ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ

ಬೆಂಗಳೂರು : ಇಂದು ಸಂಜೆ 4 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದೆ. ಇಂದಿನ ಸಭೆಯಲ್ಲಿ ಹಲವು ಮಹತ್ವದ ವಿಷಯಗಳು ಚರ್ಚೆಗೆ ಬರುವ ಸಾಧ್ಯತೆ ಇದೆ. ಪ್ರಮುಖವಾಗಿ ಈ ಕೆಳಗಿನ ವಿಷಯಗಳ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ನಡೆಯುವ ನಿರೀಕ್ಷೆಯಿದೆ.
ಪಿಎಂ ಕೇರ್ಸ್ ದುಡ್ಡಿನಿಂದ ಯಾರಿಗೆ ಲಾಭವಾಗುತ್ತಿದೆ? ; ಮೋದಿಗೆ ಸರಣಿ ಪ್ರಶ್ನೆಗಳ ಮುಂದಿಟ್ಟ ಸಿಎಂ ಸಿದ್ದು

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಭ್ರಷ್ಟಾಚಾರ ಸೇರಿ ಕಮಿಷನ್ ಆರೋಪ ಹೊರಿಸಿ ವಾಗ್ದಾಳಿ ನಡೆಸುತ್ತಿದೆ. ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ಮೋದಿ ಅವರಿಗೆ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಮಾನ್ಯ ಪ್ರಧಾನಿ ನರೇಂದ್ರ ಮೋದಿ ಅವರೇ, ಅಯೋಧ್ಯೆಯ ರಾಮ ಮಂದಿರ ನಿರ್ಮಾಣದಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿರುವ ಬಗ್ಗೆ ನಿಮ್ಮದೇ ಪರಿವಾರ ಆರೋಪಗಳನ್ನು ಮಾಡತೊಡಗಿದೆ. ‘ಪಿಎಂ ಕೇರ್ಸ್ ಫಂಡ್’ ಅನ್ನು ಸರ್ಕಾರದ್ದೆಂದು ಭಾವಿಸಿ ಮುಗ್ಧ ಜನತೆ ಅಪಾರ ಪ್ರಮಾಣದಲ್ಲಿ […]