ಆಪಲ್ ಕಂಪನಿ ಸಿಇಒ ಬೇಟಿ ಬಾರಿ ಮೊತ್ತದ ಬಂಡವಾಳ ಹೂಡಿಕೆ ನಿರೀಕ್ಷೆ ಡಿಸಿಎಂ

ತೈವಾನ್ ಮೂಲದ ಆಪಲ್ ಫೋನ್ ಕಂಪೆನಿ ಫಾಕ್ಸ್ಕಾನ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಅಧ್ಯಕ್ಷ ಯಂಗ್ ಲಿಯು ಅವರ ಜತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಹಾಗೂ ಸಚಿವ ಎಂ ಬಿ ಪಾಟೀಲ್ ಅವರು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಶುಕ್ರವಾರ ರಾತ್ರಿ ಸಮಾಲೋಚನೆ ನಡೆಸಿದರು. ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ ಎಲ್.ಕೆ. ಅತೀಕ್ ಅಹ್ಮದ್, ಮಾಹಿತಿ ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿ […]
ಮೂಲಭೂತ ಸೌಲಭ್ಯ ಕಲ್ಪಿಸುವಂತೆ ಅಲ್ಪಸಂಖ್ಯಾತರ ಹಾಸ್ಟೆಲ್ ಬಾಲಕರ ಆಗ್ರಹ.

ಜೇವರ್ಗಿ ಅ4 :: ಜೇವರ್ಗಿ ಪಟ್ಟಣದಲ್ಲಿನ ಅಲ್ಪಸಂಖ್ಯಾತರ ಬಾಲಕರ ವಸತಿ ನಿಲಯದಲ್ಲಿ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ ಎಂದು ಅಲ್ಲಿನ ಬಾಲಕರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಅಳಲು ತೊಡಗಿಕೊಂಡಿದ್ದರು, ತಕ್ಷಣ ಸಾಮಾಜಿಕ ಹೋರಾಟಗಾರ ಈರಣ್ಣಗೌಡ ಪಾಟೀಲ ಮತ್ತು ತಂಡ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದರುಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ ಜೇವರ್ಗಿ ವಿದ್ಯಾರ್ಥಿಗಳ ಹಾಸ್ಟೆಲ್ ನಲ್ಲಿ ಯಾವುದೇ ರೀತಿಯ ಮೂಲಭೂತ ಸೌಕರ್ಯ ದೊರೆಯುತ್ತಿಲ್ಲ ಅನೇಕ ಸಮಸ್ಯೆಗಳಿವೆ. 1.ವಿದ್ಯಾರ್ಥಿಗಳೇ ಓದಲು […]
ಐದು ಪೈಸೆ ಲಂಚ ಯಾರಾದರೂ ನನಗೆ ಕೊಟ್ಟಿದ್ದು ಸಾಬೀತಾದರೆ ರಾಜಕೀಯ ನಿವೃತ್ತಿ : ಸಿಎಂ ಸವಾಲು

ಸಣ್ಣ ಗುತ್ತಿಗೆದಾರರ ಅನುಕೂಲಕ್ಕಾಗಿ ಕ್ಷೇತ್ರವಾರು 25 ಕೋಟಿಯಂತೆ 4 ಸಾವಿರ ಕೋಟಿ ರೂಪಾಯಿಯ ಕಾಮಗಾರಿಯನ್ನು ನೀಡಲು ಲೋಕೋಪಯೋಗಿ ಸಚಿವರಿಗೆ ಸೂಚಿಸಿದ್ದೇನೆ: ಸಿ.ಎಂ ಗುತ್ತಿಗೆದಾರರ ಬಾಕಿ ಮೊತ್ತವನ್ನು ಹಂತ ಹಂತವಾಗಿ ಪೂರ್ತಿ ಪಾವತಿಸಲಾಗುವುದು: ಸಿ.ಎಂ. ಬೆಂಗಳೂರು ಫೆ 4: ಸಣ್ಣ ಗುತ್ತಿಗೆದಾರರ ಅನುಕೂಲಕ್ಕಾಗಿ 4 ಸಾವಿರ ಕೋಟಿ ರೂಪಾಯಿಯ ಕಾಮಗಾರಿಯನ್ನು ಪ್ಯಾಕೇಜ್ ಇಲ್ಲದೆ ನೀಡಲು ಲೋಕೋಪಯೋಗಿ ಸಚಿವರಿಗೆ ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅರಮನೆ ಮೈದಾನದಲ್ಲಿ ನಡೆದ ಗುತ್ತಿಗೆದಾರರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಪ್ಯಾಕೇಜ್ ಪದ್ದತಿ ರದ್ದುಗೊಳಿಸುವುದು, […]
ಗುತ್ತಿಗೆದಾರರು ರಾಜಕೀಯದಿಂದ ದೂರವಿರಿ : ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು, ಮಾರ್ಚ್. 04: ಯಾವುದೇ ಸರ್ಕಾರ ಬಂದರೂ ರಾಜಕೀಯದವರ ಸಹವಾಸ ಮಾಡಬೇಡಿ. ರಾಜಕೀಯದಿಂದರ ದೂರವಿರಿ. ಗುತ್ತಿಗೆದಾರರಿಗೆ ಅಧಿಕಾರಿಗಳ ಮತ್ತು ರಾಜಕಾರಣಿಗಳ ಕಿರುಕುಳ ಇರುವುದು ನನ್ನ ಗಮನದಲ್ಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಅರಮನೆ ಮೈದಾನದಲ್ಲಿ ಸೋಮವಾರ ನಡೆದ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಸಮ್ಮೇಳನದಲ್ಲಿ ಅವರು ಹೇಳಿದ್ದಿಷ್ಟು; ಮುಂದಿನ 9 ವರ್ಷಗಳ ಕಾಲ ನಾವೇ ಅಧಿಕಾರದಲ್ಲಿ ಇರುತ್ತೇವೆ. ನಿಮ್ಮ ಸಮಸ್ಯೆಗಳನ್ನು ನಾವೇ ಬಗೆಹರಿಸುವುದು. ನಾವೇ ಪರಿಹಾರ ನೀಡುವುದು. ಈ ವಿಚಾರ ನೆನಪಿನಲ್ಲಿ ಇಟ್ಟುಕೊಳ್ಳಿ. ಗುತ್ತಿಗೆದಾರರು ಇಲ್ಲದೇ […]
Karnataka Govt Holidays : 2024ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಬಿಡುಗಡೆ

ಬೆಂಗಳೂರು : ಮುಂಬರುವ ವರ್ಷ 2024ಕ್ಕೆ ಮುಂಜೂರಾದ ಸಾರ್ವತ್ರಿಕ ರಜೆಗಳ ಪಟ್ಟಿಯನ್ನ (Public Holidays) ಕರ್ನಾಟಕ ಸರ್ಕಾರ ಬಿಡುಗಡೆ ಮಾಡಿದೆ. ಎಲ್ಲಾ 2ನೇ ಶನಿವಾರ, 4ನೇ ಶನಿವಾರ ಮತ್ತು ಭಾನುವಾರಗಳು ರಜೆ ಇರಲಿವೆ. ಇವುಗಳು ಸೇರಿದಂತೆ ಸರ್ಕಾರದ ಕ್ಯಾಲೆಂಡರ್ ಪ್ರಕಾರ ಘೊಷಿಸಲಾಗಿರುವ ಸಾರ್ವತ್ರಿಕ ರಜಾ (Government Holidays) ದಿನಗಳ ಪಟ್ಟಿ ಇಲ್ಲಿ ನೀಡಲಾಗಿದೆ. ಜನವರಿ 15, ಸೋಮವಾರ : ಉತ್ತರಾಯಣ ಪುಣ್ಯಕಾಲ, ಮಕರ ಸಕ್ರಾಂತಿ ಜನವರಿ 26, ಶುಕ್ರವಾರ: ಗಣರಾಜ್ಯೋತ್ಸವ ಮಾರ್ಚ್ 8, ಶುಕ್ರವಾರ: ಮಹಾ ಶಿವರಾತ್ರಿ […]
ಕೇಂದ್ರ ರಕ್ಷಣ ಸಚಿವ ರಾಜನಾಥ್ ಸಿಂಗ್ ಅವರನ್ನ ಭೇಟಿ ಮಾಡಿದ ಹೆಚ್.ಡಿ.ಕೆ

ನವದೆಹಲಿ : ಡಿಸೆಂಬರ್ :22: ಇಂದು ಬೆಳಗ್ಗೆ ದೆಹಲಿಯಲ್ಲಿ ಕೇಂದ್ರ ರಕ್ಷಣ ಸಚಿವ ರಾಜನಾಥ್ ಸಿಂಗ್ ಅವರನ್ನು ಮಾಜಿ ಸಿಎಂ ಹೆಚ್ .ಡಿ.ಕುಮಾರಸ್ವಾಮೀ ಭೇಟಿ ಮಾಡಿ, ರಾಜ್ಯದ ವಿವಿಧ ವಿಷಯಗಳ ಬಗ್ಗೆ ದೀರ್ಘ ಸಮಾಲೋಚನೆ ನಡೆಸಿದರು. ಕರ್ನಾಟಕದ ಒಳಿತಿಗಾಗಿ ಸದಾ ಕೇಂದ್ರ ಸರಕಾರದ ಬೆಂಬಲ ಇರುತ್ತದೆ ಎಂದು ಕೇಂದ್ರ ಸಚಿವ ರಾಜನಾಥ್ ಸಿಂಗ್ ಭರವಸೆ ನೀಡಿದ್ದಾರೆ ಎಂದು ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಜೆಡಿಎಸ್ -ಬಿಜೆಪಿ ಮೈತ್ರಿ ಸೇರಿ ಕರ್ನಾಟಕಕ್ಕೆ ಸಂಬಂಧಿಸಿದ ಹಲವಾರು ವಿಷಯಗಳ ಬಗ್ಗೆ ಉಭಯ ನಾಯಕರು ಚರ್ಚೆ […]
Toilet cleaning : ಬೆಂಗಳೂರು ಶಾಲೇಲಿ ಮಕ್ಕಳಿಂದ ಟಾಯ್ಲೆಟ್ ಕ್ಲೀನಿಂಗ್ : ಡಿಸಿಎಂ ಡಿ.ಕೆ ಶಿವಕುಮಾರ್ ಪ್ರತಿಕ್ರಿಯೆ

ಬೆಂಗಳೂರು : ಡಿ. 22; ಕೋಲಾರ ಜಿಲ್ಲೆಯ ಯಲವಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆ (Morarji Desai Residential School) ಮಕ್ಕಳನ್ನು ಮಲದ ಗುಂಡಿಗೆ ಇಳಿಸಿ ಸ್ವಚ್ಛ ಮಾಡಿಸಿದ (Manual Scavenging) ಪ್ರಕರಣ ಮಾಸುವ ಮುನ್ನವೇ ರಾಜಧಾನಿ ಬೆಂಗಳೂರಿನಲ್ಲಿ ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛತೆ (Toilet Cleaning) ಮಾಡಿಸಲಾಗಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ ಶಿವಕುಮಾರ್ ಅವರು ಬಿಬಿಎಂಪಿ, ಶಿಕ್ಷಣ ಇಲಾಖೆ ಅಧಿಕಾರಿಗಳ […]
No restrictions on Christmas : ಕ್ರಿಸ್ಮಸ್ ಹಾಗೂ ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧ ಇಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೊರೋನಾ ಸಾಂಕ್ರಾಮಿಕ ನಿಯಂತ್ರಣಕ್ಕೆ ನಾವು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದ್ದು, ಈ ಬಗ್ಗೆ ಯಾರೊಬ್ಬರೂ ಆತಂಕಪಡಬೇಕಾದ ಅಗತ್ಯ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ. ಇಂದು ಕೋವಿಡ್ ಪರಿಸ್ಥಿತಿ ಕುರಿತು ಉನ್ನತ ಮಟ್ಟದ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಜನಸಂದಣಿ ಇರುವ ಪ್ರದೇಶಗಳಲ್ಲಿ ಮಾಸ್ಕ್ ಧರಿಸಬೇಕು. ಮಾರ್ಗಸೂಚಿ ಬಗ್ಗೆ ಸಚಿವ ಸಂಪುಟ ಉಪ ಸಮಿತಿಯಲ್ಲಿ ಚರ್ಚಿಸಲಾಗಿದೆ. ಕ್ರಿಸ್ಮಸ್ ಹಾಗೂ ಹೊಸ ವರ್ಷಾಚರಣೆಗೆ ಯಾವುದೇ ಹೊಸ […]
Parliament Security : ‘ಸಂಸತ್ ಭದ್ರತಾ ಲೋಪ ಆರೋಪಿಗಳನ್ನು ಪ್ರತಿಪಕ್ಷಗಳು ಬೆಂಬಲಿಸುತ್ತಿವೆ’ : ಪ್ರಧಾನಿ ಮೋದಿ ವಾಗ್ದಾಳಿ

ದೆಹಲಿ, ಡಿ.19: ಸಂಸತ್ ಭದ್ರತಾ ಲೋಪ ವಿಚಾರವಾಗಿ ಪ್ರಧಾನಿ ಮೋದಿ (Narendra Modi) ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು. ಆರೋಪಿಗಳಿಗೆ ವಿರೋಧ ಪಕ್ಷಗಳ ಬೆಂಬಲವಿದೆ ಎಂದು ಆರೋಪಿಸಿದ ಅವರು, ಆರೋಪಿಗಳನ್ನು ಪ್ರತಿಪಕ್ಷಗಳು ಬೆಂಬಲಿಸುವುದು ಬಹಳ ಅಪಾಯಕಾರಿ. ಸಂಸತ್ತಿನ ಭದ್ರತೆಯ ಉಲ್ಲಂಘನೆಗೆ ಸಂಬಂಧಿಸಿದಂತೆ ಪ್ರತಿಪಕ್ಷಗಳ ವರ್ತನೆ ಸರಿಯಲ್ಲ. ಪ್ರತಿಪಕ್ಷಗಳ ವರ್ತನೆ ಬೇಸರ ಉಂಟುಮಾಡಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಪ್ರತಿಪಕ್ಷಗಳು ದೊಡ್ಡ ತಪ್ಪು ಮಾಡುತ್ತಿದ್ದಾರೆ. ಕೋಪ ಮತ್ತು ಹತಾಶೆಯಿಂದ ಪ್ರತಿಪಕ್ಷಗಳು ದೊಡ್ಡ ತಪ್ಪು ಮಾಡುತ್ತಿವೆ. ಕೆಲವು ಹಿರಿಯ ಅಸ್ವಸ್ಥ […]
ಲೋಕಸಭೆ ಭದ್ರತಾ ಲೋಪ : ಸಂಕಷ್ಟಕ್ಕೀಡಾದ ಮನೋರಂಜನ್ ಕುಟುಂಬಸ್ಥರು

ಮೈಸೂರು, ಡಿ.16: ಲೋಕಸಭೆ ಕಲಾಪದ ವೇಳೆ ಭದ್ರತಾ ಲೋಪ (Parliament Security Breach) ಪ್ರಕರಣಕ್ಕೆ ಸಂಬಂಧಿಸಿ ಮೈಸೂರಿನ ವಿಜಯನಗರದಲ್ಲಿರುವ ಆರೋಪಿ ಮನೋರಂಜನ್ (D Manoranjan) ಕುಟುಂಬಸ್ಥರಿಗೆ ಈಗ ಸಂಕಷ್ಟ ಎದುರಾಗಿದೆ. ಶುಕ್ರವಾರವಷ್ಟೇ ಅವರ ಮನೆಗೆ ತೆರಳಿ ಪರಿಶೀಲನೆ ನಡೆಸಿ ಮಾಹಿತಿ ಕಲೆ ಹಾಕಿದ್ದ ಗುಪ್ತಚರ ಇಲಾಖೆ ಅಧಿಕಾರಿಗಳು, ಇದೀಗ ಮೈಸೂರು ಬಿಟ್ಟು ಎಲ್ಲೂ ತೆರಳದಂತೆ ಕುಟುಂಬಸ್ಥರಿಗೆ ಸೂಚನೆ ನೀಡಿದ್ದಾರೆ. ನಮ್ಮ ಸೂಚನೆ ಬರುವವರೆಗೂ ಮೈಸೂರಿನಿಂದ ಹೊರಗಡೆ ತೆರಳಬೇಡಿ. ತೀರಾ ತುರ್ತು ಇದ್ದರೆ ನಮ್ಮ ಗಮನಕ್ಕೆ ತಂದು ಅನುಮತಿ […]