ರಾಜ್ಯ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ಹೃದಯಾಘಾತದಿಂದ ಸಾವು

ಬೆಂಗಳೂರು : ರಾಜ್ಯ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಇಂದು ಸಂಜೆ 6:40ರ ಸುಮಾರಿಗೆ ಹೃದಯಘಾತದಿಂದ ಅಂಬಿಕಾ ಪತಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಬೆಂಗಳೂರಿನ ಹೆಬ್ಬಾಳದ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಕೆಲವು ದಿನಗಳ ಹಿಂದೆ ಅಂಬಿಕಾಪತಿ ಮೇಲೆ ಮನೆ ಮೇಲೆ ಐಟಿ ದಾಳಿ ನಡೆಸಿತ್ತು. ಅಲ್ಲದೆ ಇದೇ ವೇಳೆ ಅಂಬಿಕಾ ಪತಿ ಮನೆಯಲ್ಲಿ 42 ಕೋಟಿ ಹಣ ಪತ್ತೆಯಾಗಿತ್ತು. ಹೃದಯಾಘಾತದಿಂದ ಅಂಬಿಕಾ ಪತಿ ಕೊನೆಯುಸಿ ಬೆಳೆದಿದ್ದು ಕೆಲವು ದಿನಗಳ ಹಿಂದೆ ಐಟಿ ದಾಳಿ ನಡೆಸಿತ್ತು […]

ಪಾಕಿಸ್ತಾನದಲ್ಲಿ ಚೀನಾ ಇಂಜಿನಿಯರ್ ಗಳ ಬೆಂಗಾವಲು ಪಡೆ ಮೇಲೆ ದಾಳಿ

ವದಾರ್: ಪಾಕಿಸ್ತಾನದಲ್ಲಿ ಚೀನಾ ಪ್ರಜೆಗಳನ್ನು ಟಾರ್ಗೆಟ್ ಮಾಡಲಾಗುತ್ತಿದ್ದು, ಈಗ ಚೀನಾ ಇಂಜಿನಿಯರ್ ಗಳ ಬೆಂಗಾವಲು ಪಡೆ ಮೇಲೆ ದಾಳಿ ನಡೆಸಲಾಗಿದೆ.  ಗ್ವದಾರ್ ನ ಪೊಲೀಸ್ ಠಾಣೆಯ ಬಳಿ ಭಾನುವಾರದಂದು ಈ ಘಟನೆ ವರದಿಯಾಗಿದೆ.  ಬೆಂಗಾವಲು ಪಡೆಯ 3 ಎಸ್ ಯುವಿ ಹಾಗೂ ವ್ಯಾನ್ ಗಳು ಗುಂಡು ನಿರೋಧಕ ವಾಹನಗಳಾಗಿದ್ದು ಇದರಲ್ಲಿ ಚೀನಾದ 23 ಸಿಬ್ಬಂದಿಗಳನ್ನು ಹೊತ್ತೊಯ್ಯುತ್ತಿತ್ತು ದಾಳಿಯ ಸಮಯದಲ್ಲಿ ಐಇಡಿ ಸ್ಫೋಟಗೊಂಡಿದ್ದು ವ್ಯಾನ್‌ಗೆ ಗುಂಡು ಹಾರಿಸಲಾಗಿದೆ. ದಾಳಿಯ ಪರಿಣಾಮ ಗಾಜಿನಲ್ಲಿ ಬಿರುಕುಗಳುಂಟಾಗಿದೆ ಎಂದು ಚೀನಾದ ಗ್ಲೋಬಲ್ ಟೈಮ್ಸ್ ವರದಿ […]

ದೇವಸ್ಥಾನಗಳಿಗೆ ಅನುದಾನ ತಡೆ : ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಚಿವೆ ಶಶಿಕಲಾ ಜೊಲ್ಲೆ ಕಿಡಿ

ಚಿಕ್ಕೋಡಿ : ದೇವಸ್ಥಾನಗಳಿಗೆ ಅನುದಾನ ಬಿಡುಗಡೆಗೆ ರಾಜ್ಯ ಸರ್ಕಾರ ತಡೆ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಸರ್ಕಾರದ ನಿರ್ಧಾರಕ್ಕೆ ಖಂಡನೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾಧ್ಯಮಗಳಿಗೆ ಇಂದು ಹೇಳಿಕೆ ಬಿಡುಗಡೆ ಮಾಡಿರುವ ಅವರು, ಭಾರತೀಯ ಸಂಸ್ಕೃತಿಯಲ್ಲಿ ದೇವಸ್ಥಾನಗಳಿಗೆ ಬಹಳಷ್ಟು ಮಹತ್ವ ಇದೆ. ನಮ್ಮ ಸರ್ಕಾರದಲ್ಲಿ ದೇವಸ್ಥಾನಗಳ ಜೀರ್ಣೋದ್ಧಾರಕ್ಕಾಗಿ ಅನುದಾನ ಬಿಡುಗಡೆ ಮಾಡಿದ್ದೆವು ಎಂದು ತಿಳಿಸಿದರು. ಚುನಾವಣಾ ನೀತಿ ಸಂಹಿತೆ ಜಾರಿಯಾಗಿದ್ದ ಕಾರಣಕ್ಕೆ ಎರಡನೇ ಕಂತು ಬಿಡುಗಡೆ ಆಗಿರಲಿಲ್ಲ, ಈಗ ಅನುದಾನ ತಡೆ […]

ರಾಜ್ಯ ರಾಜಕೀಯದಲ್ಲಿ ಮತ್ತೆ ಸಂಚಲನ ಮೂಡಿಸಿದ ಆಪರೇಷನ್, ಬಿಜೆಪಿ ಶಾಸಕರಿಗೆ ಕಾಂಗ್ರೆಸ್​ ಗಾಳ? ಲಿಸ್ಟ್​ನಲ್ಲಿ ಯಾರ್ಯಾರು?

ಬೆಂಗಳೂರು ; ಆ.17 : ಕರ್ನಾಟಕದಲ್ಲಿ (Karnataka Politics) ಮತ್ತೆ ಆಪರೇಷನ್ (Operation Hasta) ಬಿರುಗಾಳಿ ಎದ್ದಿದೆ. ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಬಹುಮತದಿಂದ ಗೆದ್ದು ಅಧಿಕಾರದ ಗದ್ದುಗೆ ಏರಿರುವ ಕಾಂಗ್ರೆಸ್ ಈಗ ಲೋಕಸಭೆ ಚುನಾವಣೆಗೆ (Loksabha Elections 2023) ಸಿದ್ಧವಾಗುತ್ತಿದೆ. ಲೋಕಸಭೆ ಗೆಲುವಿನ ತಂತ್ರದ ಭಾಗವಾಗೇ ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (DK Shivakumar) ಭರ್ಜರಿ ಪ್ಲ್ಯಾನ್ ರೂಪಿಸಿದ್ದು.. ಖುದ್ದು ಡಿಕೆ ಶಿವಕುಮಾರ್ ಆಪರೇಷನ್ ಸುಳಿವು ಬಿಟ್ಟು ಕೊಟ್ಟಿದ್ದಾರೆ. ಇನ್ನು ಕಾಂಗ್ರೆಸ್ ಆಪರೇಷನ್​ಗೆ ಇಂಬುಕೊಡುವಂತೆ ಡಿಕೆ ಸಹೋದರ […]

ಲೋಕಸಭೆ ಸಮರಕ್ಕೆ ‘ಕೈ’ ಪಡೆ ಸಜ್ಜು : ಬೆಂಗಳೂರಿನ ಮೂರು ಕ್ಷೇತ್ರ ಗೆಲ್ಲಲು ಮಾಸ್ಟರ್ ಪ್ಲಾನ್

ಬೆಂಗಳೂರು : ಮುಂಬರುವ ಲೋಕಸಭೆ ಚುನಾವಣೆಗೆ ರಾಜ್ಯ ಕಾಂಗ್ರೆಸ್ ಭರ್ಜರಿ ಸಿದ್ಧತೆ ಮಾಡಿಕೊಳ್ಳುತ್ತಿದೆ. ಈಗಾಗಲೇ ತೆರೆಮರೆಯಲ್ಲಿ ‘ಆಪರೇಷನ್ ಹಸ್ತ’ಕ್ಕೆ ಪ್ಲಾನ್ ಮಾಡುತ್ತಿರುವ ಕೈ ಪಡೆ, ಟಿಕೆಟ್ ಹಂಚಿಕೆ ಕುರಿತಾಗಿಯೂ ಲೆಕ್ಕಾಚಾರ ಹಾಕಲು ಪ್ರಾರಂಭಿಸಿದೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ 20ಕ್ಕೂ ಹೆಚ್ಚು ಕ್ಷೇತ್ರಗಳನ್ನು ಗೆಲ್ಲಲೇಬೇಕೆಂದು ಕಾಂಗ್ರೆಸ್ ಪಣ ತೊಟ್ಟಿದೆ. ಅದರಲ್ಲೂ ಬೆಂಗಳೂರು ನಗರ ವ್ಯಾಪ್ತಿಯ ಕ್ಷೇತ್ರಗಳ ಮೇಲೆ ವಿಶೇಷ ಕಣ್ಣಿಟ್ಟಿದೆ. ಬೆಂಗಳೂರು ಉತ್ತರ, ದಕ್ಷಿಣ ಮತ್ತು ಕೇಂದ್ರ ಮೂರೂ ಕ್ಷೇತ್ರಗಳನ್ನು‌ ಗೆಲ್ಲಲು‌ ಯೋಜನೆ ರೂಪಿಸಿದೆ. ಕಳೆದ […]

ನಮ್ಮ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಕಾಪಾಡಿಕೊಳ್ಳುವುದೇ ಸಂಗೊಳ್ಳಿರಾಯಣ್ಣನಿಗೆ ನಾವು ನೀಡುವ ನಿಜವಾದ ಗೌರವ : ಮುಖ್ಯಮಂತ್ರಿ ಸಿದ್ದರಾಮಯ್ಯ

ನಿಜವಾದ ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸುವ ಬ್ರಿಟಿಷರ ಏಜೆಂಟರ ಬಗ್ಗೆ ಎಚ್ಚರವಿರಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು, ಆ.16: ಸ್ವಾತಂತ್ರ್ಯವೀರ ಸಂಗೊಳ್ಳಿರಾಯಣ್ಣನನ್ನು ಬ್ರಿಟಿಷರಿಗೆ ಹಿಡಿದುಕೊಟ್ಟವರು ನಮ್ಮವರೇ. ಈಗಲೂ ಬ್ರಿಟಿಷರ ಏಜೆಂಟರುಗಳು ಇದ್ದಾರೆ. ಅವರು ನಮ್ಮ ನಿಜವಾದ ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸುತ್ತಾರೆ. ಇಂಥವರ ಬಗ್ಗೆ ಎಚ್ಚರದಿಂದ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಪ್ರತಿಷ್ಠಾನ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸಂಯುಕ್ತಾಶ್ರಯದಲ್ಲಿ ನಡೆದ ಕ್ರಾಂತಿವೀರ ಸಂಗೊಳ್ಳಿರಾಯಣ್ಣನವರ 226 ನೇ ಜಯಂತೋತ್ಸವದಲ್ಲಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ […]

‘ಬಾಂಬೆ ಬಾಯ್ಸ್’ ಆಪರೇಷನ್ ಗೆ ‘ಕೈ’ ಪಡೆ ಪ್ಲಾನ್ : ರಾಜ್ಯ ರಾಜಕಾರಣದಲ್ಲಿ ಸಂಚಲನ

ಬೆಂಗಳೂರು : August 16: ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ಬಂಡಾಯವೆದ್ದು ಕೇಸರಿ ಪಾಳಯ ಸೇರಿದ್ದ ಬಾಂಬೆ ಬಾಯ್ಸ್ ಮತ್ತೆ ಕೈ ಹಿಡಿಯುವ ಸುದ್ದಿ ಹಬ್ಬಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನಕ್ಕೆ ಕಾರಣವಾಗಿದೆ. ವಿಧಾನಸಭೆ ಚುನಾವಣೆಯಲ್ಲಿ ಕಮಾಲ್ ಮಾಡಿರುವ ಕೈಪಡೆ, ಲೋಕ ಸಮರದಲ್ಲಿ ಗೆದ್ದು ಬೀಗುವ ಹುಮ್ಮಸ್ಸಿನಲ್ಲಿದೆ. ಇದಕ್ಕಾಗಿ ತೆರೆಮರೆಯಲ್ಲಿ ದೊಡ್ಡ ಮಟ್ಟದ ಕಸರತ್ತು ಆರಂಭಿಸಿದೆ. ಆಪರೇಷನ್ ಹಸ್ತದ ಮೂಲಕ ಬಿಜೆಪಿ-ಜೆಡಿಎಸ್ ನಲ್ಲಿ ಮುನಿಸಿಕೊಂಡಿರುವ ನಾಯಕರನ್ನು ಪಕ್ಷಕ್ಕೆ ಕರೆ ತರುವ ಪ್ಲಾನ್ ಮಾಡಿದೆ ಎನ್ನಲಾಗ್ತಿದೆ. ಕಮಲ ಪಾಳಯದ ಘಟಾನುಘಟಿಗಳಿಗೆ ಈಗಾಗಲೇ ಗಾಳ […]

ಇಂದು ಬೆಂಗಳೂರು, ಕೋಲಾರ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕಾಂಗ್ರೆಸ್ ಶಾಸಕರ ಸಭೆ

ಬೆಂಗಳೂರು : August 16: CM ಸಿದ್ದರಾಮಯ್ಯ ಹಾಗೂ DCM ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಶಾಸಕರು, ಸಚಿವರು ಮತ್ತು ಜಿಲ್ಲಾ ಮುಖಂಡರ ಸಭೆ ಇಂದೂ ಕೂಡ ಮುಂದುವರಿದಿದ್ದು, ಬೆಂಗಳೂರು, ಕೋಲಾರ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಮುಖಂಡರ ಸಭೆ ಇಂದು ನಡೆಯಲಿದೆ. ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣದಲ್ಲಿ ಇಂದು ಬೆಳಗ್ಗೆ ಬೆಂಗಳೂರು ನಗರ ಜಿಲ್ಲೆ ಶಾಸಕರ ಸಭೆ ನಡೆಯಲಿದೆ. ಸಂಜೆ 4 ಗಂಟೆಗೆ ಕೋಲಾರ ಜಿಲ್ಲೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರು ಮತ್ತು ಸಚಿವರು ಸಭೆಯಲ್ಲಿ ಭಾಗವಹಿಸಲಿದ್ದಾರೆ. […]