಎಸ್ ಹಾಗೂ ಬಿಜೆಪಿ ಒಟ್ಟಿಗೆ ಚುನಾವಣೆ ಎದುರಿಸಬೇಕು. ಆದರೆ ಮೊದಲಿನಿಂದಲೂ ಬಿಜೆಪಿಯಿಂದಲೇ ಸ್ಪರ್ಧಿಸಬೇಕು ಎಂಬುದು ಆಸೆಯಿದೆ. ಆದರೆ ಜೆಡಿಎಸ್ನಿಂದ ಸ್ಪರ್ಧಿಸುವಂತೆ ಮಾತನಾಡಿದ್ದಾರೆ. ಇದಕ್ಕೆ ನಮ್ಮ ಕಾರ್ಯಕರ್ತರು ಒಪ್ಪುತ್ತಿಲ್ಲ. ಹಲವು ಬಾರಿ ಪಕ್ಷಾಂತರ ಆಗಿದ್ದೇನೆ. ಇದೀಗ ಬಿಜೆಪಿಯಿಂದಲೇ ಸ್ಪರ್ಧಿಸುವಂತೆ ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ. ಹಾಗಾಗಿ, ಬೇರೆ ಪಕ್ಷದಿಂದ ಸ್ಪರ್ಧಿಸಲ್ಲ ಎಂದಿದ್ದಾರೆ.