ಕಲಬುರ್ಗಿ, ಪನ್ಸಾರೆ, ದಾಭೋಲ್ಕರ್​, ಗೌರಿ ಹತ್ಯೆ ಪ್ರಕರಣಗಳಲ್ಲಿ ‘ಸಾಮಾನ್ಯ ಸಂಬಂಧ’ವಿದೆಯೇ?: ಪರಿಶೀಲಿಸಲು CBIಗೆ ಸುಪ್ರೀಂ ಸೂಚನೆ

ನವದೆಹಲಿ: ಕರ್ನಾಟಕದ ಸಾಹಿತಿ ಎಂ.ಎಂ.ಕಲಬುರ್ಗಿ, ಲೇಖಕಿ ಗೌರಿ ಲಂಕೇಶ್​ ಹಾಗೂ ಮಹಾರಾಷ್ಟ್ರದ ವಿಚಾರವಾದಿಗಳಾದ ಗೋವಿಂದ್​ ಪನ್ಸಾರೆ, ನರೇಂದ್ರ ದಾಭೋಲ್ಕರ್​ ಹತ್ಯೆಗಳ ನಡುವೆ ಪರಸ್ಪರ ಸಾಮಾನ್ಯ ಸಂಬಂಧವಿದೆಯೇ ಎಂಬುದರ ಕುರಿತು ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ ಇಂದು​ (ಶುಕ್ರವಾರ) ಕೇಂದ್ರೀಯ ತನಿಖಾ ಸಂಸ್ಥೆಗೆ (ಸಿಬಿಐ) ಸೂಚಿಸಿತು. ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣದ ತನಿಖೆಯ ಮೇಲ್ವಿಚಾರಣೆ ಮಾಡಲು ಇದೇ ಏಪ್ರಿಲ್​ 18ರಂದು ಬಾಂಬೆ ಹೈಕೋರ್ಟ್​ ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ಅವರ ಪುತ್ರಿ ಮುಕ್ತಾ ದಾಭೋಲ್ಕರ್ ಸುಪ್ರೀಂ ಕೋರ್ಟ್​ ಮೊರೆ ಹೋಗಿದ್ದಾರೆ. ಇವರು […]